IPL 2022: ಆರ್‌ಸಿಬಿ ಅಲ್ಲ ಈ 4 ತಂಡಗಳು ಪ್ಲೇಆಫ್ ಪ್ರವೇಶಿಸಲಿವೆ ಎಂದ ಮಾಜಿ ಕ್ರಿಕೆಟಿಗ!

ಜನಪ್ರಿಯ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನೈದನೇ ಆವೃತ್ತಿ ಇದೇ ಮಾರ್ಚ್ 26ರಿಂದ ಆರಂಭವಾಗಿದ್ದು, ಟೂರ್ನಿಯ ಚೊಚ್ಚಲ ಪಂದ್ಯದಲ್ಲಿಯೇ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲುವುದರ ಮೂಲಕ ಕೆಟ್ಟ ಆರಂಭ ಪಡೆದುಕೊಂಡಿದೆ. ಇತ್ತ ಐದು ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಕೂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುವುದರ ಮೂಲಕ ಕಳಪೆ ಆರಂಭ ಪಡೆದುಕೊಂಡಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿ ಬೃಹತ್ ಮೊತ್ತ ದಾಖಲಿಸಿದರೂ ಸಹ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸುವುದರ ಮೂಲಕ ಕೆಟ್ಟ ಆರಂಭವನ್ನು ಪಡೆದುಕೊಂಡಿದೆ.
ಹೀಗೆ ಪ್ರಮುಖ ತಂಡಗಳೇ ಟೂರ್ನಿಯ ಚೊಚ್ಚಲ ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಹಿನ್ನಡೆಯನ್ನು ಅನುಭವಿಸಿದ್ದು, ಇದರ ನಡುವಯೇ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಾವ ನಾಲ್ಕು ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿವೆ ಎಂಬ ಚರ್ಚೆಗಳನ್ನು ಆರಂಭಗೊಂಡಿವೆ. ಅದರಲ್ಲಿಯೂ ಈ ಬಾರಿ ಮೆಗಾ ಹರಾಜು ನಡೆದ ಕಾರಣ ವಿವಿಧ ತಂಡಗಳು ಹಲವಾರು ವಿಭಿನ್ನ ಆಟಗಾರರನ್ನು ಒಳಗೊಂಡಿದ್ದು, ಯಾವ ತಂಡ ಬಲಿಷ್ಠ ಮತ್ತು ಯಾವ ತಂಡ ಕಳಪೆ ಎಂಬುದನ್ನು ಅಳೆಯಲು ಇನ್ನೂ ಕೆಲ ಪಂದ್ಯಗಳು ನಡೆಯಬೇಕಾದ ಅಗತ್ಯವಿದೆ. ಹೀಗಿರುವಾಗಲೇ ಕೆಲ ಮಾಜಿ ಕ್ರಿಕೆಟಿಗರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾವ ತಂಡಗಳು ಯಶಸ್ವಿಯಾಗಿ ಪ್ಲೇಆಫ್ ತಲುಪಲಿವೆ ಎಂಬುದನ್ನು ಊಹಿಸುತ್ತಿದ್ದಾರೆ. ಇದೀಗ ಸ್ಟಾರ್ ಸ್ಫೋರ್ಟ್ಸ್ ಚಾನೆಲ್‌ನಲ್ಲಿ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾವ ತಂಡಗಳು ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಲಿವೆ ಎಂಬುದನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ಪ್ಲೇಆಫ್ ಪ್ರವೇಶಿಸಲಿರುವ ಮೊದಲ ಹಾಗೂ ಎರಡನೇ ತಂಡ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ ಪ್ರಥಮ ತಂಡ ಎಂದು ಸುನಿಲ್ ಗವಾಸ್ಕರ್ ಊಹಿಸಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿದ ಸುನಿಲ್ ಗವಾಸ್ಕರ್ ಕಳೆದ ಕೆಲ ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿರುವ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ ಎರಡನೇ ತಂಡವಾಗಲಿದೆ ಎಂದು ಸುನಿಲ್ ಗವಾಸ್ಕರ್ ಊಹಿಸಿದ್ದಾರೆ.

ಮೂರು ಮತ್ತು ನಾಲ್ಕನೇ ತಂಡ
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶ್ರೇಯಸ್ ಐಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ಲೇಆಫ್ ಪ್ರವೇಶಿಸಲಿರುವ ಮೂರನೇ ತಂಡ ಎಂದಿರುವ ಸುನಿಲ್ ಗವಾಸ್ಕರ್ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಪ್ರವೇಶಿಸಲಿರುವ ನಾಲ್ಕನೇ ತಂಡ ಎಂದು ಊಹಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಲ್ಲ ಸ್ಥಾನ
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಪ್ರವೇಶಿಸಲಿವೆ ಎಂದು ಊಹಿಸಿರುವ ಸುನಿಲ್ ಗವಾಸ್ಕರ್ ಈ ಬಾರಿಯ ಟೂರ್ನಿಯಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರನ್ನು ತೆಗೆದುಕೊಳ್ಳದೇ ಕಡೆಗಣಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications