MI vs PBKS: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 23ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸುತ್ತಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ತಲಾ 4 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಪಂಜಾಬ್ ಕಿಂಗ್ಸ್ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದ್ದರೆ, ಮುಂಬೈ ಇಂಡಿಯನ್ಸ್ ಎಲ್ಲಾ ನಾಲ್ಕೂ ಪಂದ್ಯಗಳಲ್ಲಿಯೂ ಸಹ ಸೋಲನ್ನು ಕಂಡಿದೆ. ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಹೀಗೆ ಇಲ್ಲಿಯವರೆಗೂ ಎಲ್ಲಾ ಪಂದ್ಯಗಳಲ್ಲಿಯೂ ಸೋತು ಮುಖಭಂಗಕ್ಕೊಳಗಾಗಿರುವ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಾದರೂ ಗೆದ್ದು ಗೆಲುವಿನ ಖಾತೆ ತೆರೆಯುತ್ತಾ ಅಥವಾ ಸೋತು ತನ್ನ ಕಳಪೆ ಪ್ರದರ್ಶನವನ್ನು ಮುಂದುವರೆಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಆಡುವ ಬಳಗಗಳು
ಮುಂಬೈ ಇಂಡಿಯನ್ಸ್ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಒಡಿಯನ್ ಸ್ಮಿತ್, ಶಾರುಖ್ ಖಾನ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್
ಮುಂಬೈ ಇಂಡಿಯನ್ಸ್ ತಂಡಕ್ಕೆ ಟೈಮಲ್ ಮಿಲ್ಸ್ ಮರಳಿದ್ದು, ರಮಣ್‌ದೀಪ್ ಸಿಂಗ್ ಹೊರಬಿದ್ದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications