ಸಾಕಷ್ಟು ರೋಚಕತೆ ಹುಟ್ಟಿಸಿರುವ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಕದನಕ್ಕೆ ಚಾಲನೆ ದೊರೆತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲಿಗೆ ಬ್ಯಾಟಿಂಗ್ಗೆ ಇಳಿದು ಗುರಿಯನ್ನು ನಿಗದಿಗೊಳಿಸಬೇಕಿದೆ.
ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಡೆವಾಲ್ಡ್ ಬ್ರೇವಿಡ್ ಹಾಗೂ ಹೃತಿಕ್ ಶೋಕೀನ್ ಆಡುವ ಬಳಗದಲ್ಲಿ ಮತ್ತೊಮ್ಮೆ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಸಾಕಷ್ಟು ಕುತೂಹಲ ಮೂಡಿಸಿದ್ದ ಅರ್ಜುನ್ ತೆಂಡೂಲ್ಕರ್ ಈ ಪಂದ್ಯದಲ್ಲಿಯೂ ಆಡುವ ಅವಕಾಶವನ್ನು ಪಡೆದುಕೊಂಡಿಲ್ಲ. ಹೀಗಾಗಿ ಸಂಪೂರ್ಣ ಆವೃತ್ತಿಯಲ್ಲಿ ಅರ್ಜುನ್ ತೆಂಡೂಲ್ಕರ್ ಬೆಂಚ್ ಕಾದಂತಾಗಿದೆ.
ಒಲಿಂಪಿಕ್ನಲ್ಲಿ ಚಿನ್ನದ ಪದಕ ಗೆಲ್ಲುವುದು ನನ್ನ ಅಂತಿಮ ಗುರಿ: ನಿಖತ್ ಜರೀನ್
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಅನಾರೋಗ್ಯದಿಂದ ಕಳೆದ ಎರಡು ವಾರಗಳ ಕಾಲ ವಿಶ್ರಾಂತಿಯಲ್ಲಿದ್ದ ಪೃಥ್ವಿ ಶಾ ತಂಡಕ್ಕೆ ಸೇರಿಕೊಂಡಿದ್ದು ಆಡುವ ಬಳಗದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ಲಲಿತ್ ಯಾದವ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ.
ಆಡುವ ಬಳಗ: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಸ್ಪ್ರೀತ್ ಬುಮ್ರಾ, ಮಯಾಂಕ್ ಮಾರ್ಕಂಡೆ
ಬೆಂಚ್: ಕೀರನ್ ಪೊಲಾರ್ಡ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಾಧ್ವಲ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಸಂಜಯ್ ಯಾದವ್
ಕಬಡ್ಡಿ ವಿಶ್ವಕಪ್ನಲ್ಲಿ ಭಾರತ ತಂಡ ಪ್ರತಿನಿಧಿಸಿದ್ದ ಕರ್ನಾಟಕದ ಉದಯ್ ಚೌಟ ನಿಧನ
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್
ಬೆಂಚ್: ಮನ್ದೀಪ್ ಸಿಂಗ್, ಶ್ರೀಕರ್ ಭರತ್, ಟಿಮ್ ಸೀಫರ್ಟ್, ಲುಂಗಿ ಎನ್ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಲಲಿತ್ ಯಾದವ್