ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs DC: ಆರ್‌ಸಿಬಿಯ ಭವಿಷ್ಯ ನಿರ್ಧರಿಸುವ ಪಂದ್ಯ: ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ XI

IPL 2022: MI vs DC Preview, Playing 11, Weather Forecast and Pitch Report details

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತದ ಅಂತಿಮ ಎರಡ್ಮೂರು ಪಂದ್ಯಗಳು ಮಾತ್ರವೇ ಬಾಕಿಯಿದ್ದು ಶನಿವಾರ ನಡೆಯುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಈಗಾಗಲೇ ಲೀಗ್ ಹಂತದಿಂದ ಹೊರಬಿದ್ದಿದ್ದು ಈ ಪಂದ್ಯದ ಫಲಿತಾಂಶ ಯಾವುದೇ ರೀತಿಯಲ್ಲೂ ತಂಡದ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಅನಿವಾರ್ಯತೆಯಿದ್ದು ಗೆದ್ದರೆ ಮಾತ್ರವೇ ಪ್ಲೇಆಫ್ ಹಂತಕ್ಕೇರುವ ಅವಕಾಶ ದೊರೆಯಲಿದೆ.

ಇನ್ನು ಈ ಬಾರಿಯ ಐಪಿಎಲ್‌ನ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಆಡಿ ಮುಗಿಸಿರುವ ಆರ್‌ಸಿಬಿ ತಂಡಕ್ಕೂ ಶನಿವಾರದ ಈ ಪಂದ್ಯ ಬಹಳ ಮುಖ್ಯವಾಗಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್‌ ಗೆದ್ದರೆ ಪ್ಲೇಆಫ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಳ್ಳಲಿದೆ. ಹೀಗಾಗಿ ಫಾಫ್ ಪಡೆ ಲೀಗ್‌ಹಂತದಿಂದಲೇ ಹೊರಬೀಳಬೇಕಾಗುತ್ತದೆ. ಹೀಗಾಗಿ ಆರ್‌ಸಿಬಿ ಅಭಿಮಾನಿಗಳು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗಾಗಿ ಬೆಂಬಲ ನೀಡಲಿದ್ದಾರೆ.

IPL 2022ರ ಪ್ಲೇಆಫ್ ಅರ್ಹತೆ ಸನ್ನಿವೇಶ ಹೇಗಿದೆ?; DC ವಿರುದ್ಧ MI ಗೆಲ್ಲಲು RCB ಅಭಿಮಾನಿಗಳ ಪ್ರಾರ್ಥನೆIPL 2022ರ ಪ್ಲೇಆಫ್ ಅರ್ಹತೆ ಸನ್ನಿವೇಶ ಹೇಗಿದೆ?; DC ವಿರುದ್ಧ MI ಗೆಲ್ಲಲು RCB ಅಭಿಮಾನಿಗಳ ಪ್ರಾರ್ಥನೆ

ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯವನ್ನು ಗೆದ್ದರೆ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ ತಂಡಗಳು ಸಮಾನ ಅಂಕಗಳನ್ನು ಗಳಿಸಿಕೊಂಡಂತಾಗುತ್ತದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ನೆಟ್‌ ರನ್‌ರೇಟ್‌ನಲ್ಲಿ ಆರ್‌ಸಿಬಿ ತಂಡಕ್ಕಿಂತ ಭಾರೀ ಮುಂದಿದ್ದು ಇದು ಡೆಲ್ಲಿ ತಂಡದ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ.

ಈ ನಿರ್ಣಾಯಕ ಪಂದ್ಯದ ಬಗೆಗಿನ ಕೆಲ ಮಹತ್ವದ ಮಾಹಿತಿಗಳನ್ನು ನೋಡೋಣ

ಸ್ಕ್ವಾಡ್‌ಗಳು

ಸ್ಕ್ವಾಡ್‌ಗಳು

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ಟ್ರಿಸ್ಟನ್ ಸ್ಟಬ್ಸ್

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಮೇ 21 ರಂದು ಶನಿವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಪ್ಲೇಆಫ್ ಹಂತಕ್ಕೇರುವ ದೃಷ್ಟಿಯಿಂದ ಡೆಲ್ಲಿ ಕ್ಯಾಪಿಟಲ್ಸ್ ಜೊತೆಗೆ ಆರ್‌ಸಿಬಿ ತಂಡಕ್ಕೂ ಈ ಪಂದ್ಯದ ಫಲಿತಾಂಶ ನಿರ್ಣಾಯಕವಾಗಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಆರ್‌ಸಿಬಿ ಹಾಗೂ ಜಿಟಿ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದೆ. ಆದರೆ ಪಿಚ್ ನಿಧಾನವಾಗಿ ವರ್ತಿಸುವ ಕಾರಣ ಸ್ಪಿನ್ನರ್‌ಗಳು ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪರಿಣಾಮ ಬೀಳುವ ಕಾರಣ ಬ್ಯಾಟರ್‌ಗಳು ಇದರ ಲಾಭ ಪಡೆಯಲಿದ್ದಾರೆ.

KL ರಾಹುಲ್ ವಿರುದ್ಧ ಸೋತಿದ್ದು ಸ್ವಲ್ಪವೂ ಬೇಸರ ಇಲ್ಲ ಅಂತಾ ಶ್ರೇಯಸ್ ಅಯ್ಯರ್ ಹೇಳಿದ್ಯಾಕೆ? | Oneindia Kannada
ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಮಣದೀಪ್ ಸಿಂಗ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ಕುಮಾರ್ ಕಾರ್ತಿಕೇಯ / ಮಯಾಂಕ್ ಮಾರ್ಕಾಂಡೆ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಸರ್ಫರಾಜ್ ಖಾನ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ / ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್.

Story first published: Friday, May 20, 2022, 14:22 [IST]
Other articles published on May 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X