RCB vs KKR Preview : ಯಾವ ಆಟಗಾರರು ಕಣಕ್ಕಿಳಿಯಲಿದ್ದಾರೆ, ನೇರಪ್ರಸಾರ ಯಾವ ಚಾನೆಲ್‌ನಲ್ಲಿ?

ವಿಶ್ವದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಟೂರ್ನಿ ಎಂದು ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮರಳಿ ಬಂದಿದ್ದು, ಟೂರ್ನಿಯ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂಬೈನ ಡಾ, ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ. ಇನ್ನು ಇತ್ತಂಡಗಳೂ ಈ ಬಾರಿಯ ಟೂರ್ನಿಯಲ್ಲಿ ತಮ್ಮ ಚೊಚ್ಚಲ ಪಂದ್ಯಗಳನ್ನು ಆಡಿ ಮುಗಿಸಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಚೊಚ್ಚಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನು ಕಂಡಿದೆ.
ಹೀಗೆ ತನ್ನ ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತ ದಾಖಲಿಸಿದ ಹೊರತಾಗಿಯೂ ಸೋತಿರುವ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲ್ಲುವುದರ ಮೂಲಕ ಗೆಲುವಿನ ಖಾತೆ ತೆರೆಯುವುದರ ಜತೆಗೆ ಕಳೆದ ಬಾರಿ ಎಲಿಮಿನೇಟರ್ ಸುತ್ತಿನಲ್ಲಿ ತಮ್ಮನ್ನು ಸೋಲಿಸಿದ್ದ ಇದೇ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. ಹೀಗೆ ಕುತೂಹಲ ಸೃಷ್ಟಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದ ಕುರಿತಾದ ಮಾಹಿತಿ, ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಇತ್ತಂಡಗಳ ಸಂಭಾವ್ಯ ಆಡುವ ಬಳಗ, ಪಿಚ್ ವರದಿ ಹಾಗೂ ನೇರಪ್ರಸಾರದ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಪಿಚ್ ವರದಿ
ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಹೆಚ್ಚು ರನ್ ಹೊಳೆ ಹರಿಯುವಂತಹ ಪಿಚ್ ಆಗಿರಲಿಲ್ಲ. ಪಿಚ್ ತುಸು ಹೆಚ್ಚು ಹುಲ್ಲಿನಿಂದ ಕೂಡಿರುವ ಕಾರಣ ಸ್ಪಿನ್ ಬೌಲರ್‌ಗಳಿಗೆ ಇದು ಕಠಿಣವಾದ ಪಿಚ್ ಆಗಿ. ಆದರೆ, ಕಳೆದ ಭಾನುವಾರದಂದು ಇದೇ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳೂ ಇನ್ನೂರರ ಗಡಿ ದಾಟಿದ್ದು ಈ ಪಿಚ್‌ನ ಟ್ರೆಂಡ್ ಬದಲಾಗಿದೆ.

ಸಂಭಾವ್ಯ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ


ನೇರಪ್ರಸಾರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಈ ಪಂದ್ಯವನ್ನು ದೂರದರ್ಶನದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಹಾಗೂ ಈ ಪಂದ್ಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲೂ ಸಹ ನೇರ ಪ್ರಸಾರವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications