ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

DC vs MI: ಮುಂಬೈ ಮೊದಲು ಬ್ಯಾಟಿಂಗ್ ಮಾಡಿದರೆ ಆರ್‌ಸಿಬಿ ಪ್ಲೇಆಫ್ ಕನಸು ಭಗ್ನವಾಗುವುದು ಖಚಿತ! ಕಾರಣವಿದು

IPL 2022: Mumbai Indians have lost their all 3 previous games against DC when batted first

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಸನಿಹಕ್ಕೆ ಬಂದಿದ್ದು, ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಾಳೆ ( ಮೇ 22 ) ನಡೆಯಲಿರುವ ಪಂದ್ಯದ ಮೂಲಕ ಲೀಗ್ ಹಂತದ ಪಂದ್ಯಗಳಿಗೆ ತೆರೆಬೀಳಲಿದೆ.

IPL 2022: ಕ್ವಾಲಿಫೈಯರ್ 1 ಪಂದ್ಯ ನಿಗದಿ, ಗುಜರಾತ್ ಜೊತೆ ಸೆಣಸಾಡಲಿದೆ ಈ ತಂಡ; ಇಲ್ಲಿದೆ ವಿವರIPL 2022: ಕ್ವಾಲಿಫೈಯರ್ 1 ಪಂದ್ಯ ನಿಗದಿ, ಗುಜರಾತ್ ಜೊತೆ ಸೆಣಸಾಡಲಿದೆ ಈ ತಂಡ; ಇಲ್ಲಿದೆ ವಿವರ

ಇನ್ನು ಈಗಾಗಲೇ ಗುಜರಾತ್ ಟೈಟನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇ ಆಫ್ ಸುತ್ತಿಗೆ ಆರ್ಹತೆಯನ್ನು ಪಡೆದುಕೊಂಡಿದ್ದು, ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿರುವ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಂಗಳವಾರ ( ಮೇ 24 ) ನಡೆಯಲಿರುವ ಕ್ವಾಲಿಫೈಯರ್ 1 ಪಂದ್ಯದಲ್ಲಿ ಕಣಕ್ಕಿಳಿಯುವುದು ನಿಗದಿಯಾಗಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡದಷ್ಟೇ ಅಂಕಗಳನ್ನು ಹೊಂದಿದ್ದರೂ ಸಹ ನೆಟ್ ರನ್ ರೇಟ್ ಅಭಾವದಿಂದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯಕ್ಕೆ ಆಯ್ಕೆಯಾಗಿದ್ದು, ಇದೀಗ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಡಲಿರುವ ನಾಲ್ಕನೇ ತಂಡ ಯಾವುದು ಎಂಬ ಕುತೂಹಲ ಹೆಚ್ಚಾಗಿದೆ.

IPL 2022: ಚೆನ್ನೈ ವಿರುದ್ಧ ಗೆದ್ದದ್ದು ರಾಜಸ್ಥಾನ್; ದೊಡ್ಡ ಹೊಡೆತ ಬಿದ್ದದ್ದು ಕೆಎಲ್ ರಾಹುಲ್ ಪಡೆಗೆ!IPL 2022: ಚೆನ್ನೈ ವಿರುದ್ಧ ಗೆದ್ದದ್ದು ರಾಜಸ್ಥಾನ್; ದೊಡ್ಡ ಹೊಡೆತ ಬಿದ್ದದ್ದು ಕೆಎಲ್ ರಾಹುಲ್ ಪಡೆಗೆ!

ಸದ್ಯ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದ್ದು, ಇಂದು ( ಮೇ 21 ) ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ ಫಾಫ್ ಡು ಪ್ಲೆಸಿಸ್ ಪಡೆ ಪ್ಲೇ ಆಫ್ ತಲುಪಲಿದೆ. ಒಂದುವೇಳೆ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಕುಸಿದು ಟೂರ್ನಿಯಿಂದ ಹೊರ ಬೀಳಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲ್ಲಲಿ ಎಂಬ ಆಶಯದಲ್ಲಿದ್ದಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿದರೆ ತಂಡ ಸೋಲಲಿದೆ ಎಂಬ ಆತಂಕ ಶುರುವಾಗಿದೆ. ಇದಕ್ಕೆ ಕಾರಣ ಈ ಕೆಳಕಂಡಂತಿದೆ..

ಮುಂಬೈ ಮೊದಲು ಬ್ಯಾಟಿಂಗ್ ಮಾಡಿದರೆ ಸೋಲುವ ಭಯ

ಮುಂಬೈ ಮೊದಲು ಬ್ಯಾಟಿಂಗ್ ಮಾಡಿದರೆ ಸೋಲುವ ಭಯ

ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದಿರುವ ಕೊನೆಯ 3 ಪಂದ್ಯಗಳಲ್ಲಿಯೂ ಮೊದಲು ಬ್ಯಾಟಿಂಗ್ ಮಾಡಿದೆ. ಆದರೆ ಈ ಎಲ್ಲಾ ಪಂದ್ಯಗಳಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ಜಯ ಸಾಧಿಸಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿದರೆ ಸೋಲಲಿದೆ ಎಂಬ ಭಯ ಶುರುವಾಗಿದೆ.

ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ 3 ಪಂದ್ಯಗಳ ಫಲಿತಾಂಶ

ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ 3 ಪಂದ್ಯಗಳ ಫಲಿತಾಂಶ

ಈ ಬಾರಿಯ ಆವೃತ್ತಿಯ ಮೊದಲ ಮುಖಾಮುಖಿ ಪಂದ್ಯ ಮತ್ತು ಕಳೆದ ಆವೃತ್ತಿಯ 2 ಲೀಗ್ ಹಂತದ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿ ಸೋಲನ್ನು ಅನುಭವಿಸಿದೆ. ಕಳೆದ ಆವೃತ್ತಿಯ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‍ಗಳ ಜಯವನ್ನು ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ 4 ವಿಕೆಟ್‍ಗಳ ಗೆಲುವನ್ನು ಕಂಡಿತ್ತು. ಇನ್ನು ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್‍ಗಳ ಗೆಲುವನ್ನು ಕಂಡಿತ್ತು. ಅದರಲ್ಲಿಯೂ ಈ ಬಾರಿಯ ಆವೃತ್ತಿಯ ಮುಖಾಮುಖಿ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 178 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 18.2 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿ ಜಯವನ್ನು ಕಂಡಿತ್ತು.

ಪಂದ್ಯದಲ್ಲಿ ಅನನುಭವಿ ಆಟಗಾರರು ಕಣಕ್ಕಿಳಿಯುವ ಸಾಧ್ಯತೆ

ಪಂದ್ಯದಲ್ಲಿ ಅನನುಭವಿ ಆಟಗಾರರು ಕಣಕ್ಕಿಳಿಯುವ ಸಾಧ್ಯತೆ

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಅನನುಭವಿ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಹೆಚ್ಚು ಅನುಭವವಿಲ್ಲದ ಮುಂಬೈ ಇಂಡಿಯನ್ಸ್ ತಂಡದ ಬೌಲರ್‌ಗಳು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ವಿಫಲವಾಗುವ ಸಾಧ್ಯತೆಗಳು ಹೆಚ್ಚಿವೆ.

Story first published: Saturday, May 21, 2022, 16:21 [IST]
Other articles published on May 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X