CSK vs MI: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಟ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡಗಳು ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಈ ಎರಡೂ ತಂಡಗಳೂ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅಕ್ಷರಶಃ ಮುಗ್ಗರಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಒಂಬತ್ತನೇ ಸ್ಥಾನದಲ್ಲಿದೆ ಹಾಗೂ ಮುಂಬೈ ಇಂಡಿಯನ್ಸ್ ಅಂತಿಮ ಸ್ಥಾನದಲ್ಲಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಈಗಾಗಲೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಅಧಿಕೃತವಾಗಿ ಕಳೆದುಕೊಂಡಿದ್ದು, ಈ ಪಂದ್ಯದ ಫಲಿತಾಂಶ ಇತರೆ ಯಾವುದೇ ತಂಡಗಳ ಮೇಲೂ ಸಹ ಪರಿಣಾಮವನ್ನು ಬೀರದೇ ಇರದ ಕಾರಣ ಕುತೂಹಲ ಹಾಗೂ ನಿರೀಕ್ಷೆಯನ್ನು ಹುಟ್ಟುಹಾಕುವಲ್ಲಿ ವಿಫಲವಾಗಿದೆ.
ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ, ಇದು ಇತ್ತಂಗಳ ನಡುವೆ ಈ ಬಾರಿಯ ಟೂರ್ನಿಯಲ್ಲಿ ನಡೆಯಲಿರುವ ಎರಡನೇ ಮುಖಾಮುಖಿ ಪಂದ್ಯವಾಗಿದ್ದು, ಇತ್ತಂಡಗಳ ನಡುವೆ ಏಪ್ರಿಲ್ 21ರಂದು ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 3 ವಿಕೆಟ್‌ಗಳ ಗೆಲುವನ್ನು ಸಾಧಿಸಿತ್ತು. ಇನ್ನು ಎರಡೂ ತಂಡಗಳ ನಡುವೆ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.
ಒಟ್ಟಾರೆ ಐಪಿಎಲ್ ಮುಖಾಮುಖಿ:
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 33 ಪಂದ್ಯಗಳು ನಡೆದಿದ್ದು, ಈ ಪೈಕಿ ಮುಂಬೈ ಇಂಡಿಯನ್ಸ್ 19 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 14 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಒಟ್ಟಾರೆ ಇಂಡಿಯನ್ ಪ್ರೀಮಿಯರ್ ಲೀಗ್ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಮುಖಾಮುಖಿ:
ಇನ್ನು ಈ ಬಾರಿಯ ಐಪಿಎಲ್ ಆವೃತ್ತಿಯ ಮುಖಾಮುಖಿಯ ಪಂದ್ಯವೂ ಸೇರಿದಂತೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಮುಂಬೈ ಇಂಡಿಯನ್ಸ್ ಇನ್ನುಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಕಳೆದ ಆವೃತ್ತಿಯ ಮುಖಾಮುಖಿ:
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಲೀಗ್ ಹಂತದ ಎರಡು ಪಂದ್ಯಗಳು ಮುಖಾಮುಖಿಯಾಗಿದ್ದವು ಹಾಗೂ ಈ ಪೈಕಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವನ್ನು ಸಾಧಿಸಿತ್ತು ಹಾಗೂ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದು ಬೀಗಿತ್ತು,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications