For Quick Alerts
ALLOW NOTIFICATIONS  
For Daily Alerts
 

DC vs PBKS Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022: PBKS vs DC Preview, Predicted Playing 11, Pitch Report, And Weather Forecast

15ನೇ ಆವೃತ್ತಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಬುಧವಾರ ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಆಯೋಜನೆಯಾಗಬೇಕಿದ್ದ ಈ ಪಂದ್ಯವನ್ನು ಕೊರೊನಾವೈರಸ್‌ನ ಕಾರಣದಿಂದಾಗಿ ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿಯ ಟೂರ್ನಿಯಲ್ಲಿ ಎರಡು ತಂಡಗಳು ಕೂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ಸದ್ಯ ಪಂಜಾಬ್ ಕಿಂಗ್ಸ್ 7ನೇ ಸ್ಥಾನದಲ್ಲಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ 8ನೇ ಸ್ಥಾನದಲ್ಲಿದೆ.

ಈ ಹಿಂದಿನ ಎರಡು ಐಪಿಎಲ್ ಆವೃತ್ತಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೇಲೆ ಈ ಬಾರಿಯ ಆವೃತ್ತಿಯಲ್ಲಿ ಭಾರೀ ನಿರೀಕ್ಷೆಯಿತ್ತು. ಆದರೆ ಆರಂಭಿಕ ಹಂತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಈ ನಿರೀಕ್ಷೆಯನ್ನು ತಲುಪುವಲ್ಲಿ ವಿಫಲವಾಗಿದೆ. ಆಡಿರುವ ಐದು ಪಂದ್ಯಗಳಲ್ಲಿ ಡಿಸಿ ಗೆದ್ದಿರುವುದು ಕೇವಲ 2 ಪಂದ್ಯಗಳನ್ನು ಮಾತ್ರ. ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡ 6 ಪಂದ್ಯಗಳನ್ನು ಆಡಿದ್ದು ಮೂರು ಗೆಲುವು ಮೂರು ಸೋಲು ಅನುಭವಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಕೆಲ ಪ್ರಮುಖ ಮಾಹಿತಿಗಳು ಇಲ್ಲಿದೆ.

ಸ್ಕ್ವಾಡ್‌ಗಳು: ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

IPL 2022: PBKS vs DC Preview, Predicted Playing 11, Pitch Report, And Weather Forecast

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 20 ರಂದು ಬುಧವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್‌ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ನಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿನ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.

ಸಂಭಾವ್ಯ ಆಡುವ ಬಳಗ: ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಯಶ್ ಧುಲ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಒಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಷ್‌ದೀಪ್ ಸಿಂಗ್

Story first published: Tuesday, April 19, 2022, 18:45 [IST]
Other articles published on Apr 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+