Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs LSG: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ, ಲಕ್ನೋ ಬ್ಯಾಟಿಂಗ್: ಪ್ಲೇಯಿಂಗ್ 11

MI vs LSG

ಮುಂಬೈನ ಬ್ರಬೋರ್ನ್‌ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡಿದ್ದು, ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ 2022ರ 26ನೇ ಪಂದ್ಯದಲ್ಲಿ ಕೆ.ಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್‌ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಕೃಷ್ಣಪ್ಪ ಗೌತಮ್ ಬದಲು ಮತ್ತೊಬ್ಬ ಕನ್ನಡಿಗ ಮನೀಶ್ ಪಾಂಡೆಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ.

ಈಗಾಗಲೇ ಐದು ಪಂದ್ಯ ಸೋತಿರುವ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಲ್ಲಿ ಫ್ಯಾಬಿಯನ್ ಅಲೆನ್, ಟೈಮಲ್ ಮಿಲ್ಸ್‌ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಮುಂಬೈ ಇಂಡಿಯನ್ಸ್ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 12ರನ್‌ಗಳಿಂದ ಸೋಲನ್ನ ಒಪ್ಪಿಕೊಂಡಿತು. ಡೆವಾಲ್ಡ್ ಬ್ರೆವಿಸ್ (49) ತಿಲಕ್ ವರ್ಮಾ 36ರನ್‌ಳ ಹೊರತಾಗಿಯೂ ಸೋಲನ್ನ ಕಂಡಿತು.

ಆದ್ರೆ ಮತ್ತೊಂದೆಡೆ ಲಕ್ನೋ ಸೂಪರ್‌ಜೈಂಟ್ಸ್ ಮೂರು ವಿಭಾಗದಲ್ಲಿ ಬಲಿಷ್ಠವಾಗಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಲಕ್ನೋ ಕೂಡ ಕಳೆದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ 3 ರನ್‌ಗಳ ಅಂತರದಲ್ಲಿ ಸೋಲನ್ನಪ್ಪಿತು.

ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ಪ್ಲೇಯಿಂಗ್ ಇಲೆವೆನ್ ಅನ್ನು ಈ ಕೆಳಗೆ ನೋಡಬಹುದು

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಜಯದೇವ್ ಉನಾದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್

ಲಕ್ನೋ ಸೂಪರ್‌ಜೈಂಟ್ಸ್ ಪ್ಲೇಯಿಂಗ್ 11
ಕೆ.ಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೊಯ್ನಿಸ್, ಆಯುಷ್ ಬದೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್

Story first published: Saturday, April 16, 2022, 15:15 [IST]
Other articles published on Apr 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+