For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಸೋತ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಗೆ ದಂಡದ ಬರೆ!

IPL 2022: Mumbai Indians skipper Rohit Sharma fined for maintaining slow overrate

ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಟೂರ್ನಿಯ ಚೊಚ್ಚಲ ಪಂದ್ಯವನ್ನು ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅಘಾತಕಾರಿ ಸೋಲು ಅನುಭವಿಸಿದ್ದು ಸೋಲಿನೊಂದಿಗೆ ಟೂರ್ನಿಯ ಅಭಿಯಾನ ಆರಂಭಿಸಿದೆ. ಈ ಮಧ್ಯೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಕಹಿಸುದ್ದಿ ಬಂದಿದೆ. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ದಂಡಕ್ಕೆ ಗುರಿಯಾಗಿದ್ದಾರೆ.

ಮುಂಬೈ ಇಂಡಿಯನ್ಸ್ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯವನ್ನು ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಿದೆ. ಈ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ನಡೆಸಿದ್ದ ಮುಂಬೈ ಇಂಡಿಯನ್ಸ್ ನಿಗದಿತ ಸಮಯದಲ್ಲಿ ಬೌಲಿಂಗ್ ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಿಧಾನಗತಿಯ ಬೌಲಿಂಗ್‌ಗಾಗಿ ದಂಡ ತೆತ್ತ ಮೊದಲ ನಾಯಕ ಎನಿಸಿಕೊಂಡಿದ್ದಾರೆ ರೋಹಿತ ಶರ್ಮಾ.

ಈ ಬಾರಿಯ ಐಪಿಎಲ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಮಾಂಚನಕಾರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. 178 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಪ್ರಮುಖ ಆಟಗಾರರು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲವಾದರು ಕೂಡ ಲಲಿತ್ ಯಾದವ್ ಹಾಗೂ ಅಕ್ಷರ್ ಪಟೇಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಇನ್ನೂ 10 ಎಸೆತಗಳು ಬಾಕಿಯಿರುವಂತೆಯೇ ಗೆಲುವು ಸಾಧಿಸಲು ಕಾರಣವಾದರು.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ 178 ರನ್‌ಗಳ ಸವಾಲಿನ ಗುರಿ ನೀಡಿತ್ತು. ಮುಂಬೈ ಇಂಡಿಯನ್ಸ್ ಪರವಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 67 ರನ್‌ಗಳ ಕೊಡುಗೆ ನೀಡಿದ್ದಾರೆ. ರೋಹಿತ್ ಶರ್ಮಾ 41 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಇಶಾನ್ ಕಿಶನ್ ಅಂತಿಮ ಹಂತದವರೆಗೂ ಭರ್ಜರಿ ಹೋರಾಟವನ್ನು ನಡೆಸಿದ್ದು 81 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. 48 ಎಸೆತ ಎದುರಿಸಿದ ಇಶಾನ್ ಕಿಶನ್ ಎರಡು ಸಿಕ್ಸರ್ ಹಾಗೂ 11 ಬೌಂಡರಿ ಸಿಡಿಸಿ ಮಿಂಚಿದ್ದಾರೆ.

ಇನ್ನು ಈ ಸವಾಲಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭಿಕ ಕುಸಿತ ಕಂಡಿತು. ಎರಡು ರನ್‌ಗಳ ಅಂತರದಲ್ಲಿ 3 ವಿಕೆಟ್ ಕಳೆದುಕೊಳ್ಳುವ ಮೂಲಕ ತಂಡ ಭಾರೀ ಹಿನ್ನಡೆಯನ್ನು ಅನುಭವಿಸಿತು. ನಂತರ 72 ರನ್‌ಗಳಿಗೆ 5 ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತ ಅನುಭವಿಸಿತು. ಕನಿಷ್ಠ ಮೊತ್ತಕ್ಕೆ ಡೆಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡಾಗ ಮುಂಬೈ ಇಂಡಿಯನ್ಸ್ ಸುಲಭ ಗೆಲುವು ಸಾಧಿಸಲಿದೆ ಎಂದು ಎಲ್ಲರೂ ಭಾವಿಸಿದ್ದರು. ನಂತರ ಬಂದ ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್ ಮುಂಬೈ ಇಂಡಿಯನ್ಸ್ ನಿರೀಲ್ಷಿಸಿರದ ರೀತಿಯ ಸೋಲುಣಿಸಿದರು.

ಮುಂಬೈ ಇಂಡಿಯನ್ಸ್, ಪ್ಲೇಯಿಂಗ್ XI: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಅನ್ಮೋಲ್ಪ್ರೀತ್ ಸಿಂಗ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಜಸ್ಪ್ರೀತ್ ಬುಮ್ರಾ, ಬೆಸಿಲ್ ಥಂಪಿ
ಬೆಂಚ್: ಆರ್ಯನ್ ಜುಯಲ್, ಡೆವಾಲ್ಡ್ ಬ್ರೆವಿಸ್, ಸಂಜಯ್ ಯಾದವ್, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ರಿಲೆ ಮೆರೆಡಿತ್, ಫ್ಯಾಬಿಯನ್ ಅಲೆನ್, ರಮಣದೀಪ್ ಸಿಂಗ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ರಿಷಬ್ ಪಂತ್(ವಿಕೆಟ್ ಕೀಪರ್/ನಾಯಕ), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಕಮಲೇಶ್ ನಾಗರಕೋಟಿ
ಬೆಂಚ್: ಶ್ರೀಕರ್ ಭರತ್, ಸರ್ಫರಾಜ್ ಖಾನ್, ಚೇತನ್ ಸಕರಿಯಾ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

Story first published: Monday, March 28, 2022, 9:48 [IST]
Other articles published on Mar 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+