Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RCB: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ; ಆರ್‌ಸಿಬಿ ತಂಡದಲ್ಲಿ ಬದಲಾವಣೆ

IPL 2022 MI vs RCB: Toss report and playing XI details in kannada

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಏಪ್ರಿಲ್ 9ರಂದು ಎರಡು ಪಂದ್ಯಗಳು ಆಯೋಜನೆಯಾಗಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಿದ್ದರೆ, ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಕಣಕ್ಕಿಳಿದಿವೆ.

ಇತ್ತಂಡಗಳ ನಡುವಿನ ಈ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬಸಿಲ್ ಥಂಪಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪೋಟಕ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಈ ಪಂದ್ಯದ ಮೂಲಕ ತಂಡ ಸೇರಿಕೊಂಡಿದ್ದು, ಶೆರ್ಫೇನ್ ರುದರ್‌ಫೋರ್ಡ್ ಹೊರಬಿದ್ದಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಟೈಮಲ್ ಮಿಲ್ಸ್ ಬದಲಾಗಿ ಜಯದೇವ್ ಉನಾದ್ಕತ್ ಮತ್ತು ಡೇನಿಯಲ್ ಸ್ಯಾಮ್ಸ್ ಬದಲಾಗಿ ರಮಣದೀಪ್ ಸಿಂಗ್ ಕಣಕ್ಕಿಳಿದಿದ್ದಾರೆ.

IPL 2022; Cricket News Round Up- Highlights | Oneindia Kannada

Story first published: Saturday, April 9, 2022, 19:36 [IST]
Other articles published on Apr 9, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+