For Quick Alerts
ALLOW NOTIFICATIONS  
For Daily Alerts
 

MI vs RR: ರೋಚಕ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ರಾಜಸ್ಥಾನ್ ರಾಯಲ್ಸ್

IPL 2022, Match 9, MI vs RR: Rajasthan Royals beat Mumbai Indians by 23 runs

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಸಾಕಷ್ಟು ಏರಿಳಿತಗಳನ್ನು ಕಂಡು ಅಂತ್ಯವಾಗಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ 23 ರನ್‌ಗಳಿಂದ ಭರ್ಜರಿಯಾಗಿ ಗೆಲುವು ಸಾಧಿಸಿದ್ದು ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಸತತ ಎರಡನೇ ಸೋಲು ಅನುಭವಿಸಿದೆ.

ಜೋಸ್ ಬಟ್ಲರ್ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಬೃಹತ್ ಗುರಿ ನಿಗದಿಪಡಿಸಿತ್ತು. ನಿಗದಿತ 30 ಓವರ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 193 ರನ್‌ಗಳಿಸಿತು. ಇದನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಅದ್ಭುತ ಹೋರಾಟವನ್ನು ಪ್ರದರ್ಶಿಸಿತು. ಇಶಾನ್ ಕಿಶನ್ ಹಾಗೂ ತಿಲಕ್ ವರ್ಮ ಅವರ ಅದ್ಭುತ ಬ್ಯಾಟಿಂಗ್‌ನ ಹೊರತಾಗಿಯೂ ಇತರ ಬ್ಯಾಟರ್‌ಗಳಿಂದ ಉತ್ತಮ ಸಾಥ್ ದೊರೆಯದ ಕಾರಣ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ 23 ರನ್‌ಗಳ ಅಂತರದ ಸೋಲು ಅನುಭವಿಸಿದೆ.

IPL 2022, Match 9, MI vs RR: Rajasthan Royals beat Mumbai Indians by 23 runs

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಜೋಸ್ ಬಟ್ಲರ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಆರ್‌ಆರ್ ತಂಡದ ಬೃಹತ್ ಮೊತ್ತಕ್ಕೆ ಕಾರಣವಾದರು. ಜೋಸ್ ಬಟ್ಲರ್ ಭರ್ಜರಿ ಶತಕವನ್ನು ಸಿಡಿ ಮಿಂಚಿದ್ದಾರೆ. ಆರಂಭಿಕರಾಗಿ ಕಣಕ್ಕಿಳಿದ ಬಟ್ಲರ್ 68 ಎಸೆತಗಳನ್ನು ಎದುರಿಸಿ ಭರ್ತಿ 100 ರನ್‌ಗಳಿಸಿ ಔಟಾದರು.

ಬಟ್ಲರ್ ಹೊರತುಪಡಿಸಿ ನಾಯಕ ಸಂಜು ಸ್ಯಾಮ್ಸನ್ 30 ರನ್ ಗಳಿಸಿದರೆ ಶಿಮ್ರಾಮ್ ಹೇಟ್ಮೇಯರ್ 35 ರನ್‌ಗಳಿಸಿ ತಂಡದ ಮೊತ್ತ ಹೆಚ್ಚಿಸಲು ಕಾರಣವಾದರು. ಉಳಿದೆಲ್ಲಾ ಆಟಗಾರರು ಒಂದಂಕಿಗೆ ಔಟಾಗಿದ್ದಾರೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 193 ರನ್‌ಗಳಿಸಿ ಇನ್ನಿಂಗ್ಸ್ ಮುಗಿಸಿತು.

ಇದನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ನಾಯಕ ರೋಹಿತ್ ಶರ್ಮಾ ಶೀಘ್ರವಾಗಿ ವಿಕೆಟ್ ಕಳೆದುಕೊಂಡರು. ಅನ್ಮೋಲ್‌ಪ್ರೀತ್ ಸಿಂಗ್ ಕೂಡ ಐದು ರನ್‌ಗಳ ಕೊಡುಗೆ ನೀಡಿ ವಿಕೆಟ್ ಒಪ್ಪಿಸಿದರು. ಆದರೆ ಇಶಾನ್ ಕಿಶನ್ ಹಾಗೂ ತಿಲಕ್ ವರ್ಷ ಅದ್ಭುತ ಜೊತೆಯಾಟವೊಂದನ್ನು ನೀಡಿ ಗೆಲುವಿನ ವಿಶ್ವಾಸ ಮೂಡಿಸಿದರು. ಆದರೆ 54 ರನ್‌ಗಳಿಸಿದ್ದ ಇಶಾನ್ ಕಿಶನ್ ನವ್‌ದೀಪ್ ಸೈನಿ ಹಿಡಿದ ಅದ್ಭುತ ಕ್ಯಾಚ್‌ಗೆ ಔಟ್ ಆಡುವ ಮೂಲಕ ಈ ಜೋಡಿ ಬೇರ್ಪಟ್ಟಿತು. ನಂತರ ತಿಲಕ್ ವರ್ಮ ಕೂಡ ಆರ್ ಅಶ್ವಿನ್ ಎಸೆತದಲ್ಲಿ ಬೌಲ್ಡ್ ಆಗುವ ಮೂಲಕ 61 ರನ್‌ಗಳಿಗೆ ತಮ್ಮ ಹೋರಾಟವನ್ನು ಅಂತ್ಯಗೊಳಿಸಿದರು.

ನಂತರ ಸ್ಪೋಟಕ ದಾಂಡಿಗ ಕಿರಾನ್ ಪೊಲಾರ್ಡ್ ಮೇಲೆ ಸಾಕಷ್ಟು ನಿರೀಕ್ಷೆಗಳು ಇತ್ತಾದರೂ ಆರ್‌ಆರ್ ಬೌಲಿಂಗ್ ಪಡೆಯ ಮುಂದೆ ಪೊಲಾರ್ಡ್ ಆಟ ನಡೆಯಲಿಲ್ಲ. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 170 ರನ್‌ಗಳಿಸಿ ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ 23 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಮುಂಬೈ ಇಂಡಿಯನ್ಸ್ ಆಡುವ ಬಳಗ:

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅನ್ಮೋಲ್‌ಪ್ರೀತ್ ಸಿಂಗ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ
ಬೆಂಚ್: ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಡೆವಾಲ್ಡ್ ಬ್ರೆವಿಸ್

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ನವದೀಪ್ ಸೈನಿ, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್

ಬೆಂಚ್: ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ಓಬೇದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್, ನಾಥನ್ ಕೌಲ್ಟರ್-ನೈಲ್

Story first published: Saturday, April 2, 2022, 23:50 [IST]
Other articles published on Apr 2, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+