Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2022: ಟೂರ್ನಿಯಲ್ಲಿ ನ್ಯೂಜಿಲೆಂಡ್ ಆಟಗಾರರು ಭಾಗವಹಿಸುತ್ತಾರಾ, ಇಲ್ಲವಾ?

IPL 2022: New Zealand players will be available for the entire tournament says Gary Stead

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಟೂರ್ನಿ ಮಾರ್ಚ್ ೨೬ರಿಂದ ಆರಂಭವಾಗುತ್ತಿದ್ದು, ಈ ಬಾರಿ ಟ್ರೋಫಿಗಾಗಿ ಹತ್ತು ತಂಡಗಳ ನಡುವೆ ಸೆಣಸಾಟ ನಡೆಯುವುದರಿಮಂದ ಸಾಕಷ್ಟು ವಿಶೇಷತೆಗಳಿಂದ ಕೂಡಿರಲಿದೆ. ಹೌದು, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ನೂತನ ಫ್ರಾಂಚೈಸಿಗಳಾಗಿ ಸೇರ್ಪಡೆಗೊಂಡಿದ್ದು, ಈ ಬಾರಿ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಗೆ ಕಾರಣವಾಗಿದೆ. ಹೀಗೆ ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಟೂರ್ನಿ ಯಾವಾಗ ಆರಂಭವಾಗಲಿದೆ, ಯಾವ ಕ್ರೀಡಾಂಗಣಗಳಲ್ಲಿ ನಡೆಯಲಿವೆ ಎಂಬ ಪ್ರಶ್ನೆಗಳು ಎದ್ದಿದ್ದವು. ಈ ಎಲ್ಲಾ ಪ್ರಶ್ನೆಗಳಿಗೆ ನಿನ್ನೆಯಷ್ಟೇ ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ಉತ್ತರ ನೀಡಿದ್ದು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ೧೦ ತಂಡಗಳು ಸೆಣಸಾಟ ನಡೆಸುವುದರಿಂದ ತಂಡಗಳನ್ನು ಎರಡು ಭಾಗಗಳಾಗಿ ವಿಭಜಿಸಲಾಗಿದ್ದು, ಎ ಹಾಗೂ ಬಿ ಗುಂಪುಗಳೆಂದು ಹೆಸರಿಡಲಾಗಿದೆ. ಗ್ರೂಪ್ 'ಎ'ನಲ್ಲಿ ಕೋಲ್ಕತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ರಾಜಸ್ತಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೊಸ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದರೆ, ಗ್ರೂಪ್ 'ಬಿ'ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳಿವೆ.

ಹೀಗೆ ಟೂರ್ನಿಯ ಲೀಗ್ ಹಂತಗಳ ಪಂದ್ಯಗಳು ಪ್ರಕಟವಾಗಿದ್ದು, ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡದ ಕ್ರಿಕೆಟಿಗರು ಭಾಗವಹಿಸುತ್ತಾರಾ ಅಥವಾ ಇಲ್ಲವಾ ಎಂಬ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ. ಹೌದು, ಈ ಬಾರಿಯ ಐಪಿಎಲ್ ಟೂರ್ನಿ ಆರಂಭವಾಗುವ ಸಮಯದಲ್ಲಿ ನ್ಯೂಜಿಲೆಂಡ್ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳ ನಡುವೆ ಒಂದು ಟಿ ಟ್ವೆಂಟಿ ಪಂದ್ಯ ಮತ್ತು ೩ ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಹೀಗಾಗಿ ಐಪಿಎಲ್ ಟೂರ್ನಿ ಆರಂಭದ ಕೆಲ ಪಂದ್ಯಗಳಲ್ಲಿ ಕೇನ್ ವಿಲಿಯಮ್ಸನ್ ಸೇರಿದಂತೆ ನ್ಯೂಜಿಲೆಂಡ್ ತಂಡದ ಹಲವಾರು ಆಟಗಾರರು ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ಈ ಎಲ್ಲಾ ಅನುಮಾನಗಳಿಗೂ ನ್ಯೂಜಿಲೆಂಡ್ ಕೋಚ್ ಗ್ಯಾರಿ ಸ್ಟೆಡ್ ತೆರೆ ಎಳೆದಿದ್ದು ನ್ಯೂಜಿಲೆಂಡ್ ತಂಡದ ಆಟಗಾರರು ಟೂರ್ನಿ ಪೂರ್ತಿ ಭಾಗವಹಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಲಭ್ಯತೆಯ ಬಗ್ಗೆ ಉಂಟಾಗಿದ್ದ ಗೊಂದಲ ಕೊನೆಗೊಂಡಿದೆ. ಇನ್ನು ಇದೇ ತಿಂಗಳು ನೆದರ್ಲ್ಯಾಂಡ್ಸ್ ಕೈಗೊಳ್ಳಲಿದ್ದು ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳ ನಡುವೆ ಮೊದಲಿಗೆ ಒಂದು ಟಿ ಟ್ವೆಂಟಿ ಪಂದ್ಯ ಮಾರ್ಚ್ ೨೫ರಂದು ನಡೆಯಲಿದ್ದು, ನಂತರ ಮೂರು ಏಕದಿನ ಪಂದ್ಯಗಳು ಮಾರ್ಚ್ ೨೯, ಏಪ್ರಿಲ್ ೨ ಮತ್ತು ಏಪ್ರಿಲ್ ೪ರಂದು ಕ್ರಮವಾಗಿ ಜರುಗಲಿವೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ: ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯನ್ ಅಬ್ಬಾಟ್, ರೊಮಾರಿಯನ್ ಅಬ್ಬಾಟ್ , ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ

Story first published: Tuesday, March 8, 2022, 10:00 [IST]
Other articles published on Mar 8, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+