For Quick Alerts
ALLOW NOTIFICATIONS  
For Daily Alerts
 

KKR vs MI: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ

IPL 2022: Mumbai Indians vs Kolkata Knight Riders toss report and playing XI details

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 56ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.

ಮುಂಬೈನ ಡಾ ಡಿ ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಟಿಮ್ ಸೌಥಿ ಮತ್ತು ವರುಣ್ ಚಕ್ರವರ್ತಿ

ಮುಂಬೈ ಇಂಡಿಯನ್ಸ್ ಆಡುವ ಬಳಗ:
ಇಶಾನ್ ಕಿಶನ್ ( ವಿಕೆಟ್ ಕೀಪರ್), ರೋಹಿತ್ ಶರ್ಮಾ(ನಾಯಕ), ತಿಲಕ್ ವರ್ಮಾ, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ ಮತ್ತು ರಿಲೆ ಮೆರೆಡಿತ್

ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ ಮೊಣಕೈ ಗಾಯದ ಸಮಸ್ಯೆಗೆ ಒಳಗಾಗಿದ್ದು, ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಬಿದ್ದಿದ್ದಾರೆ. ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ರಮಣ್ ದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.

ಸದ್ಯ ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳಲ್ಲಿರುವ ತಂಡಗಳ ಕಾಳಗ ಇದಾಗಿದ್ದು, ಮುಂಬೈ ಇಂಡಿಯನ್ಸ್ ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಇಂದಿನ ಪಂದ್ಯದಲ್ಲಿ ಸೋತರೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಳ್ಳಲಿದೆ. ಹೀಗಾಗಿ ಇಂದಿನ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಅತ್ಯಗತ್ಯವಾಗಿದ್ದು, ಗೆಲ್ಲಲೇಬೇಕಾದ ಒತ್ತಡದೊಂದಿಗೆ ಕಣಕ್ಕಿಳಿದಿದೆ. ಇತ್ತ ಈಗಾಗಲೇ ಪ್ಲೇ ಆಫ್ ಆಸೆಯನ್ನು ತ್ಯಜಿಸಿರುವ ಮುಂಬೈ ಇಂಡಿಯನ್ಸ್ ಇಂದಿನ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿದರೆ ಕೆಕೆಆರ್ ತಂಡದ ಪ್ಲೇ ಆಫ್ ಆಸೆಗೆ ತಣ್ಣೀರನ್ನು ಎರಚಲಿದೆ.

Story first published: Monday, May 9, 2022, 19:17 [IST]
Other articles published on May 9, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+