
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ಜಿದ್ದಾಜಿದ್ದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ 162 ರನ್‌ಗಳ ಸವಾಲಿನ ಗುರಿ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬಿಗು ಬೌಲಿಂಗ್ ದಾಳಿಗೆ ಮುಂಬೈ ತಂಡದ ಅಗ್ರ ಕ್ರಮಾಂಕದ ಆಟಗಾರರು ಪರದಾಡಿದರು. 18 ಓವರ್‌ಗಳವರೆಗೂ ಕೆಕೆಆರ್ ಬೌಲರ್‌ಗಳು ಅದ್ಭುತ ನಿಯಂತ್ರಣ ಸಾಧಿಸಿದ್ದರು. ಆದರೆ ಅಂತಿಮ ಹಂತದಲ್ಲಿ ಕಿರಾನ್ ಪೊಲಾರ್ಡ್ ಅವರಿಂದ ಸ್ಪೋಟಕ ಪ್ರದರ್ಶನ ಬಂದ ಕಾರಣ ತಂಡದ ಮೊತ್ತ ಮೊತ್ತ 160ರ ಹಡಿ ದಾಟಿತು. ಈ ಬಾರಿಯ ಆವೃತ್ತಿಯಲ್ಲಿ ಮೊದಲ ಬಾರಿಗೆ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಭರ್ಜರಿ ಅರ್ಧ ಶತಕ ಬಾರಿಸಿದ್ದಾರೆ.
ಪ್ರಮುಖ ವಿಕೆಟ್ ಕಳೆದುಕೊಂಡು ಕುಸಿತ ಅನುಭವಿಸಿದ್ದ ಸಂದರ್ಭದಲ್ಲಿ ಕ್ರೀಸ್‌ಗೆ ಇಳಿದ ಸೂರ್ಯಕುಮಾರ್ ತಂಡದ ಮೊತ್ತವನ್ನು ಅದ್ಭುತ ರೀತಿಯಲ್ಲಿ ಮೇಲೇರಿಸಿದರು. 36 ಎಸೆತಗಳನ್ನು ಎದುರಿಸಿದ ಸೂರ್ಯ 52 ರನ್ ಬಾರಿಸಿದ್ದಾರೆ. ಅವರಿಗೆ ತಿಲಕ್ ವರ್ಮ ಅವರು ಕೂಡ ಉತ್ತಮ ಸಾಥ್ ನೀಡಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ
ಬೆಂಚ್: ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ಟಿಮ್ ಸೌಥಿ, ಶಿವಂ ಮಾವಿ
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಡೆವಾಲ್ಡ್ ಬ್ರೆವಿಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ
ಬೆಂಚ್: ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ರಿಲೆ ಮೆರೆಡಿತ್, ರಮಣ್‌ದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಅನ್ಮೋಲ್‌ಪ್ರೀತ್ ಸಿಂಗ್, ಟಿಮ್ ಡೇವಿಡ್