MI vs PBKS: ಧವನ್, ಅಗರ್ವಾಲ್ ಅರ್ಧಶತಕ; ಮುಂಬೈ ಇಂಡಿಯನ್ಸ್‌ಗೆ 199 ರನ್ ಗುರಿ ನೀಡಿದ ಪಂಜಾಬ್

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ಸೋತು ಮುಖಭಂಗಕ್ಕೊಳಗಾಗಿದೆ. ಹೀಗೆ ಕೆಟ್ಟ ಆರಂಭವನ್ನು ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿನ ತನ್ನ ಐದನೇ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸುತ್ತಿದೆ. ಇತ್ತಂಡಗಳ ನಡುವಿನ ಈ ಪಂದ್ಯ ಟೂರ್ನಿಯ 23ನೇ ಪಂದ್ಯವಾಗಿದ್ದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಹಾಗೂ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡಿದ್ದು, ಮೊದಲು ಬ್ಯಾಟಿಂಗ್ ಮಾಡಿರುವ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 198 ರನ್ ಕಲೆಹಾಕಿ 199 ರನ್‌ಗಳ ಗುರಿಯನ್ನು ನೀಡಿದೆ.
ಪಂಜಾಬ್ ಕಿಂಗ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ 97 ರನ್‌ಗಳ ಅಮೂಲ್ಯ ಜತೆಯಾಟವಾಡಿದರು. ಮಯಾಂಕ್ ಅಗರ್ವಾಲ್ 52 ರನ್ ಗಳಿಸಿ ಔಟ್ ಆದರೆ, ಶಿಖರ್ ಧವನ್ 70 ರನ್ ಗಳಿಸಿ ಅಬ್ಬರಿಸಿದರು. ಇನ್ನುಳಿದಂತೆ ಜಾನಿ ಬೈರ್ ಸ್ಟೋ 12 ರನ್, ಲಿಯಾಮ್ ಲಿವಿಂಗ್ ಸ್ಟೋನ್ 2 ರನ್, ಶಾರುಖ್ ಖಾನ್ 15 ರನ್ ಮತ್ತು ಒಡಿಯನ್ ಸ್ಮಿತ್ ಅಜೇಯ 1 ರನ್ ಕಲೆ ಹಾಕಿದರೆ ಅಂತಿಮ ಹಂತದಲ್ಲಿ ಅಬ್ಬರಿಸಿದ ಜಿತೇಶ್ ಶರ್ಮಾ 15 ಎಸೆತಗಳಲ್ಲಿ ಅಜೇಯ 30 ರನ್ ಬಾರಿಸಿದರು.
ಹೀಗೆ ಆರಂಭದಲ್ಲಿ ಅಬ್ಬರಿಸಿ 210ಕ್ಕೂ ರನ್ ಕಲೆಹಾಕುವ ನಿರೀಕ್ಷೆಯನ್ನು ಮೂಡಿಸಿದ್ದ ಪಂಜಾಬ್ ಕಿಂಗ್ಸ್ ಮೊದಲ ವಿಕೆಟ್ ಕಳೆದುಕೊಂಡ ನಂತರ ರನ್ ಗಳಿಸುವ ವೇಗ ಕಳೆದುಕೊಂಡು 198 ರನ್ ಮಾತ್ರ ಕಲೆಹಾಕುವಲ್ಲಿ ಶಕ್ತವಾಗಿದೆ. ಮುಂಬೈ ಇಂಡಿಯನ್ಸ್ ಪರ ಬಸಿಲ್ ತಂಪಿ 2 ವಿಕೆಟ್ ಪಡೆದರೆ, ಜಯದೇವ್ ಉನಾದ್ಕತ್, ಜಸ್ ಪ್ರಿತ್ ಬುಮ್ರಾ ಮತ್ತು ಮುರುಗನ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಳಗಗಳು
ಮುಂಬೈ ಇಂಡಿಯನ್ಸ್ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಒಡಿಯನ್ ಸ್ಮಿತ್, ಶಾರುಖ್ ಖಾನ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications