For Quick Alerts
ALLOW NOTIFICATIONS  
For Daily Alerts
 

MI vs PBKS Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022: MI vs PBKS Preview, Predicted Playing 11, Pitch Report, And Weather Forecast

ಐಪಿಎಲ್‌ನಲ್ಲಿ ಬುಧವಾರ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದು ಸತತ ನಾಲ್ಕು ಸೋಲು ಕಂಡಿದೆ. ಹೀಗಾಗಿ ಐದನೇ ಪಂದ್ಯದಲ್ಲಿ ಗೆಲುವಿಗಾಗಿ ಸರ್ವ ಪ್ರಯತ್ನ ನಡೆಸಲಿದೆ ಮುಂಬೈ ಇಂಡಿಯನ್ಸ್ ತಂಡ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡ ಆಡಿದ ನಾಲ್ಕು ಪಂದ್ಯಗಳ ಪೈಕಿ ಎರಡು ಗೆಲುವು ಹಾಗೂ ಎರಡು ಸೋಲು ಕಂಡಿದ್ದು ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನ ಮಾಡಲಿದೆ.

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯದಲ್ಲಿ ಯಾವ ರೀತಿ ಕಮ್‌ಬ್ಯಾಕ್ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆರಂಭಿಕ ನಾಲ್ಕು ಪಂದ್ಯಗಳನ್ನು ಸೋತು ಬಳಿಕ ಪ್ಲೇಆಫ್‌ಗೆ ಪ್ರವೇಶ ಪಡೆದಿರುವ ಹಿನ್ನಲೆಯಿರುವ ಮುಂಬೈ ಇಂಡಿಯನ್ಸ್ ಈ ಹಿಂದಿನ ಆವೃತ್ತಿಗಳಂತೆ ಮತ್ತೆ ಲಯಕ್ಕೆ ಮರಳಲಿದೆಯಾ ಎಂಬುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಕನ್ನಡಿಗ ಮಯಾಂಕ್ ಅಗರ್ವಾಲ್ ಪಡೆ ಈ ಪಂದ್ಯದಲ್ಲಿ ಯಾವ ರೀತಿಯ ಪ್ರತಿರೋಧವೊಡ್ಡಲಿದೆ ಎಂಬುದು ಕೂಡ ಗಮನಾರ್ಹ ಸಂಗತಿಯಾಗಿದೆ.

ಸ್ಕ್ವಾಡ್‌ಗಳು: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್
ಮುಂಬೈ ಇಂಡಿಯನ್ಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಮುಂಬೈ ಇಂಡಿಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 13 ರಂದು ಬುಧವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಕ್ಕೂ ಉತ್ತಮ ಬೆಂಬಲ ನೀಡಲಿದೆ. ಆರ್‌ಸಿಬಿ ಹಾಗೂ ಆರ್‌ಆರ್ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಇನ್ನು ಇಬ್ಬನಿ ಈ ಪಂದ್ಯದಲ್ಲಿಯೂ ಹೆಚ್ಚಿನ ಪರಿಣಾಮವನ್ನು ಬೀರಬಹುದು.

ಸಂಭಾವ್ಯ ಆಡುವ ಬಳಗ: ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್/ಟಿಮ್ ಡೇವಿಡ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬೇಸಿಲ್ ಥಂಪಿ/ ಟೈಮಲ್ ಮಿಲ್ಸ್

ಯಾರಿದು Suyash Prabhudessai | Virat Kohli Reaction | Oneindia Kannada

ಪಂಜಾಬ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ XI: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ, ಶಾರುಖ್ ಖಾನ್, ಒಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್

Story first published: Tuesday, April 12, 2022, 21:14 [IST]
Other articles published on Apr 12, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+