Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RR Head to Head: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು ಗೊತ್ತಾ?

IPL 2022, MI vs RR: Head-to-head records, high score and low score stats

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 9ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಟ ನಡೆಸಲಿದ್ದು, ಈ ಪಂದ್ಯ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.30ಕ್ಕೆ ಆರಂಭಗೊಳ್ಳಲಿದೆ.

ಇನ್ನು ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದು ಸೋಲನ್ನು ಅನುಭವಿಸಿದ್ದ ಮುಂಬೈ ಇಂಡಿಯನ್ಸ್ ಕಳಪೆ ಆರಂಭವನ್ನು ಪಡೆದುಕೊಂಡಿದ್ದು, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಖಾತೆ ತೆರೆಯುವ ಯೋಜನೆಯಲ್ಲಿದ್ದರೆ, ಅತ್ತ ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಬೃಹತ್ ಅಂತರದ ಗೆಲುವು ಸಾಧಿಸಿ ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿಯೂ ಜಯ ಸಾಧಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸುವ ತವಕದಲ್ಲಿದೆ.

ಇನ್ನು ಇತ್ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು ಎಷ್ಟು ಪಂದ್ಯಗಳು ನಡೆದಿವೆ, ಈ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಜಯ ಸಾಧಿಸಿದೆ ಹಾಗೂ ಯಾವ ಪಂದ್ಯ ಕಡಿಮೆ ಪಂದ್ಯ ಗೆದ್ದು ಹಿನ್ನಡೆ ಅನುಭವಿಸಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ

ಒಟ್ಟಾರೆ ಐಪಿಎಲ್ ಮುಖಾಮುಖಿ

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಇದುವರೆಗೂ ಒಟ್ಟು 25 ಮುಖಾಮುಖಿ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಮುಖಾಮುಖಿ ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮೇಲುಗೈ ಸಾಧಿಸಿದೆ.

ಕೊನೆಯ ಐದು ಮುಖಾಮುಖಿ

ಕೊನೆಯ ಐದು ಮುಖಾಮುಖಿ

ಇನ್ನು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಮುಂಬೈ ಇಂಡಿಯನ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ ಐದು ಮುಖಾಮುಖಿ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಮೇಲುಗೈ ಸಾಧಿಸಿದೆ. ಇನ್ನು ಇತ್ತಂಡಗಳ ನಡುವೆ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿ ನಡೆದ ಎರಡು ಪಂದ್ಯಗಳ ಪೈಕಿ ಎರಡರಲ್ಲಿಯೂ ಮುಂಬೈ ಇಂಡಿಯನ್ಸ್ ಜಯ ಸಾಧಿಸಿತ್ತು.

ತಾವು ಗೆದ್ರೂ ಪಂಜಾಬ್ ಟೀಂನ್ನು ಹಾಡಿಹೊಗಳಿದ ಶ್ರೇಯಸ್ | Oneindia Kannada
ಅತಿಹೆಚ್ಚು ರನ್ ಹಾಗೂ ಕಡಿಮೆ ರನ್

ಅತಿಹೆಚ್ಚು ರನ್ ಹಾಗೂ ಕಡಿಮೆ ರನ್

ಇನ್ನು ಐಪಿಎಲ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ಇದುವರೆಗೂ ನಡೆದಿರುವ ಮುಖಾಮುಖಿ ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ ಗಳಿಸಿರುವ ಗರಿಷ್ಟ ರನ್ 212 ಆಗಿದ್ದರೆ, ರಾಜಸ್ಥಾನ್ ರಾಯಲ್ಸ್ ಗಳಿಸಿರುವ ಗರಿಷ್ಟ ರನ್ 208 ಆಗಿದೆ. ಇನ್ನು ಇತ್ತಂಡಗಳ ನಡುವೆ ನಡೆದ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಗಳಿಸಿರುವ ಕನಿಷ್ಟ ರನ್ 92 ಆಗಿದ್ದರೆ, ರಾಜಸ್ಥಾನ್ ರಾಯಲ್ಸ್ ಗಳಿಸಿರುವ ಕನಿಷ್ಠ ರನ್ 90 ಆಗಿದೆ.

Story first published: Saturday, April 2, 2022, 10:05 [IST]
Other articles published on Apr 2, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+