ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

CSK vs MI: ಮುಂಬೈ ಬಿಗಿ ಬೌಲಿಂಗ್ ದಾಳಿ; ಸಾಧಾರಣ ಮೊತ್ತಕ್ಕೆ ಚೆನ್ನೈ ಸರ್ವಪತನ

 IPL 2022: Mumbai Indians Needs 98 Runs To Win Against Chennai Super Kings

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಐಪಿಎಲ್ 15ನೇ ಆವೃತ್ತಿಯಲ್ಲಿನ 59ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಟಾಸ್ ನಾಯಕ ರೋಹಿತ್ ಶರ್ಮ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ ಕಡಿಮೆ ಮೊತ್ತಕ್ಕೆ ಆಲೌಟ್ ಆಯಿತು.

CSK vs MI: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗCSK vs MI: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗ

ಮೊದಲು ಬ್ಯಾಟಿಂಗ್ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 16 ಓವರ್‌ಗಳಲ್ಲಿ 10 ವಿಕೆಟ್ ನಷ್ಟಕ್ಕೆ 97 ರನ್ ಕಲೆಹಾಕಿದ್ದು, ಮುಂಬೈ ಇಂಡಿಯನ್ಸ್ ಗೆಲ್ಲಲು 98 ರನ್‌ಗಳ ಟಾರ್ಗೆಟ್ ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಮತ್ತು ಡೆವೊನ್ ಕಾನ್ವೇ ಅವರಿಂದ ಉತ್ತಮ ಆರಂಭ ಮೂಡಿಬರಲಿಲ್ಲ. ಇನ್ನಿಂಗ್ಸ್‌ನ 2ನೇ ಎಸೆತದಲ್ಲಿಯೇ ಡೆವೊನ್ ಕಾನ್ವೇ ಸೊನ್ನೆ ಸುತ್ತಿದರು. ಡೆನಿಯಲ್ ಸ್ಯಾಮ್ಸ್‌ಗೆ ವಿಕೆಟ್ ಒಪ್ಪಿಸಿದರು.

 IPL 2022: Mumbai Indians Needs 98 Runs To Win Against Chennai Super Kings

ಮೂರನೇ ಕ್ರಮಾಂಕದಲ್ಲಿ ಬಂದ ಮೋಹಿನ್ ಅಲಿ ಕೂಡ ಯಾವುದೇ ರನ್ ಗಳಿಸದೆ ಔಟಾದರು. ನಂತರ ಬಂದ ರಾಬಿನ್ ಉತ್ತಪ್ಪ ಕೂಡ ಮುಂಬೈ ಇಂಡಿಯನ್ಸ್ ಬೌಲರ್‌ಗಳಿಗೆ ಪ್ರತಿರೋಧ ತೋರದೆ ವಿಕೆಟ್ ಒಪ್ಪಿಸಿದರು. 5 ರನ್‌ಗಳಿಗೆ ಮೊದಲ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅಲ್ಲಿಂದ ಕುಂಟುತ್ತಾ ಸಾಗಿದ ಸಿಎಸ್‌ಕೆ ಬ್ಯಾಟಿಂಗ್ ಲೈನ್ಅಪ್ ಆಗೊಂದು ಹೀಗೊಂದು ಬೌಂಡರಿ ಗಳಿಸಿದರು.

ಇನ್ನುಳಿದಂತೆ ಅಂಬಟಿ ರಾಯುಡು 10 ರನ್ ಗಳಿಸಿ ಔಟಾದರೆ, ಶಿವಂ ದುಬೆ 10 ಕೂಡ ರನ್ ಗಳಿಸಿ ವಿಕೆಟ್ ಚೆಲ್ಲಿದರು. ಡಿಜೆ ಬ್ರಾವೋ 12 ರನ್ ಗಳಿಸಿ ಔಟಾದರೆ, ಸಮರ್ಜಿತ್ ಸಿಂಗ್ 2 ರನ್ ಗಳಿಸಿದರು. ಮಹೇಶ್ ತೀಕ್ಷಣ ಸೊನ್ನೆ ಸುತ್ತಿದರು.

CSK vs MI: ಚೆನ್ನೈ-ಮುಂಬೈ ಪಂದ್ಯದಲ್ಲಿ ಡಿಆರ್‌ಎಸ್‌ ಬಳಕೆಗೆ ಅಡ್ಡಿ: ಕಾರಣ ಏನ್ ಗೊತ್ತಾ?CSK vs MI: ಚೆನ್ನೈ-ಮುಂಬೈ ಪಂದ್ಯದಲ್ಲಿ ಡಿಆರ್‌ಎಸ್‌ ಬಳಕೆಗೆ ಅಡ್ಡಿ: ಕಾರಣ ಏನ್ ಗೊತ್ತಾ?

ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ನಾಯಕ ಎಂಎಸ್ ಧೋನಿ ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ಸಹ ಮುಂಬೈ ಬೌಲರ್‌ಗಳಿಗೆ ಪ್ರತಿರೋಧ ನೀಡುವಲ್ಲಿ ವಿಫಲರಾದರು. ಎಂಎಸ್ ಧೋನಿ 33 ಎಸೆತಗಳಲ್ಲಿ 36 ರನ್ ಗಳಿಸಿ ಅಜೇಯರಾಗುಳಿದರು.

Robin Uthappa ಫೀಲ್ಡಿಂಗ್‌ನಲ್ಲಿ ದೊಡ್ಡ ಎಡವಟ್ಟು | Oneindia Kannada

ಇನ್ನು ಮುಂಬೈ ಇಂಡಿಯನ್ಸ್ ತಂಡದ ಬೌಲರ್ ಡೆನಿಯಲ್ ಸ್ಯಾಮ್ಸ್ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 16 ರನ್ ನೀಡಿ 3 ವಿಕೆಟ್ ಪಡೆದರು. ಇನ್ನುಳಿದಂತೆ ರಿಲೆ ಮೆರಿಡಿತ್, ಕುಮಾರ್ ಕಾರ್ತಿಕೇಯ ತಲಾ 2 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ, ರಮಣ್‌ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು.

Story first published: Thursday, May 12, 2022, 21:46 [IST]
Other articles published on May 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X