Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RR Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022, Match 9, MI Vs RR Preview, Predicted Playing XI, Pitch Report, And Weather Forecast

ಶನಿವಾರ ಐಪಿಎಲ್‌ನಲ್ಲಿ ಡಬಲ್ ಹೆಡ್ಡರ್ ನಡೆಯಲಿದೆ. ಟೂರ್ನಿಯ 9ನೇ ಪಂದ್ಯ ಹಾಗೂ ದಿನದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಕದನ ಕುತೂಹಲ ಕೆರಳಿಸಿದೆ. ಈ ಎರಡೂ ತಂಡಗಳಿಗೂ ಇದು ಎರಡನೇ ಪಂದ್ಯವಾಗಿರಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಮೊದಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಐಪಿಎಲ್ ಟೂರ್ನಿಯ ಯಶಸ್ವೀ ತಂಡವೆನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯವನ್ನು ಈ ಬಾರಿ ಕೂಡ ಸೋಲಿನೊಂದಿಗೆ ಆರಂಭಿಸಿದ್ದು ಎರಡನೇ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳುವ ಗುರಿಯಿಟ್ಟುಕೊಂಡಿದೆ.

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಸ್ಪೋಟಕ ಆಟಗಾರರ ಪಡೆಯನ್ನು ಹೊಂದಿದ್ದು ಬಹುತೇಕ ಆಟಗಾರರು ಉತ್ತಮ ಲಯದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ನೀಡಿದ ಪ್ರದರ್ಶನವನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿಯೂ ಮುಂದುವರಿಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ. ಇತ್ತ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆರಂಭಿಕ ಆಟಗಾರರು ಉತ್ತಮ ಲಯದಲ್ಲಿದ್ದರೂ ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಈ ಹಿಂದಿನ ಪಂದ್ಯದಲ್ಲಿ ಬರಲಿಲ್ಲ. ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ವಿಭಾಗ ಕೂಡ ಮೊದಲ ಪಂದ್ಯದಲ್ಲಿ ಪರಿಣಾಮಕಾರಿಯಾಗಿರಲಿಲ್ಲ.

ಸ್ಕ್ವಾಡ್‌ಗಳು: ಮುಂಬೈ ಇಂಡಿಯನ್ಸ್ ಪೂರ್ಣ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಮಯಾಂಕ್ ಮಾರ್ಕಾಂಡೆ, ಜಸ್ಪ್ರೀತ್ ಬುಮ್ರಾ, ಅನ್ಮೋಲ್‌ಪ್ರೀತ್ ಸಿಂಗ್, ಫ್ಯಾಬಿಯನ್ ಅಲೆನ್, ಕೀರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಅರ್ಜುನ್ ತೆಂಡೂಲ್ಕರ್, ಡೇನಿಯಲ್ ಸಾಮ್ಸ್, ಜಯದೇವ್ ಉನಾದ್ಕತ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ, ಆರ್ಯನ್ ಜುಯಲ್, ಡೆವಾಲ್ಡ್ ಬ್ರೆವಿಸ್, ಸಂಜಯ್ ಯಾದವ್, ರಿಲೆ ಮೆರೆಡಿತ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್

ರಾಜಸ್ಥಾನ್ ರಾಯಲ್ಸ್ ಪೂರ್ಣ ತಂಡ: ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನಾಥನ್ ಕೌಲ್ಟರ್-ನೈಲ್, ಜೋಸ್ ಬಟ್ಲರ್, ಅನುನಯ್ ಸಿಂಗ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ನವದೀಪ್ ಸೈನಿ, ಕರುಣ್ ನಾಯರ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್, ಒಬೆದ್ ಮೆಕಾಯ್, ಕೆಸಿ ಕಾರಿಯಪ್ಪ, ತೇಜಸ್ ಬರೋಕಾ, ಜೇಮ್ಸ್ ನೀಶಮ್, ಕುಲದೀಪ್ ಯಾದವ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್

ಪಂದ್ಯದ ಸಮಯ ಹಾಗೂ ಸ್ಥಳ: ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 2 ಶನಿವಾರ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ ನಡೆಯಲಿದ್ದು 3:30ಕ್ಕೆ ಪಂದ್ಯ ಆರಂಭವಾಗಲಿದೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್: ವಾಂಖೆಡೆ ಸ್ಟೇಡಿಯಂ ಹೈಸ್ಕೋರಿಂಗ್ ತಾಣ ಎಂಬುದರಲ್ಲಿ ಅನುಮಾನವಿಲ್ಲ. ಈ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚಿನ ಅನುಕೂಲವನ್ನು ನೀಡಲಿದೆ. ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಅನುಕೂಲಗಳು ಸಿಗಲಿದೆ.

ರಾಜಸ್ಥಾನ್ ಪ್ಲೇಯಿಂಗ್ XI: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನಾಥನ್ ಕೌಲ್ಟರ್-ನೈಲ್, ಯುಜ್ವೇಂದ್ರ ಚಹಾಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೆಸಿಲ್ ಥಂಪಿ

Story first published: Friday, April 1, 2022, 16:06 [IST]
Other articles published on Apr 1, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+