PBKS VS CSK: ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2022ರ ಸೀಸನ್‌ನ 38ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪರಿಣಾಮ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಬೇಕಿದೆ.
ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನೇ ಕಣಕ್ಕಿಳಿಸಲಾಗುತ್ತಿದ್ದು, ತಂಡದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಪಂಜಾಬ್ ಕಿಂಗ್ಸ್ ತಂಡದಲ್ಲಿ ಮೂವರು ಆಟಗಾರರ ಬದಲಾವಣೆ ಆಗಿದ್ದು, ಶಾರುಖ್, ಎಲ್ಲಿಸ್ ಮತ್ತು ಅರೋರಾ ತಂಡದಿಂದ ಹೊರಬಿದ್ದಿದ್ದು, ರಾಜಪಕ್ಷೆ, ಸಂದೀಪ್ ಶರ್ಮಾ ಮತ್ತು ರಿಷಿ ಧವನ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ.
ಚೆನ್ನೈ ಆಡಿರುವ ಏಳು ಕೇವಲ ಎರಡು ಪಂದ್ಯ ಗೆದ್ದಿದ್ದು, ಐದು ಪಂದ್ಯಗಳನ್ನ ಸೋತಿದೆ. ಪಾಯಿಂಟ್ಸ್ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿರುವ ಚೆನ್ನೈ ಪ್ಲೇ ಆಫ್ ಜೀವಂತವಾಗಿರಿಸಿಕೊಳ್ಳಲು ಪ್ರತಿ ಪಂದ್ಯಗಳನ್ನು ಗೆಲ್ಲಬೇಕಿದೆ.
ಇನ್ನು ಪಾಯಿಂಟ್ಸ್ ಟೇಬಲ್‌ನಲ್ಲಿ 8ನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ಆಡಿರುವ 7 ಪಂದ್ಯಗಳಲ್ಲಿ 3 ಗೆಲುವು ಮತ್ತು 4 ಸೋಲನ್ನ ಕಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂಬುದನ್ನ ಈ ಕೆಳಗೆ ನೀಡಲಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್
ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಶಿವಂ ದುಬೆ, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್ , ಡ್ವೈನ್ ಪ್ರಿಟೋರಿಯಸ್, ಮುಖೇಶ್ ಚೌಧರಿ, ಮಹೀಶ್ ತೀಕ್ಷಣ
ಪಂಜಾಬ್ ಕಿಂಗ್ಸ್
ಮಯಾಂಕ್ ಅಗರ್ವಾಲ್(ನಾಯಕ), ಶಿಖರ್ ಧವನ್, ಜಾನಿ ಬೈಸ್ಟ್ರೋವ್(ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಷೆ, ಜಿತೇಶ್ ಶರ್ಮಾ, ರಿಷಿ ಧವನ್, ಅರ್ಷ್‌ದೀಪ್ ಸಿಂಗ್, ಕಗಿಸೊ ರಬಾಡ, ರಾಹುಲ್ ಚಾಹರ್, ಸಂದೀಪ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications