ಪಂಜಾಬ್ ಕಿಂಗ್ಸ್‌ಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕ: ಅಧಿಕೃತ ಘೋಷಣೆ ಮಾಡಿದ ಫ್ರಾಂಚೈಸಿ

ಐಪಿಎಲ್‌ನ ಪ್ರಮುಖ ಫ್ರಾಂಚೈಸಿಗಳಲ್ಲಿ ಒಂದಾಗಿರುವ ಪಂಜಾಬ್ ಕಿಂಗ್ಸ್ ಮುಂದಿನ ಐಪಿಎಲ್ 2022ರ ಆವೃತ್ತಿಗೆ ಕಡೆಗೂ ತನ್ನ ನಾಯಕನನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಕೆಎಲ್ ರಾಹುಲ್ ತೊರೆದಿದ್ದ ಸ್ಥಾನ ಮತ್ತೋರ್ವ ಕನ್ನಡಿಗನ ಪಾಲಾಗಿದ್ದು ಮಯಾಂಕ್ ಅಗರ್ವಾಲ್ ಮುಂದಿನ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಮೂಲಕ ಈ ವಿಚಾರವಾಗಿ ಅಭಿಮಾನಿಗಳಲ್ಲಿದ್ದ ಕುತೂಹಲಗಳಿಗೆ ತೆರೆಬಿದ್ದಿದೆ.
ಈ ಬಾರಿಯ ಹರಾಜು ಪ್ರಕ್ರಿಯೆಗೂ ಮುನ್ನ ಈ ಹಿಂದಿನ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯುವ ನಿರ್ಧಾರ ಮಾಡಿದ್ದರು. ಹೀಗಾಗಿ ರೀಟೆನ್ಶನ್ ಸಂದರ್ಭದಲ್ಲಿ ಪಂಜಾಬ್ ಕಿಂಗ್ಸ್ ಕೆಎಲ್ ರಾಹುಲ್ ಅವರನ್ನು ಬಿಡುಗಡೆಗೊಳಿಸಿತ್ತು. ನಂತರ ಹರಾಜಿಗೂ ಮುನ್ನ ನೂತನ ಫ್ರಾಂಚೈಸಿ ಕೆಎಲ್ ರಾಹುಲ್ ಜೊತೆಗೆ ಒಪ್ಪಂದವನ್ನು ಮಾಡಿಕೊಂಡು ತನ್ನ ನಾಯಕನನ್ನಾಗಿ ಘೋಷಣೆ ಮಾಡಿತ್ತು. ಹೀಗಾಗಿ ಕೆಎಲ್ ರಾಹುಲ್ ಈ ಬಾರಿಯ ಆವೃತ್ತಿಯಲ್ಲಿ ಲಕ್ನೋ ತಂಡವನ್ನು ಮುನ್ನಡೆಸಲಿದ್ದಾರೆ.

ಕಡೆಗೂ ನಾಯಕನನ್ನು ಘೋಷಣೆ ಮಾಡಿದ ಪ್ರಾಂಚೈಸಿ
ಈ ಮಧ್ಯೆ ಪಂಜಾಬ್ ಕಿಂಗ್ಸ್ ತಂಡವನ್ನು ಈ ಬಾರಿಯ ಆವೃತ್ತಿಯಲ್ಲಿ ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗಳು ಕೂಡ ಹುಟ್ಟಿಕೊಂಡಿತ್ತು. ಮಯಾಂಕ್ ಅಗರ್ವಾಲ್ ನಾಯಕನಾಗುವ ಸಾಧ್ಯತೆಯಿದೆ ಎಂಬ ಬಗ್ಗೆ ಆರಂಭದಿಂದಲೇ ಮಾತುಗಳು ಕೇಳಿಬಂದಿದ್ದರೂ ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ನಂತರ ಹರಾಜಿನಲ್ಲಿ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಂಡ ಬಳಿಕ ಅನುಭವಿ ಧವನ್ ಕೂಡ ನಾಯಕತ್ವದ ರೇಸ್‌ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಪಂಜಾಬ್ ಕಿಂಗ್ಸ ಫ್ರಾಂಚೈಸಿ ಮಯಾಂಕ್ ಅಗರ್ವಾಲ್ ಅವರನ್ನು ತಂಡದ ನಾಯಕ ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ.

ಕೋಚ್ ಕುಂಬ್ಳೆ ಪ್ರತಿಕ್ರಿಯೆ
ಇನ್ನು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಅವರನ್ನು ನೇಮಿಸಿರುವ ಬಗ್ಗೆ ಪಂಜಾಬ್ ಕಿಂಗ್ಸ್ ತಂಡದ ಹೆಡ್ ಕೋಚ್ ಅನಿಲ್ ಕುಂಬ್ಳೆ ಪ್ರತಿಕ್ರಿಯೆ ನೀಡಿದ್ದಾರೆ. "ಮಯಾಂಕ್ ಅಗರ್ವಾಲ್ 2018ರಿಂದ ನಮ್ಮ ತಂಡದ ಭಾಗವಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಅವರು ನಾಯಕತ್ವದ ಗ್ರೂಪ್‌ನಲ್ಲಿದ್ದಾರೆ. ಇತ್ತೀಚೆಗೆ ಅಂತ್ಯಕಂಡ ಹರಾಜಿನಲ್ಲಿ ನಾವು ಆಯ್ಕೆ ಮಾಡಿದ ಹೊಸ ತಂಡ ಸಾಕಷ್ಟು ಯುವ ಪ್ರತಿಭೆಗಳು ಮತ್ತು ಅತ್ಯುತ್ತಮ ಅನುಭವಿ ಆಟಗಾರರನ್ನು ಹೊಂದಿದೆ. ಮಯಾಂಕ್ ತಂಡದ ಚುಕ್ಕಾಣಿ ಹಿಡಿಯುವ ಮೂಲಕ ನಾವು ಭವಿಷ್ಯಕ್ಕಾಗಿ ಬಲವಾದ ಅಡಿಪಾಯವನ್ನು ರಚಿಸಲು ಬಯಸುತ್ತೇವೆ. ಅವರು ಕಠಿಣ ಪರಿಶ್ರಮ ಹಾಗೂ ಉತ್ಸಾಹಿಯಾಗಿದ್ದು ನಾಯಕನಿಗೆ ಅಗತ್ಯವಿರುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಆಟಗಾರನಾಗಿದ್ದಾರೆ. ನಾಯಕನಾಗಿ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಈ ತಂಡವನ್ನು ಅವರು ಯಶಸ್ವಿಯಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸವನ್ನು ಹೊಂದಿದ್ದೇನೆ" ಎಂದು ಅನಿಲ್ ಕುಂಬ್ಳೆ ಪ್ರತಿಕ್ರಿಯೆ ನೀಡಿದ್ದಾರೆ.

ಹರ್ಷ ವ್ಯಕ್ತಪಡಿಸಿದ ಮಯಾಂಕ್
ಇನ್ನು ನಾಯಕನಾಗಿ ನೇಮಕವಾಗಿರುವ ಹಿನ್ನಲೆಯಲ್ಲಿ ಮಯಾಂಕ್ ಅಗರ್ವಾಲ್ ಪ್ರತಿಕ್ರಿಯೆ ನೀಡಿದ್ದು "ನಾನು ಪಂಜಾಬ್ ಕಿಂಗ್ಸ್ ತಂಡದಲ್ಲಿ 2018ರಿಂದ ಇದ್ದು ಈ ಅದ್ಭುತವಾದ ತಂಡವನ್ನು ಮುನ್ನಡೆಸಲು ಸಾಕಷ್ಟು ಹೆಮ್ಮೆ ಪಡುತ್ತೇನೆ. ಮುನ್ನಡೆಸಲು ಸಿಕ್ಕ ಅವಕಾಶದಿಂದ ನಾನು ಸಾಕಷ್ಟು ಉತ್ಸಾಹಗೊಂಡಿದ್ದೇನೆ. ನಾನು ಈ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ವಹಿಸಿಕೊಳ್ಳುತ್ತೇನೆ. ಈ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಸಾಕಷ್ಟು ಪ್ರತಿಭಾನ್ವಿತ ಆಟಗಾರರನ್ನು ಹೊಂದಿರುವ ಕಾರಣ ನನ್ನ ಕೆಲಸ ಸುಲಭವಾಗುತ್ತದೆ ಎಂದು ನಾನು ನಂಬುತ್ತೇನೆ" ಎಂದು ಮಯಾಂಕ್ ಅಗರ್ವಾಲ್ ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡ
ಮಯಾಂಕ್ ಅಗರ್ವಾಲ್, ಅರ್ಶ್‌ದೀಪ್ ಸಿಂಗ್, ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಓಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಬಾವಾ, ಪ್ರೀರಾಕ್ ಮಾನ್ಕಾ , ವೈಭವ್ ಅರೋರಾ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ನಾಥನ್ ಎಲ್ಲಿಸ್, ಅಥರ್ವ ತೈದೆ, ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications