MI vs RCB Head to Head: ಮುಖಾಮುಖಿಯಲ್ಲಿ ಕಡಿಮೆ ಪಂದ್ಯ ಗೆದ್ದು ಹಿಂದಿರುವ ತಂಡವಿದು!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಏಪ್ರಿಲ್ 9ರ ಶನಿವಾರದಂದು ಒಟ್ಟು 2 ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾದರೆ, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳೆರಡೂ ತಲಾ 3 ಪಂದ್ಯಗಳಲ್ಲಿ ಕಣಕ್ಕಿಳಿದಿವೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿರುವ 3 ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಉಳಿದೊಂದು ಪಂದ್ಯದಲ್ಲಿ ಸೋತಿದೆ ಹಾಗೂ ಮುಂಬೈ ಇಂಡಿಯನ್ಸ್ ತಾನಾಡಿರುವ 3 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ಸೋತು ಹ್ಯಾಟ್ರಿಕ್ ಸೋಲನ್ನು ಕಂಡಿದೆ.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ವಿರುದ್ಧದ ಈ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯುತ್ತಾ ಅಥವಾ ಈ ಪಂದ್ಯದಲ್ಲೂ ಸೋತು ಮತ್ತಷ್ಟು ಒತ್ತಡಕ್ಕೆ ಒಳಗಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಈ ಎರಡೂ ತಂಡಗಳ ನಡುವೆ ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟಾರೆ ಐಪಿಲ್ ಮುಖಾಮುಖಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 29 ಪಂದ್ಯಗಳು ನಡೆದಿದ್ದು, ಈ ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ 17 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 12 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳ ಮುಖಾಮುಖಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಮುಖಾಮುಖಿ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಉಳಿದ 2 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಗೆದ್ದಿದೆ. ಹೀಗೆ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು ಎರಡು ಪಂದ್ಯಗಳು ನಡೆದಿದ್ದು, ಎರಡೂ ಪಂದ್ಯಗಳಲ್ಲಿಯೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದಿದೆ. ಇತ್ತಂಡಗಳ ನಡುವೆ ನಡೆದ ಪ್ರಥಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ವಿಕೆಟ್‌ಗಳ ಜಯ ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 54 ರನ್‌ಗಳ ಅಂತರದ ಜಯ ಸಾಧಿಸಿತ್ತು. ಈ ಮೂಲಕ ಇತ್ತಂಡಗಳ ನಡುವೆ ಕಳೆದ ಆವೃತ್ತಿಯಲ್ಲಿ ನಡೆದ ಮುಖಾಮುಖಿ ಸೆಣಸಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ಮೇಲುಗೈ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications