For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022, ಸನ್‌ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ XI

IPL 2022: Match 5, Sunrisers Hyderabad vs Rajasthan Royals, Toss Report and Playing XI

ಐಪಿಎಲ್‌ನಲ್ಲಿ ಇಂದು ಐದನೇ ಪಂದ್ಯ ನಡೆಯುತ್ತಿದ್ದು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಆರಂಭದಲ್ಲಿ ಬ್ಯಾಟಿಂಗ್ ನಡೆಸಲಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ಸಂಜು ಸ್ಯಾಮ್ಸನ್ ವಹಿಸಿಕೊಂಡಿದ್ದಾರೆ.

2008ರ ಉದ್ಘಾಟನಾ ಆವೃತ್ತಿಯ ಚಾಂಪಿಯನ್ ತಂಡವಾಗಿರುವ ರಾಜಸ್ಥಾನ್ ರಾಯಲ್ಸ್ ನಂತರ 13 ಆವೃತ್ತಿಗಳಲ್ಲಿ ಒಮ್ಮೆಯೂ ಟ್ರೋಫಿ ಗೆಲ್ಲಲು ವಿಫಲವಾಗಿದೆ. ಆದರೆ ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ಟ್ರೆಂಟ್ ಬೋಲ್ಟ್ ಹಾಗೂ ಯುಜುವೇಂದ್ರ ಚಾಹಲ್ ಅವರಂತಾ ಆಟಗಾರರನ್ನು ಹೊಂದಿದ್ದು ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ 2016ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಬಳಿಕ ಮತ್ತೊಮ್ಮೆ ಆ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಅದರಲ್ಲೂ ಕಳೆದ ಆವೃತ್ತಿಯಲ್ಲಿ ಹಯದರಾಬಾದ್ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಹೀಗಾಗಿ ಈ ಬಾರಿ ಮೆಗಾ ಆಕ್ಷನ್‌ನಲ್ಲಿ ಉತ್ತಮ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ್ದು ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬ ಎಂಬುದು ಕುತೂಹಲ ಮೂಡಿಸಿದೆ

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನಾಥನ್ ಕೌಲ್ಟರ್-ನೈಲ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ

RCB ಹಾಗು KKR ಪಂದ್ಯದ ಮೇಲೆ ಎಲ್ಲರ ಕಣ್ಣು| RCB vs KKR preview| Oneindia Kannada

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್

Story first published: Tuesday, March 29, 2022, 19:34 [IST]
Other articles published on Mar 29, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+