MI vs SRH Playing 11: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ಪ್ಲೇಯಿಂಗ್ XI

ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯ ಹೈದರಾಬಾದ್ ತಂಡಕ್ಕೆ ಅತ್ಯಂತ ಮಹತ್ವದ ಪಂದ್ಯವಾಗಿದೆ. ಪ್ಲೇಆಫ್ ರೇಸ್‌ನಲ್ಲಿ ಉಳಿದುಕೊಳ್ಳಬೇಕಾದರೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಅನಿವಾರ್ಯತೆಯಿದೆ.

ಆದರೆ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಗೆದ್ದರೂ ಸೋತರೂ ಕಳೆದುಕೊಳ್ಳುವುದು ಏನೂ ಇಲ್ಲ. ಆದರೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪ್ಲೇ ಆಫ್ ಕನಸಿಗೆ ತಣ್ಣೀರೆರಚುವ ಅವಕಾಶ ಮುಂಬೈ ಇಂಡಿಯನ್ಸ್ ಪಾಲಿಗಿದೆ. ಟೂರ್ನಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನಿಡಿರುವ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಸತತ ಗೆಲುವು ಸಾಧಿಸಿದ ಬಳಿಕ ಸೋಲಿನ ಸುಳಿಗೆ ಸಿಲುಕಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿರ್ಣಾಯಕ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕೂಡ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಥಾಮಸ್‌ ಕಪ್‌: ಫೈನಲ್‌ನಲ್ಲಿ ಇಂಡೋನೇಷ್ಯಾ ವಿರುದ್ಧ ಗೆಲುವು, ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕಥಾಮಸ್‌ ಕಪ್‌: ಫೈನಲ್‌ನಲ್ಲಿ ಇಂಡೋನೇಷ್ಯಾ ವಿರುದ್ಧ ಗೆಲುವು, ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ

ಸ್ಕ್ವಾಡ್‌ಗಳು:
ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ಟ್ರಿಸ್ಟನ್ ಸ್ಟಬ್ಸ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮೇ 17 ರಂದು ಮಂಗಳವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಥಾಮಸ್ ಕಪ್: ಚಿನ್ನ ಗೆದ್ದು ಐತಿಹಾಸಿಕ ದಾಖಲೆ ಬರೆದ ಭಾರತದ ಆಟಗಾರರಿಗೆ ಸಿಕ್ಕ ಹಣವೆಷ್ಟು?ಥಾಮಸ್ ಕಪ್: ಚಿನ್ನ ಗೆದ್ದು ಐತಿಹಾಸಿಕ ದಾಖಲೆ ಬರೆದ ಭಾರತದ ಆಟಗಾರರಿಗೆ ಸಿಕ್ಕ ಹಣವೆಷ್ಟು?

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ:
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು.

ಸಂಬಾವ್ಯ ಆಡುವ ಬಳಗ: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್, ಟಿಮ್ ಡೇವಿಡ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ಹೃತಿಕ್ ಶೋಕೀನ್, ಕುಮಾರ್ ಕಾರ್ತಿಕ್, ಡೇನಿಯಲ್ ಸಾಮ್ಸ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್

ಚಾಹಲ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಹೇಳಿದ್ದೇನು | Oneindia Kannada

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಅಬ್ದುಲ್ ಸಮದ್, ಶ್ರೇಯಸ್ ಗೋಪಾಲ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್

For Quick Alerts
ALLOW NOTIFICATIONS
For Daily Alerts
Story first published: Monday, May 16, 2022, 13:57 [IST]
Other articles published on May 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X