MI IPL 2022 Schedule : ಮುಂಬೈ ಇಂಡಿಯನ್ಸ್ ಯಾರ ವಿರುದ್ಧ ಎಷ್ಟು ಬಾರಿ ಸೆಣಸಾಡಲಿದೆ? ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಾರ್ಚ್ ೨೬ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕಳೆದ ಬಾರಿಯ ಐಪಿಎಲ್ ಟೂರ್ನಿಯ ರನ್ನರ್ಅಪ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಸಂಜೆ 7.30ಕ್ಕೆ ನಿಗದಿಯಾಗಿದ್ದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯ ಮೊದಲನೇ ದಿನ ಕೇವಲ ಒಂದು ಪಂದ್ಯ ಮಾತ್ರ ನಡೆಯಲಿದ್ದು ಎರಡನೇ ದಿನ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಹೌದು, ಮಾರ್ಚ್ 27ರ ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆದರೆ, ಅದೇ ದಿನ ಸಂಜೆ 7.30ಕ್ಕೆ ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯ ನಡೆಯಲಿದೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು ೧೨ ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ಲೀಗ್ ಹಂತದ ಒಟ್ಟು 70 ಪಂದ್ಯಗಳು 58 ದಿನಗಳಲ್ಲಿ ನಡೆಯಲಿವೆ.
ಇನ್ನು ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿಯೇ ಹೊರಬಿದ್ದಿದ್ದ ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಗೂ ಮುನ್ನ ನಡೆದ ಮೆಗಾ ಹರಾಜು ಪ್ರಕ್ರಿಯೆಯಿಂದಾಗಿ ಹಲವಾರು ಬದಲಾವಣೆಗಳಿಗೆ ಒಳಗಾಗಿದೆ. ಹೌದು, ಮುಂಬೈ ಇಂಡಿಯನ್ಸ್ ಪರ ಕಳೆದ ಹಲವು ಐಪಿಎಲ್ ಆವೃತ್ತಿಗಳಲ್ಲಿ ಕಣಕ್ಕಿಳಿದಿದ್ದ ಆಟಗಾರರು ಈ ಬಾರಿಯ ಹರಾಜಿನಲ್ಲಿ ಬೇರೆ ತಂಡಗಳ ಪಾಲಾಗಿದ್ದು, ತಂಡಕ್ಕೆ ನೂತನ ಹಾಗೂ ಹಲವಾರು ಯುವ ಆಟಗಾರರ ಆಗಮನವಾಗಿದೆ. ಅಷ್ಟೆ ಅಲ್ಲದೇ ಈ ಬಾರಿಯ ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳು ಮಹಾರಾಷ್ಟ್ರದಲ್ಲಿಯೇ ಆಯೋಜನೆಯಾಗಿರುವುದರಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ತುಸು ಹೆಚ್ಚಿನ ಅನುಕೂಲವಿರಲಿದೆ ಎಂದರೆ ತಪ್ಪಾಗಲಾರದು.
ಇನ್ನು ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು ೧೪ ಲೀಗ್ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು, ಮುಂಬೈ ಇಂಡಿಯನ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಕಂಡಂತಿದೆ..

ಮುಂಬೈ ಇಂಡಿಯನ್ಸ್ ವೇಳಾಪಟ್ಟಿ
27 ಮಾರ್ಚ್ 2022 - 3.30 pm ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ - ಬ್ರಬೌರ್ನ್ ಕ್ರೀಡಾಂಗಣ
2 ಏಪ್ರಿಲ್ 2022 - 3.30 pm - ಮುಂಬೈ ಇಂಡಿಯನ್ಸ್ vs ರಾಜಸ್ಥಾನ ರಾಯಲ್ಸ್ - ಡಿವೈ ಪಾಟೀಲ್ ಕ್ರೀಡಾಂಗಣ
6 ಏಪ್ರಿಲ್ 2022 - 7.30 pm - ಮುಂಬೈ ಇಂಡಿಯನ್ಸ್ vs ಕೋಲ್ಕತಾ ನೈಟ್ ರೈಡರ್ಸ್ - ಎಂಸಿಎ ಕ್ರೀಡಾಂಗಣ, ಪುಣೆ
9 ಏಪ್ರಿಲ್ 2022 - 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ - ಎಂಸಿಎ ಕ್ರೀಡಾಂಗಣ, ಪುಣೆ
13 ಏಪ್ರಿಲ್ 2022- 7.30 pm- ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ - ಎಂಸಿಎ ಕ್ರೀಡಾಂಗಣ, ಪುಣೆ
16 ಏಪ್ರಿಲ್ 2022 - 3.30 pm - ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್ - ಬ್ರಬೌರ್ನ್ ಕ್ರೀಡಾಂಗಣ
21 ಏಪ್ರಿಲ್ 2022- 7.30 pm- ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಡಿವೈ ಪಾಟೀಲ್ ಕ್ರೀಡಾಂಗಣ
24 ಏಪ್ರಿಲ್ 2022 - 7.30 pm- ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್ - ವಾಂಖೆಡೆ ಕ್ರೀಡಾಂಗಣ
30 ಏಪ್ರಿಲ್ 2022- 3.30 pm- ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ - ಡಿವೈ ಪಾಟೀಲ್ ಕ್ರೀಡಾಂಗಣ
6 ಮೇ 2022- 7.30 pm- ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್ - ಬ್ರಬೌರ್ನ್ ಕ್ರೀಡಾಂಗಣ
9 ಮೇ 2022- 7.30 pm- ಮುಂಬೈ ಇಂಡಿಯನ್ಸ್ vs ಕೋಲ್ಕತಾ ನೈಟ್ ರೈಡರ್ಸ್ - ಡಿವೈ ಪಾಟೀಲ್ ಕ್ರೀಡಾಂಗಣ
12 ಮೇ 2022- 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ - ವಾಂಖೆಡೆ ಕ್ರೀಡಾಂಗಣ
17 ಮೇ 2022- ರಾತ್ರಿ 7.30- ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್ - ವಾಂಖೆಡೆ ಕ್ರೀಡಾಂಗಣ
21 ಮೇ 2022- ಸಂಜೆ 7.30- ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ - ವಾಂಖೆಡೆ ಕ್ರೀಡಾಂಗಣ

ತವರಿನ ಅನುಕೂಲ ಮುಂಬೈಗಿರುತ್ತಾ?
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳು ಮಹಾರಾಷ್ಟ್ರದಲ್ಲೆ ನಡೆಯುವುದರಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಅನುಕೂಲವಾಗಲಿದೆ ಎನ್ನಲಾಗುತ್ತಿದ್ದು, ವಾಂಖೆಡೆ ಹೊರತುಪಡಿಸಿ ಉಳಿದ ಕ್ರೀಡಾಂಗಣಗಳಲ್ಲಿ ಪಂದ್ಯ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ನೀಡಿದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಬೆಂಬಲದ ಅನುಕೂಲವಾಗಬಹುದು, ಆದರೆ ಮುಂಬೈ ಇಂಡಿಯನ್ಸ್ ತಂಡದ ೪ ಲೀಗ್ ಪಂದ್ಯಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಪಂದ್ಯಗಳು ಬ್ರಬೋರ್ನ್ ಮತ್ತು ಡಿವೈ ಪಾಟಿಲ್ ಕ್ರೀಡಾಂಗಣಗಳಲ್ಲಿ ಆಯೋಜನೆಯಾಗಿದ್ದು, ಆ ಪಿಚ್‌ಗಳೂ ಸಹ ಮುಂಬೈಗೆ ಇತರೆ ತಂಡಗಳಂತೆ ಹೊಸ ಅನುಭವವನ್ನೇ ನೀಡಲಿವೆ.

ಮುಂಬೈ ಇಂಡಿಯನ್ಸ್ ತಂಡ
ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಎನ್ ತಿಲಕ್ ವರ್ಮಾ, ಸಂಜಯ್ ಯಾದವ್, ಜೋಫ್ರಾ ಆರ್ಚರ್, ಡೇನಿಯಲ್ ಸಾಮ್ಸ್, ಟೈಮಲ್ ಮಿಲ್ಸ್, ಟಿಮ್ ಡೇವಿಡ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ರಮಣದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಫ್ಯಾಬಿಯನ್ ಅಲೆನ್, ಆರ್ಯನ್ ಜುಯಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications