PBKS vs GT : ಪಂಜಾಬ್ ಕಿಂಗ್ಸ್ ಆರ್ಭಟಕ್ಕೆ ಸಂಪೂರ್ಣ ಶರಣಾದ ಬಲಿಷ್ಠ ಗುಜರಾತ್ ಟೈಟನ್ಸ್!

ಐಪಿಎಲ್‌ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟೂರ್ನಿಯ ಅಗ್ರ ಶ್ರೇಯಾಂಕಿತ ಗುಜರಾತ್ ಟೈಟನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡ ಭರ್ಜರಿಯಾಗಿ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯುದ್ದಕ್ಕೂ ಎಲ್ಲಾ ತಂಡಗಳ ವಿರುದ್ಧ ಮೇಲುಗೈ ಸಾಧಿಸಿರುವ ಗುಜರಾತ್ ಟೈಟನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಯಾವುದೇ ವಿಭಾಗದಲ್ಲಿಯೂ ಪ್ರತಿರೋಧವೊಡ್ಡದೆ ಸೋಲು ಕಂಡಿದೆ. ಈ ಮೂಲಕ ಗುಜರಾತ್ ಟೂರ್ನಿಯಲ್ಲಿ ಎರಡನೇ ಸೋಲು ಅನುಭವಿಸಿದ್ದರೆ ಪಂಜಾಬ್ ಕಿಂಗ್ಸ್ ತಂಡ ಅತ್ಯಂತ ಪ್ರಮುಖ ಗೆಲುವು ಸಂಪಾದಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿತು. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ ಟೈಟನ್ಸ್ ತಂಡ 143 ರನ್‌ಗಳನ್ನು ಮಾತ್ರವೇ ಗಳಿಸಲು ಯಶಸ್ವಿಯಾಗಿತ್ತು. ಹೀಗಾಗಿ 144 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭಿಕ ಆಘಾತವನ್ನು ಅನುಭವಿಸಿದರೂ ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಕಢವಲ 16 ಓವರ್‌ಗಳಲ್ಲಿ ಈ ಮೊತ್ತವನ್ನು ಮೀರಿ ನಿಂತಿದೆ ಪಂಜಾಬ್ ಕಿಂಗ್ಸ್ ತಂಡ.
ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅದ್ಭುತವಾಗಿ ಪ್ರದರ್ಶನ ನೀಡಿಕೊಂಡು ಬಂದಿರುವ ಗುಜರಾತ್ ಟೈಟನ್ಸ್ ತಂಡಕ್ಕೆ ಪಂಜಾಬ್ ಕಿಂಗ್ಸ್ ಬೌಲರ್‌ಗಳು ಸವಾಲಾಗಿದ್ದಾರೆ. ಮಂಗಳವಾರ ನಡೆದ ಈ ಎರಡು ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡದ ಬ್ಯಾಟಿಂಗ್ ಪಡೆಯನ್ನು 143 ರನ್‌ಗಳಿಗೆ ನಿಯಂತ್ರಿಸುವಲ್ಲಿ ಪಂಜಾಬ್ ಕಿಂಗ್ಸ್ ಬೌಲರ್‌ಗಳು ಯಶಸ್ವಿಯಾದರು. ಅದರಲ್ಲೂ ಕಗಿಸೋ ರಬಾಡ 4 ವಿಕೆಟ್ ಕಬಳಿಸುವ ಮೂಲಕ ಟೈಟನ್ಸ್ ತಂಡಕ್ಕೆ ದೊಡ್ಡ ಆಘಾತ ನೀಡಿದರು.
ಈ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಪಂಜಾಬ್ ಕಿಂಗ್ಸ್ ಪರವಾಗಿ ಜಾನಿ ಬೈರ್‌ಸ್ಟೋವ್ 1 ರನ್‌ಗೆ ವಿಕೆಟ್ ಕಳೆದುಕೊಂಡರು. ಆದರೆ ಎರಡನೇ ವಿಕೆಟ್‌ಗೆ ಶಿಖರ್ ಧವನ್ ಹಾಗೂ ರಾಜಪಕ್ಷ 87 ರನ್‌ಗಳ ಜೊತೆಯಾಟ ನಿಡುವ ಮೂಲಕ ಗೆಲುವಿನ ಸನಿಹ ತಂದಿಟ್ಟರು. ನಂತರ 40 ರನ್‌ಗಳಿಸಿ ರಾಜಪಕ್ಷೆ ವಿಕೆಟ್ ಕಳೆದುಕೊಂಡ ಬಳಿಕ ಕಣಕ್ಕಿಳಿದ ಲಿಯಾಮ್ ಲಿವಿಂಗ್ಸ್ಟನ್ ಕೇವಲ 10 ಎಸೆತಗಳಲ್ಲಿ 30 ರನ್ ಸಿಡಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ ಇನ್ನೂ 4 ಓವರ್‌ಗಳು ಬಾಕಿಯಿರುವಂತೆಯೇ 8 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಲು ಸಾಧ್ಯವಾಗಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಅಜೇಯ 62 ರನ್‌ಗಳಿಸಿ ಮಿಂಚಿದ್ದಾರೆ.
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ
ಬೆಂಚ್: ಮ್ಯಾಥ್ಯೂ ವೇಡ್, ವರುಣ್ ಆರೋನ್, ಜಯಂತ್ ಯಾದವ್, ವಿಜಯ್ ಶಂಕರ್, ಗುರುಕೀರತ್ ಸಿಂಗ್ ಮಾನ್, ಅಭಿನವ್ ಮನೋಹರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ
ಬೆಂಚ್: ಬೆನ್ನಿ ಹೋವೆಲ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಶಾರುಖ್ ಖಾನ್, ಪ್ರೇರಕ್ ಮಂಕಡ್, ಓಡಿಯನ್ ಸ್ಮಿತ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭುಸಿಮ್ರಾನ್ ಸಿಂಗ್, ಹರ್ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ವೈಭವ್ ಅರೋರಾ, ಅನ್ಶ್ ಪಟೇಲ್, ರಾಜ್ ಬಾವಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications