ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಆರ್‌ಸಿಬಿ ನಾಯಕನ ಮೇಲೆ ಕೆಕೆಆರ್, ಪಂಜಾಬ್ ಕಣ್ಣು; ಈತನ ಮೇಲೆ ಹರಿಯಲಿದೆ ಹಣದ ಹೊಳೆ!

IPL 2022 Mega Auction: RCB, KKR and PBKS franchisees are in the race to buy Shreyas Iyer
IPL 2022 Exclusive: ಎಲ್ಲಾ ಒತ್ತಡದಿಂದ ಮುಕ್ತರಾದ Virat Kohli ಈಗ RCB ಗೆ ಮತ್ತೆ ಕ್ಯಾಪ್ಟನ್!! | Oneindia

ಈ ಬಾರಿ ನಡೆಯಲಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನವೇ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಟೂರ್ನಿಯಲ್ಲಿ ಟ್ರೋಫಿಗಾಗಿ ಹತ್ತು ತಂಡಗಳು ಸೆಣಸಾಣ ನಡೆಸಲಿವೆ.

ಕೊಹ್ಲಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಪಂದ್ಯವನ್ನು ಬೇಡ ಎಂದು ತಡೆದದ್ದು ಇವರೇ!ಕೊಹ್ಲಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಪಂದ್ಯವನ್ನು ಬೇಡ ಎಂದು ತಡೆದದ್ದು ಇವರೇ!

ಹೌದು, ಕಳೆದ ವರ್ಷ ನಡೆದ ಫ್ರಾಂಚೈಸಿಗಳ ಹರಾಜು ಪ್ರಕ್ರಿಯೆಯಲ್ಲಿ ಲಕ್ನೋ ಮತ್ತು ಅಹ್ಮದಾಬಾದ್ ನೂತನ ಫ್ರಾಂಚೈಸಿಗಳಾಗಿ ಹೊರಹೊಮ್ಮಿದ್ದು, ಈ ಬಾರಿಯ ಟೂರ್ನಿಯಲ್ಲಿ ನೂತನ ತಂಡಗಳಾಗಿ ಕಣಕ್ಕಿಳಿಯುತ್ತಿವೆ. ಹೀಗೆ ಟೂರ್ನಿಗೆ ನೂತನ ತಂಡಗಳು ಸೇರ್ಪಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಟೂರ್ನಿ ಆರಂಭವಾಗುವ ಮುನ್ನ ಕಡ್ಡಾಯವಾಗಿ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯನ್ನು ನಡೆಸಲೇಬೇಕಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ರಿಟೆನ್ಷನ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮಗೆ ಅಗತ್ಯವಿರುವ ಆಟಗಾರರನ್ನು ( ಗರಿಷ್ಠ 4 ) ರಿಟೈನ್ ಮಾಡಿಕೊಂಡು ಉಳಿದ ಆಟಗಾರರನ್ನು ಮೆಗಾ ಹರಾಜಿಗೆ ಕೈಬಿಟ್ಟಿವೆ.

ಪ್ರೋ ಕಬಡ್ಡಿ ಲೀಗ್ 8: 10 ಪಂದ್ಯಗಳು ಮುಗಿದರೂ ಒಂದೇ ಒಂದು ಗೆಲುವನ್ನೂ ಕಾಣದೇ ಮಂಕಾದ ತಂಡವಿದುಪ್ರೋ ಕಬಡ್ಡಿ ಲೀಗ್ 8: 10 ಪಂದ್ಯಗಳು ಮುಗಿದರೂ ಒಂದೇ ಒಂದು ಗೆಲುವನ್ನೂ ಕಾಣದೇ ಮಂಕಾದ ತಂಡವಿದು

ಇನ್ನು ರಿಟೆನ್ಷನ್ ಪ್ರಕ್ರಿಯೆಯಲ್ಲಿ ತಮ್ಮ ಫ್ರಾಂಚೈಸಿಗಳಿಂದ ರಿಟೈನ್ ಆಗದೇ ಹೊರಬಿದ್ದ ಆಟಗಾರರ ಪೈಕಿ ನಾಯಕತ್ವದ ಜವಾಬ್ದಾರಿಯನ್ನು ಹೊತ್ತುಕೊಂಡು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಬಲ್ಲಂಥ ಸಾಮರ್ಥ್ಯವಿರುವ ಆಟಗಾರರು ಕೂಡ ಇದ್ದಾರೆ. ಹೌದು, ಕೆಎಲ್ ರಾಹುಲ್, ಡೇವಿಡ್ ವಾರ್ನರ್ ಹಾಗೂ ಶ್ರೇಯಸ್ ಅಯ್ಯರ್ ಸೇರಿದಂತೆ ಹಲವಾರು ನಾಯಕತ್ವದ ಸಾಮರ್ಥ್ಯವಿರುವ ಆಟಗಾರರು ರೀಟೈನ್ ಆಗದೇ ಹೊರಬಿದ್ದಿದ್ದು, ಇದೀಗ ಈ ಆಟಗಾರರ ಮೇಲೆ ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಲಕ್ನೋ ಮತ್ತು ಅಹಮದಾಬಾದ್ ಫ್ರಾಂಚೈಸಿಗಳ ಕಣ್ಣು ಕೂಡ ಬಿದ್ದಿದೆ. ಅತ್ತ ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ತ್ಯಜಿಸಿರುವುದರಿಂದ ಇದೀಗ ಮೆಗಾ ಹರಾಜಿನಲ್ಲಿ ನಾಯಕತ್ವದ ಸಾಮರ್ಥ್ಯವಿರುವ ಆಟಗಾರನನ್ನು ಖರೀದಿಸುವ ಯೋಜನೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೆ.

ಆತ ಇದ್ದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿತ್ತು ಎಂದ ನೆಟ್ಟಿಗರುಆತ ಇದ್ದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿತ್ತು ಎಂದ ನೆಟ್ಟಿಗರು

ಮೊದಲಿಗೆ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ರಾಹುಲ್ ಲಕ್ನೋ ತಂಡದ ನಾಯಕ ಆಗುತ್ತಿರುವುದರಿಂದ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸಿ ನಾಯಕ ಸ್ಥಾನವನ್ನು ನೀಡುವ ಯೋಜನೆಯಲ್ಲಿದೆ ಎಂಬುದನ್ನು ವರದಿಯೊಂದು ಬಹಿರಂಗಪಡಿಸಿದೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೆಗಾ ಹರಾಜಿನಲ್ಲಿ ನಾಯಕ ಸ್ಥಾನಕ್ಕಾಗಿ ಕಣ್ಣಿಟ್ಟಿರುವ ಶ್ರೇಯಸ್ ಅಯ್ಯರ್ ಮೇಲೆ ಇದೀಗ ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕೂಡ ಕಣ್ಣಿಟ್ಟಿವೆ ಎಂಬುದನ್ನು ವರಿದಿ ಬಹಿರಂಗಪಡಿಸಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಕಂಡಂತಿದೆ..

ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಮೇಲೆ ಹರಿಯಲಿದೆ ಹಣದ ಹೊಳೆ

ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಮೇಲೆ ಹರಿಯಲಿದೆ ಹಣದ ಹೊಳೆ

ಕೆಎಲ್ ರಾಹುಲ್ ಲಕ್ನೋ ತಂಡದ ಪಾಲಾಗುತ್ತಿರುವ ಹಿನ್ನೆಲೆಯಿಂದಾಗಿ ಇದೀಗ ಅಸ್ತಿತ್ವದಲ್ಲಿರುವ ನಾಯಕರಹಿತ ತಂಡಗಳು ಶ್ರೇಯಸ್ ಅಯ್ಯರ್ ಮೇಲೆ ಕಣ್ಣಿಡಲಿದ್ದು, ದೊಡ್ಡ ಮಟ್ಟದ ಹಣದ ಹೊಳೆ ಶ್ರೇಯಸ್ ಅಯ್ಯರ್ ಹರಾಜಿನಲ್ಲಿ ಹರಿಯಲಿದೆ. ಕೇವಲ ನಾಯಕನಾಗಿ ಮಾತ್ರವಲ್ಲದೇ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಮಿಂಚು ಹರಿಸಬಲ್ಲ ಆಟಗಾರನಾಗಿರುವ ಶ್ರೇಯಸ್ ಅಯ್ಯರ್ ಮೇಲೆ ಇತರೆ ಫ್ರಾಂಚೈಸಿಗಳು ಕೂಡ ಕಣ್ಣಿಟ್ಟಿರುವುದು ಸುಳ್ಳಲ್ಲ. ವಿಶೇಷವಾಗಿ ಶ್ರೇಯಸ್ ಅಯ್ಯರ್ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಹೆಚ್ಚು ಹರಾಜು ಕೂಗಲಿವೆ ಎಂಬುದನ್ನು ವರದಿಯೊಂದು ಬಿಚ್ಚಿಟ್ಟಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡ ಕೂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ನಾಯಕನ ಹುಡುಕಾಟದಲ್ಲಿದೆ ಎಂಬುದನ್ನು ವರದಿ ತಿಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್ ತಲುಪಿಸಿದ್ದ ಶ್ರೇಯಸ್ ಅಯ್ಯರ್

ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್ ತಲುಪಿಸಿದ್ದ ಶ್ರೇಯಸ್ ಅಯ್ಯರ್

ಇನ್ನು 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಆ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಆದರೆ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಸೋಲನ್ನು ಅನುಭವಿಸಿತ್ತು.

ಬ್ಯಾಟ್ಸ್‌ಮನ್‌ ಆಗಿ ಶ್ರೇಯಸ್ ಅಯ್ಯರ್ ಐಪಿಎಲ್ ಅಂಕಿ ಅಂಶ

ಬ್ಯಾಟ್ಸ್‌ಮನ್‌ ಆಗಿ ಶ್ರೇಯಸ್ ಅಯ್ಯರ್ ಐಪಿಎಲ್ ಅಂಕಿ ಅಂಶ

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಶ್ರೇಯಸ್ ಅಯ್ಯರ್ ಇದುವರೆಗೂ ಒಟ್ಟು 87 ಪಂದ್ಯಗಳನ್ನಾಡಿದ್ದು 2375 ರನ್ ಕಲೆಹಾಕಿದ್ದಾರೆ. ಈ ಪೈಕಿ 12 ಪಂದ್ಯಗಳಲ್ಲಿ ಅಜೇಯನಾಗಿ ಉಳಿದಿರುವ ಶ್ರೇಯಸ್ ಅಯ್ಯರ್ ಇನ್ನಿಂಗ್ ಒಂದರಲ್ಲಿ ಗರಿಷ್ಠ 96 ರನ್ ಗಳಿಸಿದ್ದು, 16 ಅರ್ಧಶತಕಗಳನ್ನು ಬಾರಿಸಿದ್ದಾರೆ.

Story first published: Monday, January 17, 2022, 23:53 [IST]
Other articles published on Jan 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X