Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RR Toss Update: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

IPL 2022: match 9, Mumbai Indians vs Rajasthan Royals toss report and playing XI

ಐಪಿಎಲ್ 15ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಎರಡೂ ತಂಡಗಲಿಗೂ ಈ ಪಂದ್ಯ ಎರಡನೇ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದರೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ನವದೀಪ್ ಸೈನಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದು ನಾಥನ್ ಕೌಲ್ಟರ್‌ನೈಲ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ.

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಸಾಕಷ್ಟು ಏರಿಳಿತಗಳನ್ನು ಕಂಡು ಅಂತ್ಯವಾಗಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ 23 ರನ್‌ಗಳಿಂದ ಭರ್ಜರಿಯಾಗಿ ಗೆಲುವು ಸಾಧಿಸಿದ್ದು ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಸತತ ಎರಡನೇ ಸೋಲು ಅನುಭವಿಸಿದೆ.

ಜೋಸ್ ಬಟ್ಲರ್ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಬೃಹತ್ ಗುರಿ ನಿಗದಿಪಡಿಸಿತ್ತು. ನಿಗದಿತ 30 ಓವರ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 193 ರನ್‌ಗಳಿಸಿತು. ಇದನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಅದ್ಭುತ ಹೋರಾಟವನ್ನು ಪ್ರದರ್ಶಿಸಿತು. ಇಶಾನ್ ಕಿಶನ್ ಹಾಗೂ ತಿಲಕ್ ವರ್ಮ ಅವರ ಅದ್ಭುತ ಬ್ಯಾಟಿಂಗ್‌ನ ಹೊರತಾಗಿಯೂ ಇತರ ಬ್ಯಾಟರ್‌ಗಳಿಂದ ಉತ್ತಮ ಸಾಥ್ ದೊರೆಯದ ಕಾರಣ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ 23 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅನ್ಮೋಲ್‌ಪ್ರೀತ್ ಸಿಂಗ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ

ತಾವು ಗೆದ್ರೂ ಪಂಜಾಬ್ ಟೀಂನ್ನು ಹಾಡಿಹೊಗಳಿದ ಶ್ರೇಯಸ್ | Oneindia Kannada

ಬೆಂಚ್: ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಡೆವಾಲ್ಡ್ ಬ್ರೆವಿಸ್

IPL 2022: match 9, Mumbai Indians vs Rajasthan Royals toss report and playing XI

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ನವದೀಪ್ ಸೈನಿ, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್

ಬೆಂಚ್: ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ಓಬೇದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್, ನಾಥನ್ ಕೌಲ್ಟರ್-ನೈಲ್

Story first published: Saturday, April 2, 2022, 21:01 [IST]
Other articles published on Apr 2, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+