For Quick Alerts
ALLOW NOTIFICATIONS  
For Daily Alerts
 

MI vs DC: ಪಂದ್ಯದಲ್ಲಿ ಈ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟಿದ್ದಾರೆ ರೋಹಿತ್ ಶರ್ಮಾ, ವಾರ್ನರ್

IPL 2022: Mumbai Indians vs Delhi Capitals players stats and approaching milestones

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂಬೈ ಇಂಡಿಯನ್ಸ್ ಪಾಲಿಗೆ ಅತಿಕೆಟ್ಟ ಆವೃತ್ತಿ ಎಂದೇ ಹೇಳಬಹುದು. ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡಿದ ತನ್ನ ಮೊದಲ 8 ಪಂದ್ಯಗಳಲ್ಲಿ ಸತತವಾಗಿ ಸೋಲನ್ನು ಅನುಭವಿಸಿದ್ದ ಮುಂಬೈ ಇಂಡಿಯನ್ಸ್ ನಂತರ ಒಂಬತ್ತನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯಿತು. ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರೋಹಿತ್ ಶರ್ಮಾ ಪಡೆ ಕೇವಲ 3 ಪಂದ್ಯಗಳಲ್ಲಿ ಗೆದ್ದು 10 ಪಂದ್ಯಗಳಲ್ಲಿ ಸೋತಿದ್ದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ತನ್ನ 14ನೇ ಪಂದ್ಯದ ಮೂಲಕ ಟೂರ್ನಿಗೆ ಗುಡ್‌ಬೈ ಹೇಳಲಿದೆ.

ಇನ್ನು ಈ ಪಂದ್ಯ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಈಗಾಗಲೇ ಕಳೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಷ್ಟೇನು ಮುಖ್ಯವಾಗಿರದೇ ಇದ್ದರೂ ಈ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪ್ಲೆಆಫ್ ಆಸೆಯನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳಿಗೆ ಬಹುಮುಖ್ಯದ್ದಾಗಿದೆ. ಹೌದು, ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಲಿದ್ದು, ಒಂದುವೇಳೆ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನಕ್ಕೆ ಕುಸಿಯಲಿದೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕನೇ ಸ್ಥಾನಕ್ಕೇರಲಿದ್ದು, ಪ್ಲೇಆಫ್ ಸುತ್ತಿಗೆ ಅಧಿಕೃತವಾಗಿ ಲಗ್ಗೆ ಇಡಲಿದೆ.

ಹೀಗೆ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿರುವ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಇತ್ತಂಡಗಳ ವಿವಿಧ ಆಟಗಾರರು ಹಲವು ಮೈಲಿಗಲ್ಲುಗಳನ್ನು ಮುಟ್ಟುವತ್ತ ಕಣ್ಣಿಟ್ಟಿದ್ದು, ಆ ಆಟಗಾರರ ವಿವರ ಈ ಕೆಳಕಂಡಂತಿದೆ..

* ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಒಂದು ಬೌಂಡರಿ ಬಾರಿಸಿದರೆ ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ 900 ಬೌಂಡರಿ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ನಂತರ ಈ ದಾಖಲೆ ಮಾಡಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

* ಡೇನಿಯಲ್ ಸ್ಯಾಮ್ಸ್ ಈ ಪಂದ್ಯದಲ್ಲಿ ಒಂದು ವಿಕೆಟ್ ಪಡೆದರೆ ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಮೈಲಿಗ್ಲಲ್ಲನ್ನು ಮುಟ್ಟಲಿದ್ದಾರೆ ಹಾಗೂ ಈ ಪಂದ್ಯದಲ್ಲಿ ಒಂದು ಸಿಕ್ಸರ್ ಬಾರಿಸಿದರೆ ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ 50 ಸಿಕ್ಸರ್ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

* ಖಲೀಗ್ ಅಹ್ಮದ್ ಈ ಪಂದ್ಯದಲ್ಲಿ ಎರಡು ವಿಕೆಟ್ ಪಡೆದರೆ, 50 ಐಪಿಎಲ್ ವಿಕೆಟ್ ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ ಹಾಗೂ ಈ ವೇಗವಾಗಿ ಈ ಮೈಲಿಗಲ್ಲನ್ನು ಮುಟ್ಟಿದ ಭಾರತದ ಬೌಲರ್ ಎನಿಸಿಕೊಳ್ಳಲಿದ್ದಾರೆ.

* ಡೇವಿಡ್ ವಾರ್ನರ್ ಈ ಪಂದ್ಯದಲ್ಲಿ ಮೂರು ಬೌಂಡರಿಗಳನ್ನು ಬಾರಿಸಿದರೆ ಡೆಲ್ಲಿ ಫ್ರಾಂಚೈಸಿ ಪರ 200 ಬೌಂಡರಿಗಳನ್ನು ಪೂರೈಸಲಿದ್ದಾರೆ. ಈ ಮೂಲಕ ವಿರೇಂದ್ರ ಸೆಹ್ವಾಗ್, ರಿಷಭ್ ಪಂತ್ ಮತ್ತು ಶಿಖರ್ ಧವನ್ ನಂತರ ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಮೈಲಿಗಲ್ಲನ್ನು ಮುಟ್ಟಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.

Story first published: Saturday, May 21, 2022, 14:08 [IST]
Other articles published on May 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+