ಐಪಿಎಲ್: ಸಿಎಸ್‌ಕೆ ಪರ ಆಡಿ ಪರ್ಪಲ್ ಕ್ಯಾಪ್ ಗೆದ್ದಿದ್ದ ಸ್ಟಾರ್ ಬೌಲರ್ ಈಗ ಗುಜರಾತ್‌ನ ನೆಟ್ ಬೌಲರ್!

ಇಂಡಿಯನ್ ಪ್ರೀಮಿಯರ್ ಲೀಗ್ ಹಲವಾರು ಪ್ರತಿಭೆಗಳಿಗೆ ತಮ್ಮಲ್ಲಿನ ಪ್ರತಿಭೆಯನ್ನು ನಿರೂಪಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಟಿ. ನಟರಾಜನ್, ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ರೀತಿಯ ಬಡ ಕುಟುಂಬದಿಂದ ಬಂದ ಹಲವಾರು ಪ್ರತಿಭೆಗಳಿಗೆ ಉತ್ತಮ ಅವಕಾಶವನ್ನು ನೀಡಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸುವಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಮಹತ್ವದ ಪಾತ್ರವನ್ನು ನಿರ್ವಹಿಸಿದೆ. ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚಿದ ಹಲವಾರು ಕ್ರಿಕೆಟಿಗರು ಈಗಲೂ ಅಂತರರಾಷ್ಟ್ರೀಯ ತಂಡದಲ್ಲಿ ಆಡುತ್ತಾ ಮಿಂಚುತ್ತಿದ್ದರೆ, ಇನ್ನೂ ಕೆಲ ಕ್ರಿಕೆಟಿಗರು ನಂತರದ ದಿನಗಳಲ್ಲಿ ಅವಕಾಶಗಳಿಲ್ಲದೇ ತೆರೆಮರೆಗೆ ಸರಿದಿದ್ದಾರೆ.
ಇತ್ತ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಟೂರ್ನಿಯ ಚೊಚ್ಚಲ ಪಂದ್ಯ ಮಾರ್ಚ್ 26ರಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ನೂತನ ತಂಡಗಳಾಗಿ ಕಣಕ್ಕಿಳಿಯಲಿದ್ದು, ಟ್ರೋಫಿಗಾಗಿ ಒಟ್ಟು ಹತ್ತು ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಹೀಗೆ ಈ ಬಾರಿಯ ಐಪಿಎಲ್ ಟೂರ್ನಿಗೆ ಪ್ರವೇಶ ಪಡೆದುಕೊಳ್ಳುತ್ತಿರುವ ಗುಜರಾತ್ ಟೈಟನ್ಸ್ ತಂಡ ಟೂರ್ನಿಗಾಗಿ ಅಭ್ಯಾಸವನ್ನು ಆರಂಭಿಸಿದ್ದು, ಈ ಅಭ್ಯಾಸಕ್ಕೆ ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿದು ಪರ್ಪಲ್ ಕ್ಯಾಪ್ ಗೆದ್ದಿದ್ದ ಸ್ಟಾರ್ ಬೌಲರ್ ನೆಟ್ ಬೌಲರ್ ಆಗಿ ಆಯ್ಕೆಯಾಗಿರುವುದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ಈ ಹಿಂದೆ ಸ್ಟಾರ್ ಬೌಲರ್ ಆಗಿ ಮಿಂಚಿದ್ದ ಬೌಲರ್ ಈಗ ನೂತನವಾಗಿ ಐಪಿಎಲ್ ಪ್ರವೇಶಿಸುತ್ತಿರುವ ತಂಡಕ್ಕೆ ನೆಟ್ ಬೌಲರ್ ಆಗಿ ಕೆಲಸ ನಿರ್ವಹಿಸುತ್ತಿರುವುದನ್ನು ಕಂಡ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕಿದ್ದಾರೆ. ಹೀಗೆ ಹಿಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯೊಂದರಲ್ಲಿ ಪರ್ಪಲ್ ಕ್ಯಾಪ್ ಗೆದ್ದು ಈಗ ನೆಟ್ ಬೌಲರ್ ಆಗಿರುವ ಆ ಬೌಲರ್ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ನೆಟ್ ಬೌಲರ್ ಆದ ಸ್ಟಾರ್ ಬೌಲರ್ ಇವರೇ
ನೆಟ್ ಬೌಲರ್ ಆದ ಕಾರಣಕ್ಕೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಗೀಡಾಗಿರುವ ಆ ಸ್ಟಾರ್ ಬೌಲರ್ ಮೋಹಿತ್ ಶರ್ಮಾ. ಹೌದು, ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಟಾರ್ ಬೌಲರ್ ಆಗಿ ಮಿಂಚಿದ್ದ ಮೋಹಿತ್ ಶರ್ಮಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡದ ನೆಟ್ ಬೌಲರ್ ಆಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ಪರ್ಪಲ್ ಕ್ಯಾಪ್ ಗೆದ್ದಿದ್ದ ಶರ್ಮಾ
2014ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಮೋಹಿತ್ ಶರ್ಮಾ ಆ ಆವೃತ್ತಿಯಲ್ಲಿ 16 ಪಂದ್ಯಗಳಲ್ಲಿ 23 ವಿಕೆಟ್‌ಗಳನ್ನು ಪಡೆದು ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಕಾರಣಕ್ಕೆ ಪರ್ಪಲ್ ಕ್ಯಾಪ್ ವಿಜೇತರಾಗಿ ಹೊರಹೊಮ್ಮಿದ್ದರು. ಇನ್ನು ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಕಣಕ್ಕಿಳಿದಿರುವ ಮೋಹಿತ್ ಶರ್ಮಾ 86 ಪಂದ್ಯಗಳನ್ನಾಡಿ 92 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು 2018ರ ಐಪಿಎಲ್ ಆವೃತ್ತಿಗಳವರೆಗೂ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದ ಮೋಹಿತ್ ಶರ್ಮಾ ನಂತರದ ಆವೃತ್ತಿಗಳಲ್ಲಿ ಅವಕಾಶ ಕಳೆದುಕೊಂಡರು. ಇನ್ನು 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ಮೋಹಿತ್ ಶರ್ಮಾ ನಂತರ ಯಾವುದೇ ಅವಕಾಶಗಳಿಲ್ಲದಂತಾದರು.

ಮೋಹಿತ್ ಶರ್ಮಾ ಅಂತರರಾಷ್ಟ್ರೀಯ ಅಂಕಿಅಂಶ
ಮೋಹಿತ್ ಶರ್ಮಾ ತನ್ನ ಕ್ರಿಕೆಟ್ ಜೀವನದಲ್ಲಿ ಇದುವರೆಗೂ ಒಟ್ಟು 26 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದು, 31 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಹಾಗೂ ಒಟ್ಟು 8 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನಾಡಿರುವ ಮೋಹಿತ್ ಶರ್ಮಾ 6 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications