ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: MI vs PBKS : ಸೋಲಿನ ಜೊತೆಗೆ ಮುಂಬೈ ಇಂಡಿಯನ್ಸ್‌ಗೆ ದಂಡದ ಬರೆ

IPL: 2022 : MI Skipper Rohit Sharma fined 24 lakh for Slow Over-rate

ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿರುವ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್ ಶರ್ಮಾ ಸೇರಿದಂತೆ 11 ಜನ ಸಹ ಆಟಗಾರರಿಗೆ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ.

ಬುಧವಾರ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಆಸೋಸಿಯೆಶನ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಓವರ್‌ರೇಟ್‌ಗಾಗಿ ನಾಯಕ ರೋಹಿತ್ ಶರ್ಮಾಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ತಂಡದ 10 ಉಳಿದ ಸದಸ್ಯರಿಗೆ ತಲಾ 6 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 25 ಪ್ರತಿಶತ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಆಯೋಜಕರು ತಿಳಿಸಿದ್ದಾರೆ.

ಮುಂಬೈ ತಂಡದ ವಿರುದ್ದ ನಡೆದ ಪ್ರಮುಖ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ನಾಯಕ ಮಯಾಂಕ್ ಅಗರ್ವಾಲ್ 32 ಎಸೆತಗಳಲ್ಲಿ 52 ರನ್ ಗಳಿಸಿದ್ರೆ, ಆರಂಭಿಕ ಆಟಗಾರ ಶಿಖರ್ ಧವನ್ 50 ಎಸೆತಗಳಲ್ಲಿ 70 ರನ್ ಗಳಿಸಿದರು. ಜಿತೇಶ್‌ ಶರ್ಮಾ 15 ಎಸೆತಗಳಲ್ಲಿ 30 ರನ್ ಗಳಿಸಿದರು. ಕಳಪೆ ಗುಣಮಟ್ಟದ ಬೌಲಿಂಗ್ ಪ್ರದರ್ಶನ ನೀಡಿದ ಮುಂಬೈ ತಂಡದ ಬೇಸಿಲ್‌ ತಂಪಿ, ನಾಲ್ಕು ಓವರ್್ಗಳಲ್ಲಿ 47 ರನ್ ನೀಡಿ 2 ವಿಕೆಟ್ ಪಡೆದ್ರೆ, ಉನಾದ್ಕಟ್ ನಾಲ್ಕು ಓವರ್‌ಗೆ 44 ರನ್ ನೀಡಿ ಒಂದು ವಿಕೆಟ್ ಪಡೆದರು.

IPL: 2022 : MI Skipper Rohit Sharma fined 24 lakh for Slow Over-rate

ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭ ಪಡೆಯಲು ವಿಫಲಗೊಂಡಿತು. ರೋಹಿತ್ 27, ಇಶಾನ್ ಕಿಶನ್ 3, ಡೆವಾಲ್ಡ್ ಬ್ರೆವಿಸ್ ಸ್ಫೋಟಕ 49 ರನ್, ತಿಲಕ್ ವರ್ಮ 36, ಸೂರ್ಯಕುಮಾರ್ ಯಾದವ್ 43 ರನ್‌ಗಳ ಜೊತೆಗೆ ಪೊಲಾರ್ಡ್‌ ಕ್ರೂಶಿಯಲ್ 10ರನ್‌ಗಳ ರನೌಟ್‌ನಿಂದಾಗಿ ಮುಂಬೈ ಇಂಡಿಯನ್ಸ್‌ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 186 ರನ್‌ಗಳಿಸಲಷ್ಟೇ ಶಕ್ತವಾಯಿತು.

ಪಂಜಾಬ್ ಕಿಂಗ್ಸ್ ಪರ ಅಂತಿಮ ಓವರ್ ಬೌಲಿಂಗ್ ಮಾಡಿದ ಓಡಿಯನ್ ಸ್ಮಿತ್ ಮೂರು ವಿಕೆಟ್ ಪಡೆಯುವ ಮೂಲಕ ಒಟ್ಟಾರೆ ಮೂರು ಓವರ್‌ಗೆ ನಾಲ್ಕು ವಿಕೆಟ್ ಪಡೆದರು. ಮಯಾಂಕ್ ನಾಯಕತ್ವದ ಪಂಜಾಬ್‌ 12 ರನ್‌ಗಳಿಂದ ಪಂದ್ಯ ಗೆದ್ದು ಬೀಗಿತು. ಐದು ಬಾರಿಯ ಚಾಂಪಿಯನ್ ಪಟ್ಟಕ್ಕೇರಿದ ಮುಂಬೈ 15ನೇ ಆವೃತ್ತಿಯಲ್ಲಿ ಐದು ಪಂದ್ಯಗಳಲ್ಲಿ ಸತತವಾಗಿ ಸೋತಿದ್ದು ಐಪಿಎಲ್ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Thursday, April 14, 2022, 13:26 [IST]
Other articles published on Apr 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X