MI vs SRH: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 65ನೇ ಪಂದ್ಯ ಇಂದು ( ಮೇ 17 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದು, ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ 199 ರನ್‌ಗೆ ಔಟ್ ಆಗಿ ದ್ವಿಶತಕ ಮಿಸ್ ಮಾಡಿಕೊಂಡ 12 ನತದೃಷ್ಟ ಆಟಗಾರರು ಇವರೇಟೆಸ್ಟ್‌ ಕ್ರಿಕೆಟ್‌ನಲ್ಲಿ 199 ರನ್‌ಗೆ ಔಟ್ ಆಗಿ ದ್ವಿಶತಕ ಮಿಸ್ ಮಾಡಿಕೊಂಡ 12 ನತದೃಷ್ಟ ಆಟಗಾರರು ಇವರೇ

ಆಡುವ ಬಳಗಗಳು:

ಮುಂಬೈ ಇಂಡಿಯನ್ಸ್ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ರೋಹಿತ್ ಶರ್ಮಾ(ನಾಯಕ), ಡೇನಿಯಲ್ ಸಾಮ್ಸ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ಸಂಜಯ್ ಯಾದವ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್, ಮಯಾಂಕ್ ಮಾರ್ಕಂಡೆ

ಸನ್ ರೈಸರ್ಸ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಪ್ರಿಯಮ್ ಗಾರ್ಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್, ಟಿ ನಟರಾಜನ್

ಐಪಿಎಲ್‌ನಲ್ಲಿ ಮಿಂಚುತ್ತಿರುವ ಈ ಮೂವರಲ್ಲಿ ಟೀಮ್ ಇಂಡಿಯಾಗೆ ಯಾರು ಆಯ್ಕೆಯಾಗ್ತಾರೋ ನೋಡೋಣ ಎಂದ ಗಂಗೂಲಿಐಪಿಎಲ್‌ನಲ್ಲಿ ಮಿಂಚುತ್ತಿರುವ ಈ ಮೂವರಲ್ಲಿ ಟೀಮ್ ಇಂಡಿಯಾಗೆ ಯಾರು ಆಯ್ಕೆಯಾಗ್ತಾರೋ ನೋಡೋಣ ಎಂದ ಗಂಗೂಲಿ

ಡೆಲ್ಲಿ ವಿರುದ್ಧ ಹೀನಾಯವಾಗಿ ಸೋತ್ಮೇಲೆ ಪಂಜಾಬ್ ಕೋಚ್ ಅನಿಲ್ ಕುಂಬ್ಳೆಗೆ | Oneindia Kannada ಸಂಕಷ್ಟ

ಇನ್ನು ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳೂ ಸಹ ಈಗಾಗಲೇ ಪ್ಲೇಆಫ್ ಪ್ರವೇಶಿಸಲು ಇದ್ದ ಅವಕಾಶವನ್ನು ಸಂಪೂರ್ಣವಾಗಿ ಕಳೆದುಕೊಂಡಿವೆ ಹಾಗೂ ಈ ಪಂದ್ಯದ ಫಲಿತಾಂಶ ಪ್ಲೇಆಫ್ ಪ್ರವೇಶಿಸಲಿರುವ ಇತರೆ ತಂಡಗಳ ಮೇಲೂ ಸಹ ಯಾವುದೇ ಪರಿಣಾಮ ಬೀರದ ಕಾರಣ ಈ ಸೆಣಸಾಟ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದೇ ಹೇಳಬಹುದು. ಹೌದು, ಕೇನ್ ವಿಲಿಯಮ್ಸನ್ ಬಳಗ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು. 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಹೀಗಾಗಿ ಇನ್ನುಳಿದ ತನ್ನ ಎರಡೂ ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಜಯ ಸಾಧಿಸಿದರೂ ಸಹ ಪ್ಲೇಆಫ್ ಪ್ರವೇಶಿಸುವುದು ಅಸಾಧ್ಯವೆಂದೇ ಹೇಳಬಹುದು. ಇನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಬಾರಿ 12 ಪಂದ್ಯಗಳನ್ನಾಡಿದ್ದು 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಬರೋಬ್ಬರಿ 9 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡ ಎಂದು ಮುಂಬೈ ಇಂಡಿಯನ್ಸ್ ಕರೆಸಿಕೊಂಡಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, May 17, 2022, 19:07 [IST]
Other articles published on May 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X