ಡೆಲ್ಲಿ ಸೋತರೆ ಆರ್‌ಸಿಬಿ ಪ್ಲೇಆಫ್‌ಗೆ; ಮುಂಬೈ vs ಡೆಲ್ಲಿ ಪಂದ್ಯಗಳಲ್ಲಿ ಹೆಚ್ಚು ಗೆದ್ದ ಬಲಿಷ್ಠ ತಂಡ ಯಾವುದು?

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದ್ದು, ಈಗಾಗಲೇ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಮತ್ತು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಅಧಿಕೃತವಾಗಿ ಲಗ್ಗೆ ಇಟ್ಟಿದ್ದು, ಮೂರನೇ ತಂಡವಾಗಿ ರಾಜಸ್ಥಾನ್ ರಾಯಲ್ಸ್ ಪ್ರವೇಶಿಸುವುದು ಖಚಿತವಾಗಿದೆ.
ಇನ್ನು ಪ್ಲೇಆಫ್ ಸುತ್ತಿನ ಅಂತಿಮ ಸ್ಥಾನಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಈ ಎರಡು ತಂಡಗಳ ಪೈಕಿ ಒಂದು ತಂಡ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದ ತನ್ನ ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದಿದ್ದು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಲೀಗ್ ಹಂತದ ತನ್ನ ಅಂತಿಮ ಪಂದ್ಯದಲ್ಲಿ ಶನಿವಾರ ( ಮೇ 21 ) ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದ್ದು, ಇದು ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳ ನಡೆಯಲಿರುವ ಎರಡನೇ ಮುಖಾಮುಖಿ ಇದಾಗಿದೆ ಹಾಗೂ ಈ ಪಂದ್ಯದಲ್ಲಿ ಗೆದ್ದರೆ 16 ಅಂಕಗಳನ್ನು ಪಡೆದುಕೊಳ್ಳಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸರಿದೂಗಿಸಲಿದೆ. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೆಚ್ಚಿನ ನೆಟ್ ರನ್ ರೇಟ್‌ನ್ನು ಹೊಂದಿರುವ ಕಾರಣ ಈ ಪಂದ್ಯದಲ್ಲಿ ಗೆದ್ದರೆ ಸುಲಭವಾಗಿ ಪ್ಲೇಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಇತ್ತಂಡಗಳ ನಡುವಿನ ಈ ಪಂದ್ಯ ದೊಡ್ಡ ಮಟ್ಟದ ಕುತೂಹಲ ಮೂಡಿಸಿದ್ದು, ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿವೆ. ಇನ್ನು ಇತ್ತಂಡಗಳ ನಡುವೆ ಇದುವರೆಗೂ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡಗಳು ಎಷ್ಟು ಪಂದ್ಯಗಳಲ್ಲಿ ಗೆದ್ದಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟಾರೆ ಐಪಿಎಲ್ ಮುಖಾಮುಖಿ
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟು 31 ಮುಖಾಮುಖಿ ಪಂದ್ಯಗಳು ನಡೆದಿದ್ದು, ಈ ಪೈಕಿ ಮುಂಬೈ ಇಂಡಿಯನ್ಸ್ 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 15 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಡೆದಿರುವ ಒಟ್ಟಾರೆ ಮುಖಾಮುಖಿ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತುಸು ಮುನ್ನಡೆ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ
ಈ ಬಾರಿಯ ಟೂರ್ನಿಯ ಮುಖಾಮುಖಿಯೂ ಸೇರಿದಂತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದರೆ, ಮುಂಬೈ ಇಂಡಿಯನ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮುನ್ನಡೆ ಸಾಧಿಸಿದೆ. ಇನ್ನು ಇತ್ತಂಡಗಳ ನಡುವೆ ಈ ಬಾರಿಯ ಟೂರ್ನಿಯಲ್ಲಿ ನಡೆದಿದ್ದ ಪ್ರಥಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್‌ಗಳ ಜಯ ಸಾಧಿಸಿತ್ತು.

ಕಳೆದ ಆವೃತ್ತಿಯ ಮುಖಾಮುಖಿ
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಲೀಗ್ ಹಂತದ ಎರಡು ಪಂದ್ಯಗಳಲ್ಲಿ ಎದುರಿಸಿತ್ತು ಹಾಗೂ ಈ ಎರಡೂ ಪಂದ್ಯಗಳಲ್ಲಿಯೂ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದು, ಮೇಲುಗೈ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications