For Quick Alerts
ALLOW NOTIFICATIONS  
For Daily Alerts
 

MI vs SRH: ತ್ರಿಪಾಠಿ, ಗಾರ್ಗ್ ಅಬ್ಬರ; ಮುಂಬೈ ಇಂಡಿಯನ್ಸ್‌ಗೆ 194 ರನ್‌ಗಳ ಕಠಿಣ ಗುರಿ ನೀಡಿದ ಸನ್ ರೈಸರ್ಸ್

IPL 2022: Mumbai Indians need 194 runs to win against Sunrisers Hyderabad

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ 65ನೇ ಪಂದ್ಯದಲ್ಲಿ ಇಂದು ( ಮೇ 17 ) ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 193 ರನ್ ಚಚ್ಚಿ ಎದುರಾಳಿ ಮುಂಬೈ ಇಂಡಿಯನ್ಸ್ ತಂಡಕ್ಕೆ 194 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.

ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಪರ ಈ ಬಾರಿ ಅಭಿಷೇಕ್ ಶರ್ಮಾ ಜತೆ ಕೇನ್ ವಿಲಿಯಮ್ಸನ್ ಬದಲು ಪ್ರಿಯಮ್ ಗಾರ್ಗ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿದರು. ಪರಿಣಾಮವಾಗಿ ಸನ್ ರೈಸರ್ಸ್ ಹೈದರಾಬಾದ್ ಕಳೆದ ಪಂದ್ಯಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಆರಂಭವನ್ನು ಪಡೆದುಕೊಂಡಿತು.

ಅಭಿಷೇಕ್ ಶರ್ಮಾ 9 ರನ್‌ಗಳಿಗೆ ಔಟ್ ಆದರೆ, ಪ್ರಿಯಂ ಗಾರ್ಗ್ 26 ಎಸೆತಗಳಲ್ಲಿ 42 ರನ್ ಚಚ್ಚಿ ಅಬ್ಬರಿಸಿದರು. ತಂಡ 18 ರನ್ ಗಳಿಸಿದ್ದಾಗ ಅಭಿಷೇಕ್ ಶರ್ಮಾ ವಿಕೆಟ್ ಬೀಳುತ್ತಿದ್ದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಹುಲ್ ತ್ರಿಪಾಠಿ 44 ಎಸೆತಗಳಲ್ಲಿ 76 ರನ್ ಬಾರಿಸಿ ಅಬ್ಬರಿಸಿದರು. ಎರಡನೇ ವಿಕೆಟ್‌ಗೆ ಜತೆಯಾದ ಪ್ರಿಯಂ ಗಾರ್ಗ್ ಮತ್ತು ರಾಹುಲ್ ತ್ರಿಪಾಠಿ ಜೋಡಿ 78 ರನ್‌ಗಳ ಜತೆಯಾಟವಾಡಿತು. ಇನ್ನುಳಿದಂತೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 22 ಎಸೆತಗಳಲ್ಲಿ 38 ರನ್ ಕಲೆಹಾಕಿ ಮಿಂಚಿದರೆ, ಏಡನ್ ಮಾರ್ಕ್ರಮ್ 3 ರನ್, ವಾಷಿಂಗ್ಟನ್ ಸುಂದರ್ 9 ರನ್ ಮತ್ತು ಕೇನ್ ವಿಲಿಯಮ್ಸನ್ ಅಜೇಯ 8 ರನ್ ಕಲೆ ಹಾಕಿದರು.

ಇತ್ತ ಮುಂಬೈ ಇಂಡಿಯನ್ಸ್ ತಂಡದ ಪರ ರಮಣ್ ದೀಪ್ ಸಿಂಗ್ 3 ವಿಕೆಟ್ ಪಡೆದು ಗಮನಾರ್ಹ ಪ್ರದರ್ಶನ ನೀಡಿದರೆ, ಡೇನಿಯಲ್ ಸ್ಯಾಮ್ಸ್, ಜಸ್ ಪ್ರೀತ್ ಬೂಮ್ರಾ ಮತ್ತು ರಿಲೇ ಮೆರೆಡಿತ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:
ಮುಂಬೈ ಇಂಡಿಯನ್ಸ್ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ರೋಹಿತ್ ಶರ್ಮಾ(ನಾಯಕ), ಡೇನಿಯಲ್ ಸಾಮ್ಸ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ಸಂಜಯ್ ಯಾದವ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್, ಮಯಾಂಕ್ ಮಾರ್ಕಂಡೆ

ಸನ್ ರೈಸರ್ಸ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಪ್ರಿಯಮ್ ಗಾರ್ಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್, ಟಿ ನಟರಾಜನ್

Story first published: Tuesday, May 17, 2022, 21:32 [IST]
Other articles published on May 17, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+