
ಐಪಿಎಲ್ 15ನೇ ಆವೃತ್ತಿಯಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಎರಡೂ ತಂಡಗಳಿಗೂ ಈ ಪಂದ್ಯ ಎರಡನೇ ಮುಖಾಮುಖಿಯಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದರೆ ಆರ್‌ಸಿಬಿ ಬೃಹತ್ ಮೊತ್ತವನ್ನು ಗಳಿಸಿದ ಹೊರತಾಗಿಯೂ ತಮ್ಮ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿ ಆಘಾತ್ಕಕೆ ಒಳಗಾಯಿತು.
ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ಎರಡನೇ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಖಾತೆ ತೆರೆಯುವ ಪ್ರಯತ್ನ ನಡೆಸಲಿದೆ. ಆದರೆ ಕೆಕೆಆರ್ ತಂಡ ಸಾಕಷ್ಟು ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿದ್ದು ಆರ್‌ಸಿಬಿಗೆ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವಿಲ್ಲ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎರಡೂ ತಂಡಗಳಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.
ಸ್ಕ್ವಾಡ್‌ಗಳು: ಆರ್‌ಸಿಬಿ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್(ನಾಯಕ), ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫಾನ್ ರುದರ್‌ಫೋರ್ಡ್, ಜೇಸನ್ ಬೆಹ್ರೆಂಡ್, ಜೇಸನ್ ಬೆಹ್ರಾಯ್ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್
ಕೆಕೆಆರ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.
ಪಂದ್ಯದ ಸಮಯ ಹಾಗೂ ಸ್ಥಳ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಮಾರ್ಚ್ 30 ಬುಧವಾರದಂದು ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್: ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಹಿಂದಿನ ಪಂದ್ಯದಲ್ಲಿ ಎರಡೂ ತಂಡಗಳು ಕೂಡ 200ರ ಗಡಿ ದಾಟಿದೆ. ಆರ್‌ಸಿಬಿ ಬೃಹತ್ ಮೊತ್ತ ಗಳಿಸಿದನ್ನು ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿ ಬೆನ್ನಟ್ಟಲು ಯಶಸ್ವಿಯಾಗಿತ್ತು. ಹಿಗಾಗಿ ಮತ್ತೊಂದು ಹೈಸ್ಕೋರ್ ಪಂದ್ಯ ನಡೆದರೆ ಅಚ್ಚರಿಯಿಲ್ಲ. ಪಿಚ್ ಹಸಿರಿನಿಂದ ಕೂಡಿದ್ದ ಸ್ಪಿನ್ನರ್‌ಗಳಿಗೆ ನೆರವು ನೀಡುವ ಸಾಧ್ಯತೆ ಕಡಿಮೆಯಿದೆ. ಆದರೆ ವೇಗಿಗಳಿಗೆ ಈ ಪಿಚ್ ಲಾಭದಾಯಕವಾಗಿರಲಿದೆ.
ಸಂಭಾವ್ಯ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ಅನುಜ್ ರಾವತ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ಕೋಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ