For Quick Alerts
ALLOW NOTIFICATIONS  
For Daily Alerts
 

RR vs KKR: ಪ್ರಮುಖ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟಿದ್ದಾರೆ ಇತ್ತಂಡಗಳ ಆಟಗಾರರು!

IPL 2022, match 47, KKR vs RR: Players records and approaching milestones

ಐಪಿಎಲ್ 15ನೇ ಆವೃತ್ತಿಯಲ್ಲಿ ಸೋಮವಾರ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಸತತ ಸೋಲಿನಿಂದ ಆಘಾತಕ್ಕೆ ಒಳಗಾಗಿರುವ ಕೆಕೆಆರ್ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನ ಆರಂಭಿಸಿದೆ. ಸತತ ಐದು ಸೋಲು ಕಂಡಿರುವ ಶ್ರೇಯಸ್ ಐಯ್ಯರ್ ಪಡೆ ಆರ್‌ಆರ್ ವಿರುದ್ಧ ಗೆಲುವು ಸಾಧಿಸಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.

ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮುನ್ನುಗ್ಗುತ್ತಿದೆ. ಆದರೆ ಕೊನೆಯ ಪಂದ್ಯದಲ್ಲಿ ಸಂಜು ಪಡೆ ಮುಂಬೈ ಇಂಡಿಯನ್ಸ್ ವಿರುದ್ಧ ಅನುಭವಿಸಿದ ಸೋಲು ತಂಡಕ್ಕೆ ಆಘಾತ ನೀಡಿದೆ. ಹೀಗಾಗಿ ಮತ್ತೆ ಗೆಲುವಿನ ಓಟ ಮುಂದುವರಿಸುವ ಆತ್ಮ ವಿಶ್ವಾಸದಲ್ಲಿದೆ ರಾಜಸ್ಥಾನ್ ರಾಯಲ್ಸ್ ತಂಡ.

ಈ ಪಂದ್ಯದಲ್ಲಿ ಎರಡೂ ತಂಡಗಳ ಕೆಲ ಆಟಗಾರರು ವಿಶೇಷ ಮೈಲಿಗಲ್ಲು ನೆಡಲು ಸಜ್ಜಾಗಿದ್ದಾರೆ.

*ಜೋಸ್ ಬಟ್ಲರ್: ಈ ಬಾರಿಯ ಆವೃತ್ತಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಇಂಗ್ಲೆಂಡ್ ಮೂಲದ ಆಟಗಾರ ಜೋಸ್ ಬಟ್ಲರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 8000 ರನ್‌ಗಳಿಸುವ ಅವಕಾಶ ಜೋಸ್ ಬಟ್ಲರ್‌ಗೆ ಇದೆ. ಇದಕ್ಕಾಗಿ ಬಟ್ಲರ್ 99 ರನ್‌ಗಳನ್ನು ಗಳಿಸಬೇಕಿದೆ. ಇನ್ನು ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 700 ಬೌಂಡರಿಗಳಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು 14 ಬೌಂಡರಿ ಗಳಿಸಬೇಕಿದೆ. 350 ಸಿಕ್ಸರ್ ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲು 5 ಸಿಕ್ಸರ್ ಬಾರಿಸಬೇಕಿದೆ.

*ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 400 ಬೌಂಡರಿ ಗಳಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು 5 ಬೌಂಡರಿ ಗಳಿಸಬೇಕಿದೆ.

*ಶ್ರೇಯಸ್ ಐಯ್ಯರ್: ಐಪಿಎಲ್‌ನಲ್ಲಿ 100 ಸಿಕ್ಸರ್ ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲು ಶ್ರೇಯಸ್ ಐಯ್ಯರ್ ಐದು ದೊಡ್ಡ ಹೊಡೆತಗಳನ್ನು ಬಾರಿಸಬೇಕಿದೆ.

*ಆಂಡ್ರೆ ರಸ್ಸೆಲ್: ಐಪಿಎಲ್‌ನಲ್ಲಿ 2000 ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲು ಆಂಡ್ರೆ ರಸೆಲ್ 2000 73 ರನ್‌ಗಳನ್ನು ಗಳಿಸಬೇಕಿದೆ.

*ಸುನಿಲ್ ನರೈನ್: ಕೆಕೆಆರ್ ಆಲ್‌ರೌಂಡರ್ ಸುನಿಲ್ ನರೈನ್ ಐಪಿಎಲ್‌ನಲ್ಲಿ 1000 ರನ್ ಪೂರೈಸಲು 19 ರನ್‌ಗಳನ್ನು ಗಳಿಸಬೇಕಿದೆ.

*ಕೆಕೆಆರ್ ತಂಡದ ಅನುಭವಿ ಆಟಗಾರ ಮೊಹಮ್ಮದ್ ನಬಿ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 5000 ರನ್‌ ಪೂರೈಸಲು 4 ರನ್‌ಗಳ ಅಗತ್ಯವಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಕೊಲ್ಕತ್ತಾ ನೈಟ್ ರೈಡರ್ಸ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್

Story first published: Monday, May 2, 2022, 17:53 [IST]
Other articles published on May 2, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+