ಐಪಿಎಲ್ 2022: ತನ್ನ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ ಗುಜರಾತ್ ಟೈಟನ್ಸ್: ಮ್ಯಾಥ್ಯೂ ಹೇಡನ್ ಮೆಚ್ಚುಗೆ

ಈ ಬಾರಿಯ ಟೂರ್ನಿಯ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿರುವ ಗುಜರಾತ್ ಟೈಟನ್ಸ್ ಅದ್ಭುತ ಪ್ರದರ್ಶನ ನೀಡಿದೆ. ಈ ಪ್ರದರ್ಶನದಿಂದಾಗಿ ಎಲ್ಲರ ಚಿತ್ತ ಕುಡ ಗುಜರಾತ್ ಟೈಟನ್ಸ್ ತಮಡದ ಮೇಲೆ ಬಿದ್ದಿದೆ. ಕ್ರಿಕೆಟ್ ಪಂಡಿತರು ತಂಡದ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಮ್ಯಾಥ್ಯೂ ಹೇಡನ್ ಕೂಡ ಜಿಟಿ ತಂಡದ ಪ್ರದರ್ಶನದ ಬಗ್ಗೆ ವಿಶೇಷ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.
ಹಾರ್ದಿಕ್ ಪಾಂಡ್ಯ ನೇತೃತ್ವ ಜಿಟಿ ತಂಡ ಮೊದಲ ಮೂರು ಪಂದ್ಯಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಏಕೈಕ ತಂಡವೆನಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಪಡೆದ ಪಂದ್ಯದಲ್ಲಿ 189 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ಗೆದ್ದ ಪಾಂಡ್ಯ ಬಳಗ ತಾನೆಷ್ಟು ಬಲಿಷ್ಠ ಎಂಬುದನ್ನು ಸಾರಿ ಹೇಳಿದೆ. ಈ ಪಂದ್ಯದ ಬಳಿಕ ಮ್ಯಾಥ್ಯೂ ಹೇಡನ್ ಗುಜರಾತ್ ಟೈಟನ್ಸ್ ತಂಡವನ್ನು ಪ್ರಶಂಸಿಸಿದರು. ಗುಜರಾತ್ ಟೈಟನ್ಸ್ ತಂಡ ತನ್ನ ಅತ್ಯುತ್ತಮ ಫಾರ್ಮ್‌ನಲ್ಲಿದೆ ಎಂದಿದ್ದಾರೆ ಹೇಡನ್. ಅಲ್ಲದೆ ಯುವ ಆಟಗಾರ ಶುಬ್ಮನ್ ಗಿಲ್ ಅವರ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
"ನಿಮ್ಮ ತಂಡದಷ್ಟೇ ಉತ್ತಮವಾದ ಪ್ರದರ್ಶನವನ್ನು ನೀವು ನೀಡಬಹುದು. ಅವರು ತಮ್ಮ ಆಟದ ಅತ್ಯುತ್ತಮ ಸ್ಥಾನದಲಕ್ಲಿದ್ದಾರೆ. ಶುಬ್ಮನ್ ಗಿಲ್ ಅಗ್ರ ಕ್ರಮಾಂಕದಲ್ಲಿ ಪಂದ್ಯವನ್ನು ಅತ್ಯುತ್ತಮ ರೀತಿಯಲ್ಲಿ ನಿಯಂತ್ರಿಸುತ್ತಿದ್ದಾರೆ. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯ ಅವರಿಂದಲೂ ಉತ್ತಮ ಕೊಡುಗೆಗಳು ಬರುತ್ತಿದೆ. ಎಲ್ಲಾ ತಂಡಗಳು ಕೂಡ ಮಣಿಸಲು ಬಯಸುತ್ತಿರುವ ತಂಡದಂತೆ ಟೈಟನ್ಸ್ ತಂಡ ಭಾಸವಾಗುತ್ತಿದೆ. ಈ ತಂಡವನ್ನು ಹೇಗೆ ಮಣಿಸಬಹುದು ಎಂದು ಲೆಕ್ಕಾಚಾರವನ್ನು ನಡೆಸುತ್ತಿದೆ. ಅವರು ನಿಜಕ್ಕೂ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ" ಎಂದು ಮ್ಯಾಥ್ಯೂ ಹೇಡನ್ ಹೇಳಿದ್ದಾರೆ.
ಇನ್ನು ಇದೇ ಮೊದಲ ಬಾರಿಗೆ ಐಪಿಎಲ್ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಅತ್ಯುತ್ತಮ ರೀತಿಯನ್ನು ಮುನ್ನಡೆಸುತ್ತಿದ್ದಾರೆ. ಸ್ಥಳೀಯ ಹಾಗೂ ವಿದೇಶಿ ಆಟಗಾರರನ್ನು ಉತ್ತಮ ರೀತಿಯಲ್ಲಿ ಪೊಆಂಡ್ಯ ಬಳಸಿಕೊಳ್ಳುತ್ತಿದ್ದಾರೆ. ಸ್ವತಃ ನಾಯಕ ಪಾಂಡ್ಯ ಗಾಯದ ಕಾರಣದಿಂದಾಗಿ ಕೆಲ ತಿಂಗಳುಗಳ ಕಾಲ ಕ್ರಿಕೆಟ್‌ನಿಮದ ದೂರವುಳಿದಿದ್ದರು. ಇಗ ಅವರು ಅತ್ಯುತ್ತಮ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಿದ್ದಾರೆ.
ಗುಜರಾತ್ ಟೈಟನ್ಸ್ ತಂಡ ತಮ್ಮ ಚೊಚ್ಚಲ ಪಂದ್ಯದಲ್ಲಿಯೇ ಲಕ್ನೋ ಸೂಪರ್ ಜೈಂಟ್ಸ್ ತಂಡ್ ವಿರುದ್ಧ ಗೆದ್ದಿದ್ದು ನಂತರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತ್ತು. ಹೀಗಾಗಿ ಎಲ್ಲಾ ತಮಡಗಳು ಕೂಡ ಜಿಟಿ ತಂಡವನ್ನು ಮಣಿಸಲುವ ಲೆಕ್ಕಾಚಾರವನ್ನು ನಡೆಸುತ್ತಿದೆ. ಜಿಟಿ ತಂಡದ ಸಾಕಷ್ಟು ಬಲಿಷ್ಠವಗಿದ್ದು ಸ್ಪೂರ್ತಿಯಿಂದ ಕೂಡಿದೆ ಎಂದಿದ್ದಾರೆ ಮ್ಯಾಥ್ಯೂ ಹೇಡನ್.
ಇನ್ನು ಸೋಮವಾರ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದಿದೆ ಹಾರ್ದಿಕ್ ಪಾಂಡ್ಯ ಪಡೆ.
ಗುಜರಾತ್ ಟೈಟನ್ಸ್ ಸ್ಕ್ವಾಡ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications