ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: CSK vs MI: ಪ್ರಮುಖ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟ ದಿಗ್ಗಜ ಆಟಗಾರರು

IPL 2022: Mumbai Indians vs Chennai Super Kings players records and approaching milestones

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಈ ತಂಡಗಳ ನಡುವಿನ ಎರಡನೇ ಸೆಣೆಸಾಟ ಇದಾಗಿದ್ದು ಈ ಪಂದ್ಯದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮುಂಬೈ ಇಂಡಿಯನ್ಸ್ ಈಗಾಗಲೇ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದು ಚೆನ್ನೈ ಸೂಪರ್ ಕಿಂಗ್ಸ್ ಇನ್ನೂ ಪ್ಲೇಆಫ್ ಸ್ಪರ್ಧೆಯಲ್ಲಿ ಮುಂದುವರಿದಿದೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್‌ನಲ್ಲಿ ಈವರೆಗೆ ಒಟ್ಟು 33 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ 19 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಸಿಎಸ್‌ಕೆ 14 ಪಂದ್ಯಗಳಲ್ಲಿ ಗೆದ್ದಿದೆ. ಆದರೆ ಈ ಟೂರ್ನಿಯಲ್ಲಿ ನಡೆದ ಮೊದಲ ಸುತ್ತಿನ ಮುಖಾಮುಖಿಯಲ್ಲಿ ಸಿಎಸ್‌ಕೆ ಮುಂಬೈ ವಿರುದ್ಧ 3 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು.

ಸಾಧನೆಯ ಸಂಕಲ್ಪ: 9 ವರ್ಷಗಳ ನಂತರ ತವರಿಗೆ ಮರಳುತ್ತಿರುವ MI ಆಟಗಾರನ ರೋಚಕ ಕಥೆಸಾಧನೆಯ ಸಂಕಲ್ಪ: 9 ವರ್ಷಗಳ ನಂತರ ತವರಿಗೆ ಮರಳುತ್ತಿರುವ MI ಆಟಗಾರನ ರೋಚಕ ಕಥೆ

IPL 2022: Mumbai Indians vs Chennai Super Kings players records and approaching milestones

* ಚೆನ್ನೈ ಸೂಪರ್ ಕಿಂಗ್ಸ್ ಅನುಭವಿ ಆಟಗಾರ ಬ್ಯಾಟರ್ ಅಂಬಾಟಿ ರಾಯುಡು ಸಿಎಸ್‌ಕೆ ಪರವಾಗಿ 150 ಬೌಂಡರಿಗಳನ್ನು ದಾಖಲಿಸಿಸಲು 8 ಬೌಂಡರಿಗಳ ಅಗತ್ಯವಿದೆ. ಇನ್ನು ಐಪಿಎಲ್‌ನಲ್ಲಿ ರಾಯುಡು 350 ಬೌಂಡರಿಗಳನ್ನು ಪೂರ್ಣಗೊಳಿಸಲು ಇನ್ನು ಕೇವಲ 3 ಬೌಂಡರಿಗಳ ಅಗತ್ಯವಿದೆ.

* ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ಡ್ವೇನ್ ಬ್ರಾವೋ ಆಡುವ ಬಳಗಕ್ಕೆ ಆಯ್ಕೆಯಾಗಿ ಮುಂಬೈ ಇಮಡಿಯನ್ಸ್ ವಿರುದ್ಧ 3 ಬೌಂಡರಿಗಳನ್ನು ಹೊಡೆದರೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 100 ಬೌಂಡರಿಗಳನ್ನು ಸಿಡಿಸಿದಂತಾಗುತ್ತದೆ.

* ಚೆನ್ನೈ ಸೂಪರ್ ಕಿಂಗ್ಸ್ ಅನುಭವಿ ಬ್ಯಾಟರ್ ರಾಬಿನ್ ಉತ್ತಪ್ಪ ಐಪಿಎಲ್‌ನಲ್ಲಿ ಮಹತ್ವದ ಮೈಲಿಗಲಲ್ಉ ದಾಡುವ ಅವಕಾಶ ಹೊಂದಿದ್ದಾರೆ. ಈ ಪಂದ್ಯದಲ್ಲಿ 49 ರನ್‌ಗಳನ್ನು ಗಳಿಸಿದರೆ 5000 ರನ್‌ಗಳನ್ನು ಪೂರೈಸಿದ ಆಟಗಾರರ ಪಟ್ಟಿಗೆ ಉತ್ತಪ್ಪ ಸೇರಿಕೊಳ್ಳಲಿದ್ದಾರೆ.

IPL ಮುಗಿದ ಬಳಿಕ ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿಯೇ ಇಲ್ಲ: ಒಂದರ ಹಿಂದೆ ಮತ್ತೊಂದು ಸರಣಿIPL ಮುಗಿದ ಬಳಿಕ ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿಯೇ ಇಲ್ಲ: ಒಂದರ ಹಿಂದೆ ಮತ್ತೊಂದು ಸರಣಿ

* ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಕೂಡ ಮಹತ್ವದ ಮೈಲಿಗಲ್ಲು ದಾಟುವ ಅವಕಾಶ ಹೊಂದಿದ್ದಾರೆ. ಐಪಿಎಲ್‌ನಲ್ಲಿ 5000 ರನ್‌ಗಳ ಮೈಲಿಗಲ್ಲನ್ನು ತಲುಪಲು ಎಂಎಸ್ ಧೋನಿಗೆ 91 ರನ್‌ಗಳ ಅಗತ್ಯವಿದೆ.

* ಐಪಿಎಲ್‌ನಲ್ಲಿ 50 ಸಿಕ್ಸರ್‌ಗಳನ್ನು ಪೂರೈಸಲು ಸಿಎಸ್‌ಕೆ ಆಲ್‌ರೌಂಡರ್ ಮೊಯಿನ್ ಅಲಿ ಕೇವಲ 2 ಸಿಕ್ಸರ್‌ಗಳ ದೂರದಲ್ಲಿದ್ದಾರೆ.

* ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಮುಂಬೈ ಫ್ರಾಂಚೈಸಿ ಪರವಾಗಿ 5000 ರನ್‌ಗಳಿಸಲು 86 ರನ್‌ಗಳನ್ನು ಗಳಿಸಬೇಕಿದೆ.

* ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಕಿರಾನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಪರವಾಗಿ 4000 ರನ್‌ಗಳಿಸುವ ಅವಕಾಶ ಹೊಂದಿದ್ದಾರೆ. ಇದಕ್ಕಾಗಿ ಅವರು 85 ರನ್‌ಗಳನ್ನು ಗಳಿಸಬೇಕಿದೆ.

* ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್‌ಗೆ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಹಿಂದಿಕ್ಕುವ ಅವಕಾಶವಿದೆ. 23 ರನ್‌ಗಳನ್ನು ಗಳಿಸಿದರೆ ಪಾಂಡ್ಯ ಅವರನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಲಿಲ್ಲದ್ದಾರೆ. ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರವಾಗಿ 1476 ರನ್ ಗಳಿಸಿದ್ದರೆ, ಕಿಶನ್ 1454 ರನ್ ಗಳಿಸಿದ್ದಾರೆ.

* ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಲು ಎಂಐ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಇನ್ನು ಕೇವಲ 5 ವಿಕೆಟ್‌ಗಳ ಅಗತ್ಯವಿದೆ. ಬೂಮ್ರಾ ಈಗ 143 ವಿಕೆಟ್‌ಗಳನ್ನು ತಂಡದ ಪರವಾಗಿ ಪಡೆದುಕೊಂಡಿದ್ದರೆ ಹರ್ಭಜನ್ ಎಂಐ ಪರವಾಗಿ 147 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.

Story first published: Wednesday, May 11, 2022, 21:04 [IST]
Other articles published on May 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X