ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯ ಫಾರ್ಮ್ ದಕ್ಷಿಣ ಆಪ್ರಿಕಾ ಸರಣಿಗೆ ಪಾಸಿಟಿವ್: ಮೊಹಮದ್ ಕೈಫ್

IPL 2022: Mohammad Kaif praises Hardik Pandya said his good form positive for India

ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ನಾಯಕತ್ವ ಹಾಗೂ ಬ್ಯಾಟಿಂಗ್ ಎರಡಲ್ಲಿಯೂ ಮಿಂಚುಹಿಸಿದ್ದಾರೆ. ಈ ಪ್ರದರ್ಶನದಿಂದಾಗಿ ಜಿಟಿ ತಂಡ ಐಪಿಎಲ್‌ನಲ್ಲಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಅದ್ಭುತ ಪ್ರದರ್ಶನದ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಹಾರ್ದಿಕ್ ಪಾಂಡ್ಯ ಅವರ ಫಾರ್ಮ್ ಸಕಾರಾತ್ಮಕ ಸಂಗತಿಯಾಗಿದೆ ಎಂದಿದ್ದಾರೆ.

ಭಾರತ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ಸತತ 13 ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಹೊಂದಿದೆ. ದಕ್ಷಿಣ ಆಪ್ರಿಕಾ ವಿರುದ್ಧಧ ಸರಣಿಯಲ್ಲಿ ಈ ಗೆಲುವಿನ ದಾಖಲೆಯನ್ನು ಮತ್ತಷ್ಟು ಮುಂದುವರಿಸುವ ವಿಶ್ವಾಸವಿದೆ. ಇದಕ್ಕೆ ಹಾರ್ದಿಕ್ ಪಾಂಡ್ಯ ಅವರಿಂದಲೂ ಉತ್ತಮ ಕೊಡುಗೆ ದೊರೆಯುವ ವಿಶ್ವಾಸಗಳು ಈಗ ವ್ಯಕ್ತವಾಗುತ್ತಿದೆ. ಈ ಬಾರಿಯ ಐಪಿಎಲ್‌ನಲ್ಲಿ ಅತ್ಯುತ್ತಮವಾಗಿ ಬ್ಯಾಟರ್ ಬೀಡುತ್ತಿರುವ ಹಾರ್ದಿಕ್ ಪಾಂಡ್ಯ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. 45ಕ್ಕೂ ಅಧಿಕ ಸರಾಸರಿಯಲ್ಲಿ ಹಾರ್ದಿಕ್ ಪಾಂಡ್ಯ 453 ರನ್‌ಗಳನ್ನು ಗಳಿಸಿದ ಸಾಧನೆ ಮಾಡಿದ್ದಾರೆ.

IPL 2022: ಈ ಐವರು ಆಟಗಾರರು ಮುಂದಿನ ಐಪಿಎಲ್‌ ಸೀಸನ್ ಆಡುವುದು ಡೌಟ್IPL 2022: ಈ ಐವರು ಆಟಗಾರರು ಮುಂದಿನ ಐಪಿಎಲ್‌ ಸೀಸನ್ ಆಡುವುದು ಡೌಟ್

ಪಾಂಡ್ಯ ಬಗ್ಗೆ ಕೈಫ್ ಪ್ರಶಂಸೆ

ಪಾಂಡ್ಯ ಬಗ್ಗೆ ಕೈಫ್ ಪ್ರಶಂಸೆ

"ಭಾರತ ಕ್ರಿಕೆಟ್ ತಂಡ ಹಾರ್ದಿಕ್ ಪಾಂಡ್ಯ ಅವರನ್ನು ಬಹಳ ಮಿಸ್ ಮಾಡಿಕೊಂಡಿತ್ತು. ಈಗ ಅವರು ಅತ್ಯುತ್ತಮ ಲಯದಲ್ಲಿದ್ದು ಅವರು ತಂಡದ ಯಶಸ್ಸಿಗೆ ಸಂಪೂರ್ಣವಾಗಿ ಕೊಡುಗೆ ನೀಡಬಹುದು. ಅವರು ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾಗ ಫಿನಿಶರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಗುಜರಾತ್ ಟೈಟನ್ಸ್ ತಮಡದ ನಾಯಕನಾಗಿ ಪಾಂಡ್ಯ 4ನೇ ಕ್ರಮಾಂಖದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಈ ಸವಾಲನ್ನು ಅದ್ಭುತವಾಗಿ ನಿಭಾಯಿಸುವಲ್ಲಿಯೂ ಅವರು ಯಶಸ್ವಿಯಾಗಿದ್ದಾರೆ" ಎಂದು ಹಾರ್ದಿಕ್ ಪಾಂಡ್ಯ ಬಗ್ಗೆ ಮೊಹಮ್ಮದ್ ಕೈಫ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಫೈನಲ್‌ಗೆ ಪ್ರವೇಶಿಸಿರುವ ಹಾರ್ದಿಕ್ ಪಾಂಡ್ಯ ಪಡೆ

ಫೈನಲ್‌ಗೆ ಪ್ರವೇಶಿಸಿರುವ ಹಾರ್ದಿಕ್ ಪಾಂಡ್ಯ ಪಡೆ

ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಅದ್ಭುತ ಪ್ರದರ್ಶನ ನೀಡಿ ಮಿಂಚುಹರಿಸುತ್ತಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ತಂಡ ಸರ್ವಾಂಗೀಣ ಪ್ರದರ್ಶನ ನೀಡುತ್ತಿದ್ದು ಪ್ಲೇಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದು ಫೈನಲ್ ಹಂತಕ್ಕೇರಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಮೊದಲ ಕ್ವಾಲಿಫೈಯರ್‌ನಲ್ಲಿ ಬರ್ಜರಿ ಗೆಲುವು ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿಯೇ ಶ್ರೇಷ್ಠ ಸಾಧನೆ ಮಾಡಿದೆ.

Harshal Patel ಸ್ವಲ್ಪದರಲ್ಲಿ ಬಚಾವ್ ಆಗಿದ್ದು ಹೀಗೆ | Oneindia Kannada
ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಇನ್ನು ಪ್ಲೇಆಫ್‌ನ ಎರಡನೇ ಪಂದ್ಯ ಎಲಿಮಿನೇಟರ್ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ 14 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ ಪಂದ್ಯವನ್ನು ಆಡುವ ಅವಕಾಶವನ್ನು ಗಳಿಸಿಕೊಂಡಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಸೋಲು ಅನುಭವಿಸಿದ ಕಾರಣ ಟೂರ್ನಿಯಿಂದ ಹೊರಬಿದ್ದಿದೆ.
ಪ್ಲೇಯಿಂಗ್ XI
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ಎವಿನ್ ಲೂಯಿಸ್, ದೀಪಕ್ ಹೂಡಾ, ಮನನ್ ವೋಹ್ರಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಮೊಹ್ಸಿನ್ ಖಾನ್, ಅವೇಶ್ ಖಾನ್, ರವಿ ಬಿಷ್ಣೋಯ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್

Story first published: Thursday, May 26, 2022, 10:32 [IST]
Other articles published on May 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X