ಬಾಲಿವುಡ್‌ಗೆ ಎಂಟ್ರಿ ಕೊಟ್ಟ ಗಬ್ಬರ್: ಪ್ರಮುಖ ಪಾತ್ರದಲ್ಲಿ ಶಿಖರ್ ಧವನ್ ನಟನೆ

ಐಪಿಎಲ್ 2022ರ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಓಪನಿಂಗ್ ಬ್ಯಾಟರ್ ಶಿಖರ್ ಧವನ್ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಕ್ರಿಕೆಟ್ ವಲಯದಲ್ಲಿ ಗಬ್ಬರ್ ಖ್ಯಾತಿಯ ಶಿಖರ್ ಹಿಂದಿ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಪುಷ್ಪ ಸಿನಿಮಾದ ವೈರಲ್ ಸ್ಟೆಪ್ ಅನ್ನು ರೀಲ್ಸ್ ಮಾಡಿ ಸುದ್ದಿಯಾಗಿದ್ದ ಶಿಖರ್ ಧವನ್ ಆಗಾಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಟ್ರೆಂಡಿಂಗ್ ವೀಡಿಯೋ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆದ್ರೀಗ ಪಿಂಕ್‌ವಿಲ್ಲಾ ವರದಿಯ ಪ್ರಕಾರ ಶಿಖರ್ ಧವನ್ ಹಿಂದಿ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಈಗಾಗಲೇ ನಟಿಸಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರ ಇದೇ ವರ್ಷ ತೆರೆಕಾಣಲಿದೆ ಎನ್ನಲಾಗಿದೆ.

ಈಗಾಗಲೇ ಶೂಟಿಂಗ್ ಮುಗಿಸಿರುವ ಶಿಖರ್ ಧವನ್ ಈ ಕುರಿತಾಗಿ ಎಲ್ಲಿಯೂ ಬಾಯ್ಬಿಟ್ಟಿಲ್ಲ. ಆದ್ರೆ ಯಾವುದೇ ಚಿಕ್ಕ ಮಾಡದೆ, ಪ್ರಮುಖ ಪಾತ್ರದಲ್ಲಿ ನಟಿಸಿರುವುದು ದೃಢವಾಗಿದೆ.
ಐಪಿಎಲ್ 2022ರಲ್ಲಿ ನಾಲ್ಕನೇ ಅತಿ ಹೆಚ್ಚು ರನ್‌ಗಳಿಸಿರುವ ಆಟಗಾರನಾಗಿರುವ ಶಿಖರ್ ನಾಲ್ಕನೇ ಅತಿ ಹೆಚ್ಚು ರನ್‌ಗಳಿಸಿರುವ ಆಟಗಾರನಾಗಿದ್ದಾನೆ. 13 ಪಂದ್ಯಗಳಲ್ಲಿ ಶಿಖರ್ 38.27ರ ಬ್ಯಾಟಿಂಗ್ ಸರಾಸರಿಯಲ್ಲಿ 421 ರನ್ ಕಲೆಹಾಕಿದ್ದಾರೆ.
ಪಂಜಾಬ್ ಕಿಂಗ್ ಪ್ರಸ್ತುತ ಪಾಯಿಂಟ್ಸ್ ಟೇಬಲ್‌ನಲ್ಲಿ ಏಳನೇ ಸ್ಥಾನ ಅಲಂಕರಿಸಿದ್ದು, ಪ್ಲೇ ಆಫ್ ತಲುಪುವುದು ಬಹುತೇಕ ಅಸಾಧ್ಯವಾಗಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 160 ರನ್ ಗುರಿ ಬೆನ್ನತ್ತಲಾಗದೆ 17ರನ್‌ಗಳಿಂದ ಸೋಲನ್ನ ಕಂಡಿದೆ.
ಇದರ ನಡುವೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿರಾಮ ತೆಗೆದುಕೊಳ್ಳುವ ನಿರ್ಧಾರದಿಂದ ಯು-ಟರ್ನ್ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಜೊತೆಗೆ ರೋಹಿತ್ ಕೂಡ ವಿಶ್ರಾಂತಿ ಪಡೆಯಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications