CSK vs LSG Preview : ಯಾವ ಆಟಗಾರರು ಕಣಕ್ಕಿಳಿಯಲಿದ್ದಾರೆ, ನೇರಪ್ರಸಾರ ಯಾವ ಚಾನೆಲ್‌ನಲ್ಲಿ?

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದು, ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಿದ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಆ ಪಂದ್ಯದಲ್ಲಿ ಸೋಲುವ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಇತ್ತ ಈ ಬಾರಿಯ ಟೂರ್ನಿಯ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಾನಾಡಿದ ಪ್ರಥಮ ಪಂದ್ಯದಲ್ಲಿ ಮತ್ತೊಂದು ನೂತನ ತಂಡ ಗುಜರಾತ್ ಟೈಟನ್ಸ್ ವಿರುದ್ಧ ಸೋಲನ್ನು ಅನುಭವಿಸಿದೆ. ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿನ ತಮ್ಮ ಮೊದಲ ಪಂದ್ಯಗಳಲ್ಲಿಯೇ ಸೋಲನ್ನು ಕಂಡಿರುವ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯ ಲೀಗ್ ಹಂತದ ಏಳನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳ ನಡುವಿನ ಈ ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ ಈ ಕೆಳಕಂಡಂತಿದೆ.

ಪಂದ್ಯದ ಮಾಹಿತಿ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಈ ಪಂದ್ಯ ಮಾರ್ಚ್ 31ರ ಗುರುವಾರ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಿಚ್ ವರದಿ: ಮುಂಬೈನ ಬ್ರಬೌರ್ನ್ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸಹಾಯ ಮಾಡುತ್ತದೆ ಮತ್ತು ಸ್ಪಿನ್ನರ್‌ಗಳಿಗೆ ಹೆಚ್ಚು ಸುಲಭವಾದ ಮೇಲ್ಮೈಯನ್ನು ಒದಗಿಸುವ ಪಿಚ್ ಇದಾಗಿದೆ. ಹಾಗೂ ಈ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡುವ ತಂಡ 160-170ರ ಆಸುಪಾಸಿನಲ್ಲಿ ರನ್ ಕಲೆಹಾಕಲಿದೆ.
ಸಂಭಾವ್ಯ ಆಡುವ ಬಳಗಗಳು
ಚೆನ್ನೈ ಸೂಪರ್ ಕಿಂಗ್ಸ್: ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್
ಲಕ್ನೋ ಸೂಪರ್ ಜೈಂಟ್ಸ್: ಎವಿನ್ ಲೆವಿಸ್, ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಮನೀಶ್ ಪಾಂಡೆ, ದೀಪಕ್ ಹೂಡಾ, ದುಷ್ಮಂತ ಚಮೀರಾ, ಮೊಹ್ಸಿನ್ ಖಾನ್, ಆಯುಷ್ ಬದೋನಿ, ರವಿ ಬಿಷ್ಣೋಯ್, ಅವೇಶ್ ಖಾನ್
ನೇರಪ್ರಸಾರ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಈ ಪಂದ್ಯವನ್ನು ದೂರದರ್ಶನದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಹಾಗೂ ಈ ಪಂದ್ಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲೂ ಸಹ ನೇರ ಪ್ರಸಾರವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications