ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಟೂರ್ನಿಯ 65ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇನ್ನು ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಕೂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆದುಕೊಳ್ಳುವುದು ಅನುಮಾನ ಎನ್ನಬಹದು. ಹೌದು, ಲೀಗ್ ಹಂತ ಮುಗಿಯುವ ಹೊತ್ತಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಅಂಕಗಳು ಹೆಚ್ಚಿರಲಿದೆ. ಸನ್ ರೈಸರ್ಸ್ ಹೈದರಾಬಾದ್ ಉಳಿದ ಎರಡೂ ಪಂದ್ಯಗಳಲ್ಲಿ ಗೆದ್ದರೂ 14 ಅಂಕಗಳನ್ನು ಪಡೆದುಕೊಳ್ಳಲಿದ್ದು, ಇಷ್ಟು ಅಂಕಗಳಿದ್ದರೆ ಪ್ಲೇ ಆಫ್ ಪ್ರವೇಶ ಅಸಾಧ್ಯ.
ಇನ್ನು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಎಂಟನೇ ಸ್ಥಾನದಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಈ ಪಂದ್ಯದ ಫಲಿತಾಂಶ ಪ್ಲೇ ಆಫ್ ಪ್ರವೇಶಿಸಲು ಯತ್ನಿಸುತ್ತಿರುವ ಇತರೆ ತಂಡಗಳ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದೇ ಹೇಳಬಹುದಾಗಿದ್ದು, ಪಂದ್ಯ ಕುತೂಹಲ ಹುಟ್ಟಿಸುವಲ್ಲಿ ವಿಫಲವಾಗಿದೆ. ಇನ್ನು ಈ ಎರಡೂ ತಂಡಗಳು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..
ಒಟ್ಟಾರೆ ಐಪಿಎಲ್ ಮುಖಾಮುಖಿ
ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ 8 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಮುಖಾಮುಖಿ
ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಉಳಿದ ಒಂದು ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಅಶ್ವಿನ್ ಔಟ್ ಅಂತ ಹೋದ ಮೇಲೆ ವಾಪಸ್ ಕರೆದಿದ್ದೇಕೆ | Oneindia Kannada
ಕಳೆದ ಆವೃತ್ತಿಯ ಮುಖಾಮುಖಿ
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ಪಂದ್ಯಗಳಲ್ಲಿಯೂ ಮುಂಬೈ ಇಂಡಿಯನ್ಸ್ ಜಯ ಸಾಧಿಸಿತ್ತು. ಈ ಮೂಲಕ ಕಳೆದ ಬಾರಿಯ ಆವೃತ್ತಿಯಲ್ಲಿನ ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿದೆ.