ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs DC: ಮುಂಬೈ ಇಂಡಿಯನ್ಸ್‌ಗೆ 160 ರನ್‌ಗಳ ಗುರಿ ನಿಗದಿಪಡಿಸಿದ ಡೆಲ್ಲಿ ಕ್ಯಾಪಿಟಲ್ಸ್

IPL 2022: Mumbai Indians need 160 runs to win against Delhi Capitals

ಈ ಬಾರಿಯ ಐಪಿಎಲ್‌ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ,ಒದಲಿಗೆ ಬ್ಯಾಟಿಂಗ್ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಕುಸಿತದ ಹೊರಾತಾಗಿಯೂ ಸವಾಲಿನ ಗುರಿ ನೀಡುವಲ್ಲಿ ಯಶಸ್ವಿಯಾಗಿದೆ. ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ 7 ವಿಕೆಟ್ ಕಳೆದುಕೊಂಡು 159 ರನ್‌ಗಳನ್ನು ಗಳಿಸಿದೆ.

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಬೌಲರ್‌ಗಳು ಆರಂಭದಲ್ಲಿ ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. 31 ರನ್‌ಗಳಿಗೆ 3 ವಿಕೆಟ್ಕಳೆದುಕೊಮಡಿದ್ದ ಮುಂಬೈ 50 ರನ್‌ಗಳಿಸುವಷ್ಟರಲ್ಲಿ 4ನೇ ವಿಕೆಟ್ ಕಳೆದುಕೊಂಡಿತ್ತು. ಆದರೆ ಈ ಸಂದರ್ಭದಲ್ಲಿ ನಾಯಕ ರಿಷಭ್ ಪಂತ್ ಹಾಗೂ ರೋವ್ಮನ್ ಪೋವೆಲ್ ಅವರಿಂದ ಅದ್ಭುತ ಜೊತೆಯಾಟವೊಂದು ಬಂದಿತ್ತು. ಹೀಗಾಗಿ ಡಿಸಿ ಗೌರವಯುತ ಮೊತ್ತ ಸಂಪಾದಿಸುವಲ್ಲಿ ಯಶಸ್ವಿಯಾಗಿದೆ.

ಇನ್ನು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ 33 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರೆ ರೋಮನ್ ಪೋವೆಲ್ 34 ಎಸೆತಗಳಲ್ಲಿ 43 ರನ್‌ಗಳಿಸಿದ್ದಾರೆ. ಅಕ್ಷರ್ ಪಟೇಲ್ 19 ರನ್‌ಗಳ ಕೊಡುಗೆ ನೀಡಿದರು.

ಇನ್ನು ಮುಂಬೈ ಇಮಡಿಯನ್ಸ್ ಪರವಾಗಿ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬೂಮ್ರಾ ಮಿಂಚಿದ್ದಾರೆ. ತಮ್ಮ 4 ಓವರ್‌ಗಳ ಬೌಲಿಂಗ್ ಕೋಟಾದಲ್ಲಿ ಬೂಮ್ರಾ ಮೂರು ವಿಕೆಟ್ ಪಡೆದುಕೊಂಡಿದ್ದು 25 ರನ್‌ಗಳನ್ನಷ್ಟೇ ಬಿಟ್ಟುಕೊಟ್ಟಿದ್ದಾರೆ. ಇನ್ನು ರಮಣ್‌ದೀಪ್ ಸಿಂಗ್ ಎರಡು ವಿಕೆಟ್ ಪಡೆದುಕೊಂಡರಾದರೂ ದುಬಾರಿಯಾದರು. ಡೇನಿಯಲ್ ಸ್ಯಾಮ್ಸ್ ಹಾಗೂ ಮಾರ್ಕಂಡೆ ತಲಾ ಒಂದು ವಿಕೆಟ್ ಸಂಪಾದಿಸಿದ್ದಾರೆ.

ಪ್ಲೇಯಿಂಗ್ XI ಹೀಗಿದೆ: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಸ್ಪ್ರೀತ್ ಬುಮ್ರಾ, ಮಯಾಂಕ್ ಮಾರ್ಕಂಡೆ

ಬೆಂಚ್: ಕೀರನ್ ಪೊಲಾರ್ಡ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಾಧ್ವಲ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಸಂಜಯ್ ಯಾದವ್

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್
ಬೆಂಚ್: ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಟಿಮ್ ಸೀಫರ್ಟ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಲಲಿತ್ ಯಾದವ್

Story first published: Saturday, May 21, 2022, 21:50 [IST]
Other articles published on May 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X