For Quick Alerts
ALLOW NOTIFICATIONS  
For Daily Alerts
 

GT vs PBKS: ಈ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟಿದ್ದಾರೆ ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್

IPL 2022, PBKS vs GT: Players records and approaching milestones

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 48ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಡಾ ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂಜಾಬ್ ಕಿಂಗ್ಸ್ ಪ್ಲೇ ಆಫ್ ಪ್ರವೇಶಿಸುವ ತನ್ನ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಇನ್ನು ಈಗಾಗಲೇ ಪ್ಲೇ ಆಫ್ ಪ್ರವೇಶಿಸುವುದನ್ನು ಖಚಿತಪಡಿಸಿಕೊಂಡಿರುವ ಗುಜರಾತ್ ಟೈಟನ್ಸ್ ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಯೋಜನೆಯಲ್ಲಿದೆ.

ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ 9 ಪಂದ್ಯಗಳನ್ನಾಡಿದ್ದು 4 ಪಂದ್ಯಗಳಲ್ಲಿ ಗೆದ್ದು ಉಳಿದ 5 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದು ಈ ಪಂದ್ಯದಲ್ಲಿ ಗೆದ್ದರೆ ಏರಿಕೆ ಕಾಣಲಿದೆ. ಇನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಗೆದ್ದು ಉಳಿದ 1 ಪಂದ್ಯದಲ್ಲಿ ಸೋತು 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತಂಡಗಳ ನಡುವಿನ ಈ ಪಂದ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೆಚ್ಚು ಮುಖ್ಯವಾಗಿದ್ದು, ಇತ್ತಂಡಗಳ ಕೆಲ ಆಟಗಾರರು ಈ ಪಂದ್ಯದಲ್ಲಿ ವೈಯಕ್ತಿಕ ದಾಖಲೆಗಳ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಹೀಗೆ ಆಟಗಾರರು ಈ ಪಂದ್ಯದಲ್ಲಿ ಮುಟ್ಟಬಹುದಾದ ಮೈಲಿಗಲ್ಲುಗಳ ವಿವರ ಈ ಕೆಳಕಂಡಂತಿದೆ.

* ಗುಜರಾತ್ ಟೈಟನ್ಸ್ ತಂಡದ ನಾಯಕ ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ ಈಗಾಗಲೇ 99 ಕ್ಯಾಚ್ ಹಿಡಿದಿದ್ದು 100 ಕ್ಯಾಚ್ ಮೈಲಿಗಲ್ಲನ್ನು ಮುಟ್ಟಲು ಈ ಪಂದ್ಯದಲ್ಲಿ ಒಂದು ಕ್ಯಾಚ್ ಹಿಡಿಯಬೇಕಾದ ಅಗತ್ಯವಿದೆ.

* ವೃದ್ಧಿಮಾನ್ ಸಹಾ ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ 349 ಬೌಂಡರಿಗಳನ್ನು ಬಾರಿಸಿದ್ದು 350 ಬೌಂಡರಿಗಳ ಮೈಲಿಗಲ್ಲನ್ನು ಮುಟ್ಟಲು ಈ ಪಂದ್ಯದಲ್ಲಿ ಇನ್ನೊಂದು ಬೌಂಡರಿ ಬಾರಿಸಬೇಕಿದೆ.

* ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೂ ಒಟ್ಟು 147 ಸಿಕ್ಸರ್ ಬಾರಿಸಿರುವ ಮಯಾಂಕ್ ಅಗರ್ವಾಲ್ 150 ಸಿಕ್ಸರ್ ಮೈಲಿಗಲ್ಲನ್ನು ಮುಟ್ಟಲು ಇನ್ನೂ 3 ಸಿಕ್ಸರ್ ಬಾರಿಸಬೇಕಾದ ಅಗತ್ಯವಿದೆ.

* ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದರೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 50 ವಿಕೆಟ್ ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಹಾರ್ದಿಕ್ ಪಾಂಡ್ಯ ಈ ಮೈಲಿಗಲ್ಲನ್ನು ಮುಟ್ಟಿದರೆ ಐಪಿಎಲ್‌ನಲ್ಲಿ 1000ಕ್ಕೂ ಹೆಚ್ಚು ರನ್ ಮತ್ತು 50ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ ಐದನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ದಾಖಲೆಯನ್ನು ಈಗಾಗಲೇ ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಇರ್ಫನ್ ಪಠಾಣ್ ಮತ್ತು ಕೃನಾಲ್ ಪಾಂಡ್ಯ ಮಾಡಿದ್ದಾರೆ.

ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಜಾನಿ ಬೈರ್‌ಸ್ಟೋವ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಸಂದೀಪ್ ಶರ್ಮಾ, ಅರ್ಶ್‌ದೀಪ್ ಸಿಂಗ್

ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ ಬಳಗ: ಶುಭ್‌ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ಯಶ್ ದಯಾಲ್

Story first published: Tuesday, May 3, 2022, 14:54 [IST]
Other articles published on May 3, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+