For Quick Alerts
ALLOW NOTIFICATIONS  
For Daily Alerts
 

KKR vs PBKS Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022, Match 8, KKR Vs PBKS Preview, Predicted Playing 11, Pitch Report, And Weather Forecast

ಐಪಿಎಲ್ 15ನೇ ಆವೃತ್ತಿಯಲ್ಲಿ ಶುಕ್ರವಾರ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಇದು ಮೂರನೇ ಮುಖಾಮುಖಿಯಾಗಿದ್ದರೆ ಪಂಜಾಬ್ ಕಿಂಗ್ಸ್‌ಗೆ ಎರಡನೇ ಹಣಾಹಣಿಯಾಗಿದೆ. ಕೆಕೆಆರ್ ತಂಡ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಹಾಗೂ ಗೆಲುವಿನ ರುಚಿ ಕಂಡಿದ್ದು ಆರ್‌ಸಿಬಿ ವಿರುದ್ಧಧ ಸೋಲಿನ ನಂತರ ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನ ನಡೆಸಲಿದೆ. ಇತ್ತ ಪಂಜಾಬ್ ಕಿಂಗ್ಸ್ ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಬೃಹತ್ ಮೊತ್ತವನ್ನು ಬೆನ್ನಟ್ಟಿ ಗೆಲುವು ಸಾಧಿಸಿದ್ದು ಈ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ.

ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಹೆಚ್ಚಿನ ಆಟಗಾರರು ಉತ್ತಮ ಲಯದಲ್ಲಿದ್ದಾರೆ. ಇದೇ ಪ್ರದರ್ಶನವನ್ನು ಕೆಕೆಆರ್ ವಿರುದ್ಧದ ಪಂದ್ಯದಲ್ಲಿಯೂ ಮುಂದುವರಿಸಿಕೊಂಡು ಹೋಗುವ ಗುರಿಯಲ್ಲಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಬ್ಯಾಟರ್‌ಗಳ ಕಳಪೆ ಪ್ರದರ್ಶನ ನಾಯಕ ಶ್ರೇಯಸ್ ಐಯ್ಯರ್ ಅವರ ಚಿಂತೆ ಹೆಚ್ಚಿಸಿದೆ. ಶೀಘ್ರವಾಗಿ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ

ಸ್ಕ್ವಾಡ್‌ಗಳು: ಪಿಬಿಕೆಎಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

ಕೆಕೆಆರ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.

IPL 2022, Match 8, KKR Vs PBKS Preview, Predicted Playing 11, Pitch Report, And Weather Forecast

ಪಂದ್ಯದ ಸಮಯ ಹಾಗೂ ಸ್ಥಳ: ಪಂಜಾಬ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 1 ಬುಧವಾರದಂದು ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್: ವಾಂಖೆಡೆ ಸ್ಟೇಡಿಯಂ ಹೈಸ್ಕೋರಿಂಗ್ ತಾಣ ಎಂಬುದರಲ್ಲಿ ಅನುಮಾನವಿಲ್ಲ. ಈ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚಿನ ಅನುಕೂಲವನ್ನು ನೀಡಲಿದೆ. ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಅನುಕೂಲಗಳು ಸಿಗಲಿದೆ.

ಸಂಭಾವ್ಯ ಪ್ಲೇಯಿಂಗ್ XI: ಕೆಕೆಆರ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಶೆಲ್ಡನ್ ಜಾಕ್ಸನ್ (ವಿಕೆ), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಶಾರುಖ್ ಖಾನ್, ಓಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಸಂದೀಪ್ ಶರ್ಮಾ, ರಾಹುಲ್ ಚಾಹರ್

Story first published: Thursday, March 31, 2022, 18:00 [IST]
Other articles published on Mar 31, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+