RCB vs DC: ಮುಗ್ಗರಿಸಿದ ಆರ್‌ಸಿಬಿಗೆ ಮ್ಯಾಕ್ಸಿ ಆಸರೆ, ಮತ್ತೆ ಅಬ್ಬರಿಸಿದ ಡಿಕೆ; ಡೆಲ್ಲಿಗೆ 190 ರನ್‌ಗಳ ಗುರಿ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸುತ್ತಿವೆ.
ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದ್ದು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 190 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಫಾಫ್ ಡು ಪ್ಲೆಸಿಸ್ ಮತ್ತು ಅನುಜ್ ರಾವತ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಡುವಲ್ಲಿ ಮತ್ತೊಮ್ಮೆ ವಿಫಲರಾಗಿದ್ದಾರೆ. ಅನುಜ್ ರಾವತ್ ಮೊದಲನೇ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕೌಟ್ ಆದರೆ, ನಾಯಕ ಫಾಫ್ ಡು ಪ್ಲೆಸಿಸ್ 8 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು ಹಾಗೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟ್ ಆದರು. ಹೀಗೆ ಆರಂಭಿಕ ಆಘಾತಕ್ಕೆ ಒಳಗಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಸರೆಯಾದದ್ದು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್.
34 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್‌ವೆಲ್ 7 ಬೌಂಡರಿ ಮತ್ತು 2 ಸಿಕ್ಸರ್ ಸೇರಿದಂತೆ 55 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ತಂಡದ ಮತ್ತೋರ್ವ ಆಟಗಾರ ಸುಯಶ್ ಪ್ರಭುದೇಸಾಯಿ 6 ರನ್ ಕಲೆ ಹಾಕಿದರು. ಆರಂಭಿಕ ಆಘಾತವನ್ನು ಅನುಭವಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಸರೆಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಔಟ್ ಆದಾಗ ತಂಡ 11.2 ಓವರ್‌ಗಳಲ್ಲಿ 92 ರನ್ ಕಲೆಹಾಕಿ 5 ವಿಕೆಟ್‍ಗಳನ್ನು ಕಳೆದುಕೊಂಡಿತ್ತು. ಹಾಗೂ ಈ ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದೊಡ್ಡ ಮೊತ್ತವನ್ನೇನು ಕಲೆಹಾಕುವುದಿಲ್ಲ ಎಂಬ ಅಭಿಪ್ರಾಯಗಳೂ ಸಹ ವ್ಯಕ್ತವಾಗಿದ್ದವು.
ಆದರೆ ಈ ಅಭಿಪ್ರಾಯಗಳನ್ನು ಹುಸಿಗೊಳಿಸಿದ ದಿನೇಶ್ ಕಾರ್ತಿಕ್ 34 ಎಸೆತಗಳಲ್ಲಿ ಅಜೇಯ 66 ರನ್ ಚಚ್ಚುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೃಹತ್ ಮೊತ್ತ ಕಲೆಹಾಕುವಲ್ಲಿ ದೊಡ್ಡ ಪಾತ್ರ ನಿರ್ವಹಿಸಿದರು. 5 ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿದ ದಿನೇಶ್ ಕಾರ್ತಿಕ್ ಎದುರಾಳಿ ತಂಡದ ಮುಸ್ತಫಿಜರ್ ರಹಮಾನ್ ಎಸೆದ 18ನೇ ಓವರ್ ಒಂದರಲ್ಲಿಯೇ 28 ರನ್ ಕಲೆಹಾಕಿ ಅಬ್ಬರಿಸಿದರು. ಇನ್ನು ದಿನೇಶ್ ಕಾರ್ತಿಕ್ ಜತೆ ಕೈಜೋಡಿಸಿ ವಿಕೆಟ್ ಕಳೆದುಕೊಳ್ಳದೇ ಸಾಥ್ ನೀಡಿದ ಶಹಬಾಜ್ ಅಹ್ಮದ್ 21 ಎಸೆತಗಳಲ್ಲಿ 32 ರನ್ ಕಲೆಹಾಕಿ ಅಜೇಯರಾಗಿ ಉಳಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ವಿಕೆಟ್ ಕೀಪರ್/ ನಾಯಕ), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications