
ಐಪಿಎಲ್‌ನಲ್ಲಿ ಶನಿವಾರ ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಐದು ಬಾರಿಉಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಈವರೆಗೂ ಗೆಲುವೇ ಕಾಣದ ಏಕೈಕ ತಂಡವಾಗಿದ್ದು ಗೆಲ್ಲಬೇಕಾದ ಒತ್ತಡದಲ್ಲಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ.
ಸತತ ಸೋಲುಗಳನ್ನು ಕಾಣುತ್ತಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಶನಿವಾರ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಖಾತೆ ತೆರೆಯುವ ವಿಶ್ವಾಸದಲ್ಲಿದೆ. ತಂಡದಲ್ಲಿ ಸ್ಪೋಟಕ ಆಟಗಾರರಿದ್ದರೂ ಕೆಳ ಕ್ರಮಾಂಕದಲ್ಲಿ ಬಲಿಷ್ಠ ಆಲ್‌ರೌಂಡರ್‌ಗಳ ಕೊರತೆ ತಂಡವನ್ನು ಕಾಡುತ್ತಿದೆ. ಇತ್ತ ರೋಹಿತ್ ಬಳಗ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 3 ರನ್‌ಗಳ ಅಂತರದಿಂದ ಸೋಲು ಅನುಭವಿಸಿದ್ದು ಅದ್ಭುತ ಪ್ರದರ್ಶನಕ್ಕೆ ಎದುರು ನೋಡುತ್ತಿದೆ.
ಸ್ಕ್ವಾಡ್‌ಗಳು: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಎವಿನ್ ಲೂಯಿಸ್, ಆಂಡ್ರ್ಯೂ ಟೈ, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 16 ರಂದು ಶನಿವಾರ ನಡೆಯಲಿದ್ದು ಸಂಜೆ 3:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ನಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿಮ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.
ಸಂಭಾವ್ಯ ಆಡುವ ಬಳಗ ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್ / ರೈಲಿ ಮೆರೆಡಿತ್, ಜಯದೇವ್ ಉನಾದ್ಕತ್.
ಸಂಭಾವ್ಯ ಆಡುವ ಬಳಗ,ಎಲ್‌ಎಸ್‌ಜಿ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್.