MI vs CSK: ಐಪಿಎಲ್‌ನಲ್ಲಿ ಅತಿ ಕೆಟ್ಟ ದಾಖಲೆ ತನ್ನ ಹೆಸರಿಗೆ ಬರೆದ ರೋಹಿತ್ ಶರ್ಮಾ

ಐಪಿಎಲ್‌ನ 33ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಸಾಕಷ್ಟು ಏರಿಳಿತಗಳನ್ನು ಕಂಡ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ತೀವ್ರ ಪೈಪೋಟಿಯನ್ನು ನಡೆಸಿದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲಿ ಹೀನಾಯ ಪ್ರದರ್ಶನ ನೀಡಿದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕಳಪೆ ಫೀಲ್ಡಿಂಗ್‌ನ ಲಾಭವನ್ನು ಪಡೆದು ಸವಾಲಿನ ಗುರಿಯನ್ನು ನೀಡಿತ್ತು. ಹಾಗಿದ್ದರೂ ಮಾಜಿ ನಾಯಕ ಎಂಎಸ್ ಧೋನಿ ನೀಡಿದ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಮತ್ತೊಂದು ಸೋಲು ಅನುಭವಿಸಿದೆ
ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ಕಳಪೆ ಬ್ಯಾಟಿಂಗ್ ನಡೆಸಿದ್ದಾರೆ. ಮುಖೇಶ್ ಚೌಧರಿ ಎಸೆದ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿಯೇ ರೋಹಿತ್ ಶರ್ಮಾ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಮುಖೇಶ್ ಚೌಧರಿ ಎಸೆದ ಎಸೆತವನ್ನು ಮಿಡ್‌ಆನ್‌ನಲ್ಲಿದ್ದ ಮಿಚೆಲ್ ಸ್ಯಾಂಟ್ನರ್‌ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು ಶರ್ಮಾ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಕಳಪೆ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ ಮುಂಬೈ ಇಂಡಿಯನ್ಸ್ ನಾಯಕ.

14ನೇ ಬಾರಿ ಶೂನ್ಯಕ್ಕೆ ಔಟಾಗಿ ದಾಖಲೆ
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 14ನೇ ಬಾರಿಗೆ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡಂತಾಗಿದೆ. ಈ ಮೂಲಕ ಈ ಹಿಂದಿನ ದಾಖಲೆಯಿದ್ದ ಪಿಯೂಷ್ ಚಾವ್ಲಾ ಹಾಗೂ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಚಾವ್ಲಾ ಹಾಗೂ ಹರ್ಭಜನ್ ಸಿಂಗ್ ಮಾತ್ರವಲ್ಲದೆ ಮನ್‌ದೀಪ್ ಸಿಂಗ್ ಹಾಗೂ ಪಾರ್ಥಿವ್ ಪಟೇಲ್ ಕೂಡ ಈ ಟಾಪ್ 5 ಲಿಸ್ಟ್‌ಬಲ್ಲಿರುವ ಇತರ ಆಟಗಾರರಾಗಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಈ ಎಲ್ಲಾ ಆಟಗಾರರು ಕೂಡ ಐಪಿಎಲ್‌ನಲ್ಲಿ 13 ಬಾರಿ ಶೂನ್ಯಕ್ಕೆ ಔಟಾಗಿದ್ದರು. ರೋಹಿತ್ ಶರ್ಮಾ ಈಗ ಈ ಎಲ್ಲಾ ಆಟಗಾರರನ್ನು ಹಿಂದಿಕ್ಕಿದ್ದಾರೆ.

ತಲೆನೋವಾದ ರೋಹಿತ್ ಫಾರ್ಮ್
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಮೊದಲ ಐದು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಕನಿಷ್ಟ ಒಂದು ಅರ್ಧ ಶತಕವನ್ನು ಸಿಡಿಸಲು ಕೂಡ ವಿಫಲವಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಶೂನ್ಯಕ್ಕೆ ವಿಕೆಟ್ ಕಳೆದುಕೊಳ್ಳುವ ಮುನ್ನ ರೋಹಿತ್ ಶರ್ಮಾ 41, 10, 3, 26, 28 ಮತ್ತು 6 ರನ್‌ಗಳನ್ನು ಮಾತ್ರವೇ ಗಳಿಸಿದ್ದರು. ರೋಹಿತ್ ಶರ್ಮಾ ಅವರ ಈ ಕಳಪೆ ಪ್ರದರ್ಶನ ಈಗ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ಗೂ ತಲೆನೋವಾಗಿದೆ. ಮುಂದಿನ ಕೆಲ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿರುವುದು ಈ ತಲೆ ನೋವಿಗೆ ಕಾರಣವಾಗಿದೆ.

ಮುಂಬೈ ಇಂಡಿಯನ್ಸ್‌ಗೆ ಮತ್ತೊಂದು ಸೋಲು
ಇನ್ನು ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋಲು ಅನುಭವಿಸುವ ಮೂಲಕ ಟೂರ್ನಿಯಲ್ಲಿ ಸತತ ಏಳನೇ ಸೋಲು ಅನುಭವಿಸಿದೆ. ಈ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಒಂದು ಗೆಲುವು ಕೂಡ ಮುಂಬೈ ಇಂಡಿಯನ್ಸ್‌ಗೆ ಸಾಧ್ಯವಾಗಿಲ್ಲ. ಈ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಪ್ಲೇಆಫ್‌ಗೇರುವ ಅವಕಾಶವನ್ನು ಬಹುತೇಕ ಕಳೆದುಕೊಂಡಂತಾಗಿದೆ. ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದರೂ ಪ್ಲೇಆಫ್‌ಗೆ ಸ್ಥಾನ ಗಿಟ್ಟಿಸಿಕೊಳ್ಳುವುದು ಅಸಾಧ್ಯವೆನಿಸಿದೆ.

ಆಡುವ ಬಳಗ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ
ಬೆಂಚ್: ಫ್ಯಾಬಿಯನ್ ಅಲೆನ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಸಂಜಯ್ ಯಾದವ್, ಟಿಮ್ ಡೇವಿಡ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ರಾಹುಲ್ ಬುದ್ಧಿ, ಅರ್ಷದ್ ಖಾನ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ
ಬೆಂಚ್: ಮೊಯಿನ್ ಅಲಿ, ಕ್ರಿಸ್ ಜೋರ್ಡಾನ್, ತುಷಾರ್ ದೇಶಪಾಂಡೆ, ಹರಿ ನಿಶಾಂತ್, ಎನ್ ಜಗದೀಸನ್, ಡೆವೊನ್ ಕಾನ್ವೇ, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಮಥೀಶ ಪಥಿರಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications