
ಐಪಿಎಲ್ 15ನೇ ಆವೃತ್ತಿಯಲ್ಲಿ ಎರಡು ಪ್ರಮುಖ ತಂಡಗಳಾದ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮಂಗಳವಾರ ಮುಖಾಮುಖಿಯಾಗಲಿದೆ. ಎರಡೂ ತಮಡಗಳು ಕೂಡ ಐಪಿಎಲ್‌ನಲ್ಲಿ ಒಂದೊಂದು ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಹಿನ್ನಲೆಯಿದೆ. ರಾಜಸ್ಥಾನ್ ರಾಯಲ್ಸ್ ಆರಂಭಿಕ ಆವೃತ್ತಿಯಲ್ಲಿ ಮಾತ್ರವೇ ಚಾಂಪಿಯನ್ ಆಗಿದ್ದರೆ ಸನ್‌ರೈಸರ್ಸ್ ಹೈದರಾಬಾದ್ 2016ರಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು. ಹೀಗಾಗಿ ಸುದೀರ್ಘ ಕಾಲದಿಂದ ಈ ಎರಡೂ ತಂಡಗಳು ಟ್ರೋಫಿಗಾಗಿ ಎದುರು ನೋಡುತ್ತಿದೆ. ಈ ಬಾರಿಯ ಟೂರ್ನಿಯಲ್ಲಿಯೂ ಮೊದಲ ಪಂದ್ಯ ಗೆದ್ದು ಶುಭಾರಂಭ ಂಆಡಲು ತಂಡಗಳು ಹಾತೊರೆಯುತ್ತಿದೆ.
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವವನ್ನು ಸಂಜು ಸ್ಯಾಮ್ಸನ್ ವಹಿಸಿಕೊಂಡಿದ್ದರೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವದ ಕೇನ್ ವಿಲಿಯಮ್ಸನ್ ಹೆಗಲೇರಿದೆ. ಈ ಇಬ್ಬರು ನಾಯಕರು ಕೂಡ ಮೊದಲ ಪಂದ್ಯದಲ್ಲಿ ಗೆಲುವಿನ ಮೂಲಕ ಟೂರ್ನಿಯಲ್ಲಿ ಅಭಿಯಾನ ಆರಂಭಿಸುವ ತವಕ ಹೊಂದಿದ್ದಾರೆ.
ಸ್ಕ್ವಾಡ್‌ಗಳು: ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ,
ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್,
ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಪಂದ್ಯದ ಸಮಯ ಹಾಗೂ ಸ್ಥಳ: ರಾಜಸ್ಥಾನ್ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮಾರ್ಚ್ 29 ಮಂಗಳವಾರದಂದು ನಡೆಯಲಿದೆ. ಪುಣೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್: ಪುಣೆ ಪಿಚ್ ಹೆಚ್ಚು ಬೌನ್ಸಿಯಾಗಿರಲಿದ್ದು ಬ್ಯಾಟರ್‌ಗಳಿಗೆ ಹೆಚ್ಚಿನ ನೆರವು ದೊರೆಯುವ ನಿರೀಕ್ಷೆಯಿದೆ. ಆರಂಭದಲ್ಲಿ ಬೌಲರ್‌ಗಳಿಗೆ ನೆರವು ನೀಡಿದರೂ ನಂತರ ಬ್ಯಾಟರ್‌ಗಳ ಪರವಾಗಿರಲಿದೆ. ಹೂಗಾಗಿ ಬೃಹತ್ ಮೊತ್ತದ ಕಾದಾಟವನ್ನು ಮಂಗಳವಾರ ಈ ಎರಡು ತಂಡಗಳ ಮಧ್ಯೆ ನಿರೀಕ್ಷಿಸಬಹುದಾಗಿದೆ.
ಸಂಭಾವ್ಯ ತಂಡಗಳು
ಸನ್ ರೈಸರ್ಸ್ ಹೈದರಾಬಾದ್: ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್ / ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ರಿಯಾನ್ ಪರಾಗ್, ಜೇಮ್ಸ್ ನೀಶಮ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ